Sasvehalli  
ರಾಜ್ಯ

ಈಶ್ವರನ ಫ್ಲೆಕ್ಸಿಗೆ ಬೆಂಕಿ: ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ!

ದಾವಣಗೆರೆ: ಹೊನ್ನಾಳಿ ತಾಲೂಕು ಸಾಸ್ವೆಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈಶ್ವರನ ಫ್ಲೆಕ್ಸಿಗೆ ಬೆಂಕಿ ಹಚ್ಚಲಾಗಿದ್ದ ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿತ್ತು. ಸ್ಥಳಕ್ಕೆ ಧಾವಿಸಿದ ಹೊನ್ನಾಳಿ ಪೊಲೀಸರು ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ತಡೆದರು.
ಗ್ರಾಮದ ಶ್ರೀ ಕಲ್ಲೇಶ್ವರ ಸ್ವಾಮಿಯ ಕಾರ್ತಿಕ ದೀಪೋತ್ಸವದ ಅಂಗವಾಗಿ ಈಶ್ವರನ ಭಾವಚಿತ್ರದ ಫ್ಲೆಕ್ಸ್ ಹಾಕಲಾಗಿತ್ತು. ತಡರಾತ್ರಿ ಯಾರು ಇಲ್ಲ ಸಮಯದ ವೇಳೆ ಫ್ಲೆಕ್ಸ್​ಗೆ ಬೆಂಕಿ ಹಚ್ಚಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಹೀಲ್ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆ ಫ್ಲೆಕ್ಸ್ ಪಕ್ಕದಲ್ಲಿ ಹಾಕಿದ್ದ ಅನ್ಯ ಕೋಮಿನ ಧ್ವಜ ಸ್ತಂಭವನ್ನು ತೆರವುಗೊಳಸಲಾಯಿತು. ಸ್ಥಳಕ್ಕೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಭೇಟಿ ನೀಡಿದ್ದರು.