ಯಾದಗಿರಿ: ವಿಧಾನ ಪರಿಷತ್ ಸದಸ್ಯ ಡಾ.ಬಿ.ಜಿ.ಪಾಟೀಲ್ ಅಧಿವೇಶನದಲ್ಲಿ ಗಿರಿ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳ ಬಗ್ಗೆ ಕೇಳಿದ ಮೂರು ಪ್ರಶ್ನೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುರ್ಧಿ ಮೂರು ಪುಟದ ಉತ್ತರ ನೀಡಿದ್ದಾರೆ.
ಪ್ರಶ್ನೆ: ಜಿಲ್ಲೆಯ ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾರ್ಷಿಕ 25&30 ಬಾಲ್ಯವಿವಾಹ ಮತ್ತು ಪೋಕ್ಸೋ ಕೇಸ್ ದಾಖಲಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ?
ಉತ್ತರ: 2025ರ 14 ಬಾಲ್ಯವಿವಾಹ ನಡೆದಿದ್ದು, ಪ್ರತಿ ತಿಂಗಳು ಸರಾಸರಿ ಶೇ.1.68 ಬಾಲ್ಯವಿವಾಹ ಪ್ರಕರಣ ದಾಖಲಾಗಿವೆ.
ಪ್ರಶ್ನೆ: ಸಾಮಾಜಿಕ ಪಿಡುಗಿನಂತಹ ಈ ಅಪರಾಧಗಳನ್ನು ತಡೆಯುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆಯೇ?
ಉತ್ತರ: ಜಿಲ್ಲೆಯ 122 ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆ ಕರೆದು ಮಕ್ಕಳು, ಶಿಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆ &2006 ಮತ್ತು ಪೋಕ್ಸೋ ಕಾಯ್ದೆ 2012ರ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಲಾಗಿದೆ. ಜಿಲ್ಲೆಯ 32 ವಸತಿ ಶಾಲೆಗಳವರಿಗೂ ಸಮಗ್ರ ಮಾಹಿತಿ ನೀಡಲಾಗಿದೆ. ಜಿಲ್ಲಾಡಳಿತದಿಂದ ಜಾಗೃತಿ ಮೂಡಿಸುವ ತರಬೇತಿ ನೀಡಲಾಗುತ್ತಿದೆ. ಮಕ್ಕಳ ರಣಾ ನಿರ್ದೇಶನಾಲಯದಿಂದ ಕ್ರಿಯಾಯೋಜನೆ ರೂಪಿಸಿ ಡಿಸಿ ಮೂಲಕ ಸಂಬಂಧಿತ ಅಧಿಕಾರಿ ಮತ್ತು ಸಿಬ್ಬಂದಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ ಆಯೋಜಿಸಲು ಕ್ರಮ ವಹಿಸಲಾಗಿದೆ. ಪ್ರಕರಣಗಳ ಕುರಿತು ಪ್ರತಿ ತೆಮಾಸಿಕದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
ಪ್ರಶ್ನೆ: ಇಂತಹ ಅಪರಾಧ ತಡೆಯಲು, ಜಾಗೃತಿ ಮೂಡಿಸಲು ಮತ್ತು ಮಕ್ಕಳ ರಣೆಗಾಗಿ ಸರ್ಕಾರ ಯಾವ ಕ್ರಮ ಕೈಗೊಂಡಿದೆ?
