Eyes on the Belgaum in-charge!
ಬೆಳಗಾವಿ: ರಾಜ್ಯ ಸಚಿವ ಸಂಪುಟ ಪುನಾರಚನೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇಮಕಾತಿ ಚರ್ಚೆಗಳು ವೇಗ ಪಡೆದಿರುವ ಬೆನ್ನಲ್ಲೆ, ಸಚಿವ ಸ್ಥಾನದ ಜತೆಗೆ ಬೆಳಗಾವಿ ಉಸ್ತುವಾರಿ ಜವಾಬ್ದಾರಿಗಾಗಿ ಕಾಂಗ್ರೆಸ್ ಹಿರಿಯ ಶಾಸಕರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ರಾಜಕೀಯ ಶಕ್ತಿ ಕೇಂದ್ರವಾಗಿರುವ ಬೆಳಗಾವಿ ಜಿಲ್ಲೆ ಉಸ್ತುವಾರಿ ಹೊಣೆಗಾರಿಕೆಗೆ ಹೆಚ್ಚಿನ ಮಹತ್ವವಿದೆ. ಹೀಗಾಗಿ, ಯಾವುದೇ ಖಾತೆ ಕೊಟ್ಟರೂ ಪರವಾಗಿಲ್ಲ. ಬೆಳಗಾವಿ ಉಸ್ತುವಾರಿ ವಹಿಸಿಕೊಳ್ಳಲು ಹಲವು ನಾಯಕರು ಆಸಕ್ತಿ ವ್ಯಕ್ತಪಡಿಸಿದ್ದಾರೆ.
ಹದಿನೆಂಟು ವಿಧಾನಸಭಾ, 3 ಲೋಕಸಭಾ ೇತ್ರ ಹಾಗೂ 4 ವಿಧಾನ ಪರಿಷತ್ ಸದಸ್ಯರ ಪ್ರಾತಿನಿಧ್ಯ ಇರುವುದರಿಂದ ಜಿಲ್ಲಾ ಉಸ್ತುವಾರಿ ಹುದ್ದೆಗೆ ವಿಶೇಷ ರಾಜಕೀಯ ಪ್ರಭಾವವಿದೆ. ಕಳೆದ ಒಂದೂವರೆ ದಶಕದಲ್ಲಿ ರಾಜ್ಯದಲ್ಲಿ ಯಾವುದೇ ಪಕ್ಷದ ಸರ್ಕಾರವಿದ್ದರೂ ಉಸ್ತುವಾರಿ ಸ್ಥಾನ ಜಾರಕಿಹೊಳಿ ಕುಟುಂಬದಲ್ಲೇ ಉಳಿದಿದೆ. ಹೀಗಾಗಿ, ಸಚಿವ ಸ್ಥಾನದ ಜತೆಗೆ ಉಸ್ತುವಾರಿ ಜವಾಬ್ದಾರಿ ನೀಡಲು ಕಾಂಗ್ರೆಸ್ ಹಿರಿಯ ಶಾಸಕರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ರ್ಖಗೆ ಸೇರಿ ಪಕ್ಷರ ವರಿಷ್ಠರ ಮುಂದೆ ಬೇಡಿಕೆ ಇಟ್ಟಿದ್ದಾರೆ. ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಒಂದೂವರೆ ದಶಕದಲ್ಲಿ ಜಾರಕಿಹೊಳಿ ಕುಟುಂಬ ಹೊರತುಪಡಿಸಿದರೆ ಜಿಲ್ಲೆಯ ಹೊರಗಿನವರಾದ ಗೋವಿಂದ ಕಾರಜೋಳ, ಜಗದೀಶ ಶೆಟ್ಟರ, ಬಸವರಾಜ ಬೊಮ್ಮಾಯಿ ಅವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿತ್ತು. ಸಚಿವರಾಗುವುದು ಎಷ್ಟು ಮುಖ್ಯವೋ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡುವುದು ಅಷ್ಟೇ ಮಹತ್ವದ್ದಾಗಿದೆ. ಸಣ್ಣ ಖಾತೆ ಕೊಟ್ಟರೂ ಪರವಾಗಿಲ್ಲ. ಒಮ್ಮೆಯಾದರೂ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣದ ಹೊಣೆ ಜತೆಗೆ ಉಸ್ತುವಾರಿ ಪಟ್ಟ ವಹಿಸಿಕೊಳ್ಳಬೇಕು ಎಂಬುದು ಹಿರಿಯ ಶಾಸಕರ ಮನದಾಸೆಯಾಗಿದೆ.
ಬೆಳಗಾವಿ ಜಿಲ್ಲೆಗೆ ಕನಿಷ್ಠ ಮೂರು ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆ ಇದೆ. ಮಹಾಂತೇಶ ಕೌಜಲಗಿ, ಅಶೋಕ ಪಟ್ಟಣ, ಲಕ್ಷ$್ಮಣ ಸವದಿ, ಗಣೇಶ ಹುಕ್ಕೇರಿ, ಲಕ್ಷಿ$್ಮ ಹೆಬ್ಬಾಳ್ಕರ್ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಮುಂಬರುವ ಸ್ಥಳಿಯ ಸಂಸ್ಥೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಪಕ್ಷದಲ್ಲಿನ ಹಿರಿತನ ಆಧಾರದ ಮೇಲೆ ಇಬ್ಬರಿಗೆ ಅಥವಾ ಮೂವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.
ವಿಶೇಷ ಸ್ಥಾನಮಾನ
ಈ ಬಾರಿ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ವಂಚಿತರಾಗಿರುವ ಮತ್ತು ಮೊದಲ ಬಾರಿ ಆಯ್ಕೆಗೊಂಡಿರುವ ಶಾಸಕರಿಗೆ ವಿಶೇಷ ಸ್ಥಾನಮಾನ ನೀಡುವ ಜತೆಗೆ ಸ್ಥಳಿಯ ಮಟ್ಟದ ಪಕ್ಷ ಸಂಟನೆ ಜವಾಬ್ದಾರಿ ನೀಡುವ ಕುರಿತು ಚರ್ಚೆ ನಡೆದಿದೆ. ಅದರಲ್ಲಿ ಬೆಳಗಾವಿ ಜಿಲ್ಲೆಗೆ ಆದ್ಯತೆ ಸಿಗಲಿದೆ ಎಂದು ಕಾಂಗ್ರೆಸ್ ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ.
ಕಾಂಗ್ರೆಸ್ ಹಿರಿಯ ಶಾಸಕರ ನಡುವೆ ತೀವ್ರ ಪೈಪೋಟಿ