ವಿದ್ಯುತ್ ಆಫ್ ಮಾಡಿ ಅನಾಹುತ ತಪ್ಪಿಸಿದ ವಿದ್ಯಾರ್ಥಿ 
ರಾಜ್ಯ

ವಿದ್ಯುತ್ ಆಫ್ ಮಾಡಿ ಅನಾಹುತ ತಪ್ಪಿಸಿದ ವಿದ್ಯಾರ್ಥಿ; ಸಿಎಂ ಶಹಬ್ಬಾಸ್ | Student Saves Woman; CM Praises

ಪ್ರಮುಖ ಮುಖ್ಯಾಂಶಗಳು

  • 5ನೇ ತರಗತಿ ಬಾಲಕನ ಸಮಯಪ್ರಜ್ಞೆಗೆ ಸಿಎಂ ಮೆಚ್ಚುಗೆ
  • ಬಾಲಕನ ದಿಟ್ಟ ನಡೆಗೆ ಅಡುಗೆ ಸಿಬ್ಬಂದಿಯ ಬೆರಳು ಬಚಾವ್​
  • ದಕ್ಷಿಣ ಕನ್ನಡ ಜಿಲ್ಲೆಯ ನರಿಕೊಂಬು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ
ಮಂಗಳೂರು: ಶಾಲೆಯ ಅಡುಗೆ ಸಿಬ್ಬಂದಿಯ ಬೆರಳು ಯಂತ್ರದಲ್ಲಿ ಸಿಲುಕಿದಾಗ, 5ನೇ ತರಗತಿ ಬಾಲಕನೊಬ್ಬ ಸಮಯಪ್ರಜ್ಞೆ ಮೆರೆದು ದೊಡ್ಡ ಅನಾಹುತ ತಪ್ಪಿಸಿದ್ದಾನೆ. ಬಾಲಕನ ಧೈರ್ಯ ಮತ್ತು ಜಾಗರೂಕತೆಗೆ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಘಟನೆ, ದಕ್ಷಿಣ ಕನ್ನಡ ಜಿಲ್ಲೆಯ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಧ್ಯಾಹ್ನದ ಊಟ ತಯಾರಿಸುವ ವೇಳೆ ಅಕ್ಷರ ದಾಸೋಹದ ಕೆಲಸ ಮಾಡುತ್ತಿದ್ದ ಮಹಿಳೆಯ ಬೆರಳು ಕೊಬ್ಬರಿ ತುರಿಯುವ ಯಂತ್ರದಲ್ಲಿ ಸಿಲುಕಿಕೊಂಡಿತ್ತು. ನೋವಿನಿಂದ ಅವರು ಸಹಾಯಕ್ಕಾಗಿ ಕಿರುಚಿಕೊಂಡಿದ್ದಾರೆ.

ಸಮಯಪ್ರಜ್ಞೆ ಮೆರೆದ ವಿದ್ಯಾರ್ಥಿ


ಈ ವೇಳೆ ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದ 5ನೇ ತರಗತಿ ವಿದ್ಯಾರ್ಥಿ ಮನ್ವಿತ್ ತಕ್ಷಣ ಸ್ಥಳಕ್ಕೆ ಓಡಿ ಬಂದಿದ್ದಾನೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಾಲಕ, ಗಾಬರಿಯಾಗದೆ ಯಂತ್ರದ ವಿದ್ಯುತ್ ಸಂಪರ್ಕವನ್ನು ಆಫ್ ಮಾಡಿದ್ದಾನೆ. ಇದರಿರಿಂದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾನೆ.
ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಮನ್ವಿತ್‌ನ ಕಾರ್ಯವನ್ನು ಶ್ಲಾಘಿಸಿದ್ದಾರೆ. ‘ತುರ್ತು ಸಂದರ್ಭದಲ್ಲಿ ಮನ್ವಿತ್ ತೋರಿದ ಜಾಗರೂಕತೆ, ಧೈರ್ಯ ಮತ್ತು ಸಮಯಪ್ರಜ್ಞೆ ಎಲ್ಲರಿಗೂ ಮಾದರಿಯಾಗಬೇಕು’ ಎಂದು ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಾಲಕನಿಗೆ ಉಜ್ವಲ ಭವಿಷ್ಯ ಸಿಗಲಿ. ಮುಂದೆ ಸಮಾಜದ ಅಗತ್ಯಗಳಿಗೆ ಸ್ಪಂದಿಸುವ ಜವಾಬ್ದಾರಿಯುತ ನಾಗರಿಕನಾಗಿ ಬೆಳೆದು ರಾಜ್ಯಕ್ಕೆ ಹೆಮ್ಮೆ ತರಲಿ ಎಂದು ಅವರು ಹಾರೈಸಿದ್ದಾರೆ.