ಉತ್ತರ: ಇಂತಹ ಅಪರಾಧ ತಡೆಯಲು ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ&2025) ಕಾಯ್ದೆ ಜಾರಿಗೆ ಕ್ರಮ ವಹಿಸಲಾಗುತ್ತಿದೆ. ಅಪ್ರಾಪ್ತರು ಗರ್ಭಿಣಿ ಆಗುವುದನ್ನು ತಡೆಯಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಾಮರ್ಥ್ಯಾಭಿವೃದ್ಧಿ ತರಬೇತಿ ನೀಡಲು ಯೋಜಿಸಲಾಗುತ್ತಿದೆ. ಮಕ್ಕಳ ಸಹಾಯವಾಣಿ&1098 ಕಾರ್ಯನಿರ್ವಹಿಸುತ್ತಿದೆ. ಕಷ್ಟಕ್ಕೆ ಸಿಲುಕುವ ಮಗುವಿಗೆ ತಣವೇ ಸ್ಪಂದಿಸಿ ರಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಿರುತ್ತಾರೆ. 2024ರ ಸೆ.6ರ ಆದೇಶದಂತೆ ಅಪ್ರಾಪ್ತ ಹೆಣ್ಣು ಮಕ್ಕಳು ಗರ್ಭಿಣಿಯರಾಗುವುದನ್ನು ತಡೆಗಟ್ಟಲು ವಿವಿಧ ಇಲಾಖೆಗಳಿಗೆ ಹೊಣೆಗಾರಿಕೆ ನಿಗದಿಪಡಿಸಲಾಗಿದೆ. ಗ್ರಾಪಂ ಮಟ್ಟದಲ್ಲಿ ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಕಾವಲು ಸಮಿತಿ ರಚಿಸಲಾಗಿದೆ. ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿ, ವಿಶೇಷ ಪೊಲೀಸ್ ಟಕ, ಮಕ್ಕಳ ಪಾಲನಾ ಸಂಸ್ಥೆ ಮತ್ತು ಜಿಲ್ಲಾ ಮಕ್ಕಳ ರಣಾ ಟಕಗಳು ಕಾರ್ಯನಿರ್ವಹಿಸುತ್ತಿವೆ.
ಮಹತ್ವದ ಯೋಜನೆಗಳು ಜಾರಿ
ಸಂತ್ರಸ್ತೆಗೆ ಆರೋಗ್ಯ ಸೇವೆ ಮತ್ತು ವೈದ್ಯಕಿಯ ತಪಾಸಣೆಗೆ ಒಂದು ಬಾರಿಗೆ 6,000 ರೂ. ಹಾಗೂ ಶಿಣ ಮುಂದುವರಿಸಲು ಇಚ್ಛಿಸಿದಲ್ಲಿ ಪ್ರಾಯೋಜಕತ್ವ ಯೋಜನೆಯಡಿ ತಿಂಗಳಿಗೆ 4,000 ರೂ.ಗಳಂತೆ 18 ವರ್ಷ ಪೂರ್ಣಗೊಳ್ಳುವವರೆಗೂ ಆರ್ಥಿಕ ಸೌಲಭ್ಯ ಒದಗಿಸಲಾಗುವುದು. ಪಿಎಂಜೆಎವೈ ಅಡಿ ವರ್ಷಕ್ಕೆ 5 ಲ ರೂ. ಆರೋಗ್ಯ ವಿಮೆಯನ್ನು ಸಂತ್ರಸ್ತೆ ಮತ್ತು ಅವಳ ನವಜಾತ ಶಿಶುವಿಗೆ ನೀಡಲಾಗುವುದು. ಬಾಲ್ಯವಿವಾಹ ಪ್ರಕರಣ ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಅಧ್ಯತೆಯಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಆಯಾ ತಹಸೀಲ್ದಾರರನ್ನು ಸಮನ್ವಯ ಮತ್ತು ಪರಿಶೀಲನಾ ಸಮಿತಿ ಅಧ್ಯರಾಗಿ ಸರ್ಕಾರ ನೇಮಿಸಿದೆ. ಬಾಲಗರ್ಭಿಣಿ ಪ್ರಕರಣ ಕಂಡುಬಂದಲ್ಲಿ ದೂರು ದಾಖಲಿಸಿ ಕ್ರಮ ವಹಿಸಲಾಗುತ್ತಿದೆ ಎಂದು ಎಂಎಲ್ಸಿ ಡಾ.ಬಿ.ಜಿ.ಪಾಟೀಲ್ ಪ್ರಶ್ನೆಗೆ ಸಚಿವೆ ಹೆಬ್ಬಾಳಕರ್ ಉತ್ತರ ನೀಡಿದ್ದಾರೆ.