ಕಲಬುರಗಿ : ನಗರದ ಜೆಸ್ಕಾಂ (GESCOM) ಕಚೇರಿಯಲ್ಲಿ ಅಫಜಲಪುರ ತಾಲ್ಲೂಕಿನ ಹೇರೂರು ಮತ್ತು ಫರಹತಾಬಾದ್ ಗ್ರಾಮದ ರೈತರು ಇಂದು ಜೆಸ್ಕಾಂ ಅಧ್ಯಕ್ಷ ಪ್ರವೀಣಕುಮಾರ್ ಪಾಟೀಲ ಹರವಾಳ ಅವರನ್ನು ಭೇಟಿ ಮಾಡಿದರು.
ತಮ್ಮ ಭಾಗದಲ್ಲಿ ಸಮರ್ಪಕ ವಿದ್ಯುತ್ ಸರಬರಾಜಿಲ್ಲದೆ ಕೃಷಿ ಚಟುವಟಿಕೆಗಳಿಗೆ ಎದುರಾಗುತ್ತಿರುವ ಗಂಭೀರ ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಸಿದರು.
ರೈತರ ಕಷ್ಟಗಳನ್ನು ಆಲಿಸಿದ ಪಾಟೀಲ ಅವರು, ಸ್ಥಳದಲ್ಲೇ ಸಂಬಂಧಪಟ್ಟ ಉನ್ನತ ಅಧಿಕಾರಿಗಳನ್ನು ಕರೆಸಿ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿ "ನಮ್ಮ ಅನ್ನದಾತ ರೈತರ ಸಮಸ್ಯೆಗಳನ್ನು ಬಗೆಹರಿಸುವುದೇ ಜೆಸ್ಕಾಂ ಸಂಸ್ಥೆಯ ಪ್ರಥಮ ಆದ್ಯತೆಯಾಗಬೇಕು." ರೈತರ ಪಂಪ್‌ಸೆಟ್‌ಗಳಿಗೆ ಹಾಗೂ ಕೃಷಿ ಕಾರ್ಯಗಳಿಗೆ ಯಾವುದೇ ತಾಂತ್ರಿಕ ಅಡೆತಡೆಯಿಲ್ಲದೆ ಗುಣಮಟ್ಟದ ವಿದ್ಯುತ್ ಒದಗಿಸಲು ಸ್ಥಳದಲ್ಲೇ ತಕ್ಷಣದ ಪರಿಹಾರಗಳನ್ನು ಸೂಚಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಆದೇಶಿಸಿದರು.