ಮದ್ದೂರಿನಲ್ಲಿರುವ ಖಾಸಗಿ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದು. 
ರಾಜ್ಯ

ಗಾರ್ಮೆಂಟ್ಸ್‌ನಲ್ಲಿ ಅಗ್ನಿ ಅವಘಡ

ಅಭಿನಯ್ ಎಚ್.ಎಂ

ಪ್ರಮುಖ ಮುಖ್ಯಾಂಶಗಳು

  • ಮಳವಳ್ಳಿ ರಸ್ತೆಯಲ್ಲಿರುವ ಖಾಸಗಿ ಗಾರ್ಮೆಂಟ್ಸ್ ಕಾರ್ಖಾನೆ
  • ಭಾರಿ ಅಗ್ನಿ ಅವಘಡ

ಮದ್ದೂರು: ನಗರದ ಮಳವಳ್ಳಿ ರಸ್ತೆಯಲ್ಲಿರುವ ಖಾಸಗಿ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಗುರುವಾರ ಮುಂಜಾನೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಎಂದಿನಂತೆ ಕಾರ್ಮಿಕರು ಕೆಲಸಕ್ಕೆ ಆಗಮಿಸಿದಾಗ ಕಾರ್ಖಾನೆಯಲ್ಲಿ ಬೆಂಕಿ ಆವರಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಮೂರಕ್ಕೂ ಹೆಚ್ಚು ವಾಹನಗಳಲ್ಲಿ ದೌಡಾಯಿಸಿ, ಬೆಂಕಿ ನಂದಿಸಿದರು. ಕಾರ್ಖಾನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಬೆಂಕಿಯ ತೀವ್ರತೆಗೆ ಸುಟ್ಟು ಭಸ್ಮವಾಗಿವೆ.
ಘಟನೆಯಿಂದಾಗಿ ಕೋಟ್ಯಂತರ ರೂ.ನಷ್ಟ ಸಂಭವಿಸಿದೆ ಎನ್ನಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮೊದಲು ನಗರ ಸಮೀಪದ ಸೋಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿದ್ದ ಗಾರ್ಮೆಂಟ್ಸ್ ಇತ್ತೀಚೆಗೆ ಮದ್ದೂರು ನಗರಕ್ಕೆ ಸ್ಥಳಾಂತರಗೊಂಡಿತ್ತು.