ಬಸವಕಲ್ಯಾಣ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕವಾಗಿ ಲಭ್ಯವಿದ್ದು, ರೈತರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್​ ಭರವಸೆ ನೀಡಿದರು. ತಾಲೂಕಿನ ರಾಜೇಶ್ವರ ಹೋಬಳಿಯ ರೈತ ಸಂಪರ್ಕ ಕೇಂದ್ರದಿಂದ ರಾಜೇಶ್ವರದಲ್ಲಿ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಡಿಎಪಿ ರಸಗೊಬ್ಬರದ ಬದಲಾಗಿ ಇತರೆ ಸಂಯುಕ್ತ ರಸಗೊಬ್ಬರಗಳನ್ನು ಬಳಕೆ ಮಾಡುವಂತೆ ರೈತರಿಗೆ ಸಲಹೆ ನೀಡಿದರು. ಕೃಷಿ ಇಲಾಖೆಯ ವಿವಿಧ ಯೋಜನೆಗಳ ಸೌಲಭ್ಯ ಹಾಗೂ ಬ್ಯಾಂಕ್​ಗಳಲ್ಲಿ ದೊರೆಯುವ ಕೃಷಿ ಸಾಲಗಳ ಕುರಿತು ರೈತರಿಗೆ ಮಾಹಿತಿ ನೀಡಿದರು. ರೈತರು ಕೃಷಿ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಿ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಸಹಾಯಕ ಕೃಷಿ ನಿರ್ದೇಶಕ ಗೌತಮ ಪ್ರಾಸ್ತಾವಿಕ ಮಾತನಾಡಿದರು. ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಭೀಮಾಶಂಕರ ಮಾನಕರ ಸ್ವಾಗತಿಸಿ ನಿರೂಪಣೆ ಮಾಡಿದರು. ತಾಲೂಕು ತಾಂತ್ರಿಕ ಕೃಷ್ಣ ಪಾಟೀಲ್​, ನೀಲೇಶ್​ ಇತರರಿದ್ದರು 
ರಾಜ್ಯ

ರೈತರು ಆತಂಕ ಪಡುವ ಅಗತ್ಯವಿಲ್ಲ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್​ ಅಭಯ
  • ರಾಜೇಶ್ವರದಲ್ಲಿ ಬಿತ್ತನೆ ಬೀಜ ವಿತರಣೆಗೆ ಚಾಲನೆ
 ಬಸವಕಲ್ಯಾಣ: ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕವಾಗಿ ಲಭ್ಯವಿದ್ದು, ರೈತರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು  ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್​ ಭರವಸೆ ನೀಡಿದರು. 
ತಾಲೂಕಿನ ರಾಜೇಶ್ವರ ಹೋಬಳಿಯ ರೈತ ಸಂಪರ್ಕ ಕೇಂದ್ರದಿಂದ ರಾಜೇಶ್ವರದಲ್ಲಿ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಡಿಎಪಿ ರಸಗೊಬ್ಬರದ ಬದಲಾಗಿ ಇತರೆ ಸಂಯುಕ್ತ ರಸಗೊಬ್ಬರಗಳನ್ನು ಬಳಕೆ ಮಾಡುವಂತೆ ರೈತರಿಗೆ ಸಲಹೆ ನೀಡಿದರು.
 ಕೃಷಿ ಇಲಾಖೆಯ ವಿವಿಧ ಯೋಜನೆಗಳ ಸೌಲಭ್ಯ ಹಾಗೂ ಬ್ಯಾಂಕ್​ಗಳಲ್ಲಿ ದೊರೆಯುವ ಕೃಷಿ ಸಾಲಗಳ ಕುರಿತು ರೈತರಿಗೆ ಮಾಹಿತಿ ನೀಡಿದರು. ರೈತರು ಕೃಷಿ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಿ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
 ಸಹಾಯಕ ಕೃಷಿ ನಿರ್ದೇಶಕ ಗೌತಮ ಪ್ರಾಸ್ತಾವಿಕ ಮಾತನಾಡಿದರು. ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಭೀಮಾಶಂಕರ ಮಾನಕರ  ಸ್ವಾಗತಿಸಿ ನಿರೂಪಣೆ ಮಾಡಿದರು. ತಾಲೂಕು ತಾಂತ್ರಿಕ ಕೃಷ್ಣ ಪಾಟೀಲ್​, ನೀಲೇಶ್​ ಇತರರಿದ್ದರು