ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ಹಾವೇರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ವಿಶಾಲ. ಆರ್. ಅಧ್ಯಕ್ಷತೆಯಲ್ಲಿ ನಬಾರ್ಡ, ಡಿಎಲ್‌ಬಿಸಿ ಹಾಗೂ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾಽಕಾರಿ ಸಂಗಪ್ಪ, ಅಪರ ಜಿಲ್ಲಾಽಕಾರಿ ಅಶೋಕ ತೇಲಿ ಇದ್ದರು.
ಬಾಗಲಕೋಟೆ: ಸರ್ಕಾರದ ವಿವಿಧ ಯೋಜನೆಗಳಡಿ ನೀಡಲಾಗುತ್ತಿರುವ ಸಾಲ ವಿತರಣೆಯಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಪಶು ಸಂಗೋಪನಾ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಹಾವೇರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ವಿಶಾಲ. ಆರ್. ಬ್ಯಾಂಕರ್ಸ್ಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ನಬಾರ್ಡ, ಡಿಎಲ್‌ಬಿಸಿ ಹಾಗೂ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಮಾಜಿಕ ಭದ್ರತೆಗೆ ಒಳಪಡುವ ಯೋಜನೆಗಳಿಗೆ ಹೆಚ್ಚಿನ ಆಧ್ಯತೆ ವಹಿಸಬೇಕು. ಸಾಲ ವಿತರಣೆಯಲ್ಲಿ ಆದ್ಯತಾ ವಲಯಗಳಿಗೆ ಹೆಚ್ಚು ಒತ್ತು ನೀಡಬೇಕು. ಕ್ರೆಡಿಟ್ ಕಿಸಾನ ಸಾಲಗಳ ಬಗ್ಗೆ ಅರಿವು ಮೂಡಿಸಿ ಹೆಚ್ಚಿನ ಪ್ರಮಾಣದಲ್ಲಿ ಸಾಲ ವಿತರಣೆಯಾಗಿ ಅವರ ಆರ್ಥಿಕ ಮಟ್ಟದ ಸುಧಾರಣೆಯಾದಲ್ಲಿ ಸರ್ಕಾರ ಯೋಜನೆಗಳಿಗೆ ಬೆಲೆ ಬರುತ್ತದೆ ಎಂದರು.
ನಂತರ ವಿವಿಧ ಯೋಜನೆಗಳ ಸಾಲ ವಿತರಣೆ, ಸ್ವಯಂ ಉದ್ಯೋಗ ಯೋಜನೆಗಳಿಗೆ ಬ್ಯಾಂಕುಗಳ ಸಹಕಾರ ಹಾಗೂ ಆದ್ಯತಾ ವಲಯದ ಸಾಲಗಳ ಪ್ರಗತಿ ಕುರಿತು ಚರ್ಚೆ ನಡೆಸಿದ ಡಾ.ವಿಶಾಲ್ ಅವರು, ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ಹೆಚ್ಚಿನ ಪ್ರಮಾಣದಲ್ಲಿ ನೋಂದಣಿಗೆ ಕ್ರಮವಹಿಸಬೇಕು. ಪ್ರತಿಯೊಂದು ಬ್ಯಾಂಕ್‌ಗಳು ಗುರಿ ಇಟ್ಟುಕೊಂಡು ನೋಂದಣಿಗೆ ಕ್ರಮವಹಿಸಲು ಸೂಚಿಸಿದರು.
ನಬಾರ್ಡ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ (ಆರ್‌ಐಡಿಎಫ್), ಎನ್‌ಐಡಿಎ ಹಾಗೂ ಇಎಪಿ ಯೋಜನೆಗಳಡಿ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಽಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳು ನಿಗದಿತ ಅವಽಯಲ್ಲಿ ಪೂರ್ಣಗೊಳಿಸಲು ತಿಳಿಸಿದ ಅವರು, ವಿವಿಧ ಇಲಾಖೆಗಳ ಅಽಕಾರಿಗಳಿಂದ ಯೋಜನೆ ಪ್ರಗತಿ, ಅನುದಾನ ಬಳಕೆ, ಕಾಮಗಾರಿಗಳ ಅನುಷ್ಠಾನದ ಹಂತ ಹಾಗೂ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು.
ರೈಲ್ವೆ ಇಲಾಖೆಗೆ ಸಂಬAಽಸಿದAತೆ ಬಾಗಲಕೋಟೆ ಕುಡಚಿ ಮಾರ್ಗ ನಿರ್ಮಾಣಕ್ಕೆ ಭೂಸ್ವಾಽÃನ, ಪ್ರಗತಿಯಲ್ಲಿರುವ ಕಾಮಗಾರಿಗಳ ಕುರತು ಚರ್ಚಿಸಿದ ಕಾರ್ಯದರ್ಶಿಗಳು, ಬಾಗಲಕೋಟೆ ಮತ್ತು ಜಮಖಂಡಿ ವಿಭಾಗದ ಉಪವಿಭಾಗಾಽಕಾರಿಗಳಿಂದ ಮಾಹಿತಿ ಪಡೆದುಕೊಂಡು ವಿವಿಧ ಇಲಾಖೆಗಳ ಸಮನ್ವಯ ಸಾಽಸಿ ಬಾಕಿ ಇರುವ ಭೂಸ್ವಾಽÃನಕ್ಕೆ ಉಂಟಾಗಿರುವ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಅಽಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಽಕಾರಿ ಸಂಗಪ್ಪ, ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಉಪವಿಭಾಗಾಽಕಾರಿಗಳಾದ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ, ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ರಾಜಕುಮಾರ ಹೂಗಾರ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಜಂಟಿ ತೋಟಗಾರಿಕೆ ನಿರ್ದೇಶಕ ರವೀಂದ್ರ ಹಕಾಟಿ, ಪಶು ಇಲಾಖೆಯ ಉಪನಿರ್ದೇಶಕ ಎಸ್.ಎಚ್.ಕರಡಿಗುಡ್ಡ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ, ಗ್ರಾಮೀಣ ಕುಡಿಯುವ ನೀರಿಯ ಯೋಜನೆಯ ಮುಖ್ಯ ಅಭಿಯಂತರ ಆಕಾಶ ವಂದೆ ಸೇರಿದಂತೆ ಇತರೆ ಇಲಾಖೆಯ ಅಽಕಾರಿಗಳು ಉಪಸ್ಥಿತರಿದ್ದರು.