Former PM Deve Gowdas Wife Chennamma 
ರಾಜ್ಯ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ ಎಚ್​ಡಿ ಕುಮಾರಸ್ವಾಮಿ..Former PM Deve Gowdas Wife Chennamma

ಪ್ರಮುಖ ಮುಖ್ಯಾಂಶಗಳು

  • ಕಳೆದ ಎರಡು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೇವೆಗೌಡರ ಪತ್ನಿ ಚೆನ್ನಮ್ಮ
  • ಮಣಿಪಾಲ್ ಆಸ್ಪತ್ರೆಗೆ ದೌಡಾಯಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ, ಮಗ ನಿಖಿಲ್ ಕುಮಾರಸ್ವಾಮಿ
  • ​ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿ ಜನಿಸಿರುವ ಚೆನ್ನಮ್ಮ
ಬೆಂಗಳೂರು:  ಮಾಜಿ ಪ್ರಧಾನಿ ಅವರ ಪತ್ನಿ  ಚೆನ್ನಮ್ಮ ಅವರ ಆರೋಗ್ಯದಲ್ಲಿ  ಏರುಪೇರಾಗಿದ್ದು,  ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ  ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ತಾಯಿಯ ಆರೋಗ್ಯದ ಸುದ್ಧಿ ತಿಳಿಯುತ್ತಿದ್ದಂತೆಯೇ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ಧಾವಿಸಿದ್ದಾರೆ ಎನ್ನಲಾಗಿದೆ.
 85 ವರ್ಷದ ಚೆನ್ನಮ್ಮ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ, ಕಳೆದ ಎರಡು ದಿನದ ಹಿಂದೆ ಮಣಿಪಾಲ್​ಗೆ ದಾಖಲಾಗಿದ್ದರು. ಇಂದು ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಆಸ್ಪತ್ರೆಯತ್ತ ಕುಟುಂಬಸ್ಥರು 

ಚೆನ್ನಮ್ಮರ ಆರೋಗ್ಯದಲ್ಲಿ ಏರುಪೇರು ಉಂಟಾದ  ವಿಚಾರ ತಿಳಿಯುತ್ತಿದ್ದಂತೆ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ, ನಿಖಿಲ್​ ಕುಮಾರಸ್ವಾಮಿ ಹಾಗೂ  ರೇವತಿ ಸೇರಿದಂತೆ ಕುಟುಂಬದ ಇತರ ಸದಸ್ಯರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಡಯಾಲಿಸಿಸ್‌ಗೆ ಒಳಗಾಗುತ್ತಿರುವ ಕಾರಣ ಸದ್ಯ ಮನೆಯಲ್ಲೇ ಉಳಿದುಕೊಂಡಿದ್ದಾರೆ.

ಚೆನ್ನಮ್ಮ ಹುಟ್ಟಿದ್ದೆಲ್ಲಿ

1939 ರಲ್ಲಿ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿ ಜನಿಸಿದ ಚೆನ್ನಮ್ಮ ಅವರು 1954 ರ ಮೇ ತಿಂಗಳಲ್ಲಿ ಎಚ್. ಡಿ. ದೇವೇಗೌಡರನ್ನು ವಿವಾಹವಾದರು. ತಮ್ಮ ಜೀವಿತಾವಧಿಯಲ್ಲಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದು ತೀರಾ ಕಡಿಮೆ. ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ಇದು ಎರಡನೇ ಬಾರಿಯಾಗಿದೆ. 

ಆಸ್ಪತ್ರೆಗೆ ದಾಖಲಾಗಿದ್ದು ವಿರಳ

ಈ ಹಿಂದೆ 2001 ರ ಫೆಬ್ರವರಿ 21 ರಂದು ಅವರ ಮೇಲೆ ಆಸಿಡ್ ದಾಳಿ ನಡೆದಿದ್ದಾಗ ಮೊದಲ ಬಾರಿಗೆ ಐಸಿಯುಗೆ ದಾಖಲಾಗಿದ್ದರು. ಈಗ ಉಸಿರಾಟದ ತೊಂದರೆಯಿಂದಾಗಿ ಎರಡನೇ ಬಾರಿಗೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಇಡೀ ದೇವೇಗೌಡರ ಕುಟುಂಬ ಇವರ ಶೀಘ್ರ ಗುಣಮುಖಕ್ಕಾಗಿ ಪ್ರಾರ್ಥಿಸುತ್ತಿದೆ,(ಏಜೆನ್ಸೀಸ್).