ರೈತರಿಗೆ ಮಾರುಕಟ್ಟೆ ದರದಲ್ಲಿ ಸೂಕ್ತ ಪರಿಹಾರ ನೀಡಲಿ Farmers 
ರಾಜ್ಯ

ರೈತರಿಗೆ ಮಾರುಕಟ್ಟೆ ದರದಲ್ಲಿ ಸೂಕ್ತ ಪರಿಹಾರ ನೀಡಲಿ Farmers

ಬಂಗಾರಪೇಟೆ: ಪಟ್ಟಣಕ್ಕೆ ನಿಮಾರ್ಣವಾಗಲಿರುವ ಬೈಪಾಸ್​ ರಸ್ತೆ ಯೋಜನೆಯಿಂದ ರೈತರ ಕೃಷಿ ಭೂಮಿ ವಶಕ್ಕೆ ಪಡೆಯಲಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರೈತರಿಗೆ ಪ್ರಸ್ತುತ ಮಾರುಕಟ್ಟೆ ಬೆಲೆಯ ಆಧಾರದ ಮೇಲೆ ಸೂಕ್ತ ಪರಿಹಾರ ನೀಡಬೇಕು ಎಂದು ಕಾರಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ ಮತ್ತು ಮಾಜಿ ಸದಸ್ಯ ಅಮರೇಶ್​ ಒತ್ತಾಯಿಸಿದರು.Farmers
ತಾಲೂಕಿನ ಕಾರಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೈಪಾಸ್​ ರಸ್ತೆ ಯೋಜನೆ ಸಾರ್ವಜನಿಕರ ಹಿತದೃಷ್ಟಿಯಿಂದ ಉತ್ತಮ ಯೋಜನೆಯಾಗಿದೆ. ಪಟ್ಟಣದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಸಮಸ್ಯೆಗೆ ಇದು ಶಾಶ್ವತ ಪರಿಹಾರವಾಗಲಿದೆ. ಆದರೆ, ರಸ್ತೆ ನಿಮಾರ್ಣಕ್ಕಾಗಿ ರೈತರ ಜೀವನಾಡಿಯಾದ ಕೃಷಿ ಭೂಮಿಯನ್ನು ವಶಕ್ಕೆ ಪಡೆಯಲಾಗುತ್ತಿದೆ. ಬೆಳೆಗಳನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ರೈತರು ತಮ್ಮ ಜಮೀನು ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ಹೀಗಾಗಿ ಸರ್ಕಾರ ನಿಗದಿಪಡಿದ ಸಾಮಾನ್ಯ ಪರಿಹಾರ ದರ ಬದಲು ಮಾರುಕಟ್ಟೆ ಬೆಲೆಯಂತೆ ನ್ಯಾಯಸಮ್ಮತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ವಿಶೇಷ ಕಾಳಜಿ ವಹಿಸಬೇಕು. ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ತಂದು ರೈತರಿಗೆ ಸಮರ್ಪಕ ಪರಿಹಾರ ದೊರಕಿಸಿಕೊಡಬೇಕಾಗಿದೆ ಎಂದು ಹೇಳಿದರು.