ಬೆಂಗಳೂರು:
2025-26ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನ ಮತ್ತು ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಕೆಗೆ ಜುಲೈ 31 ಕೊನೆಯ ದಿನವಾಗಿತ್ತು.
ಈಗ ಅವಧಿಯನ್ನು ಅಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ. ಅರ್ಹ ಕ್ರೀಡಾಪಟುಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ಕೋರಿದ್ದಾರೆ.