ಸವದತ್ತಿ: ತಾಲೂಕಿನ 4 ಸರ್ಕಾರಿ ಪ್ರೌಢಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಸಕ ವಿಶ್ವಾಸ ವೈದ್ಯ ಅವರ ನಿರಂತರ ಪ್ರಯತ್ನದ ಲವಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರದ ಆದೇಶದಂತೆ ಸವದತ್ತಿ ತಾಲೂಕಿನ ಅರ್ಟಗಲ್, ಚುಳಕಿ, ಕಡಬಿ ಹಾಗೂ ಮಲ್ಲೂರ ಸರ್ಕಾರಿ ಪ್ರೌಢಶಾಲೆಗಳು ಇನ್ನು ಮುಂದೆ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಕಾರ್ಯನಿರ್ವಹಿಸಲಿವೆ ಎಂದು ೇತ್ರ ಶಿಣಾಧಿಕಾರಿ ಅಕ್ಬರಲಿ ಖಾಜಿ ತಿಳಿಸಿದ್ದಾರೆ.
ಸವದತ್ತಿ ತಾಲೂಕಿನಲ್ಲಿ ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು ನನ್ನ ಪ್ರಮುಖ ಗುರಿ. ಸರ್ಕಾರ ಈ ನಿಟ್ಟಿನಲ್ಲಿ ಸಹಕಾರ ನೀಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಶಿಣಾಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಶಾಸಕ ವಿಶ್ವಾಸ ವೈದ್ಯ ಭರವಸೆ ನೀಡಿದ್ದಾರೆ.