kle 
ರಾಜ್ಯ

ಕೆಎಲ್‌ಇ ಸಂಸ್ಥೆಯಿಂದ ಆರೋಗ್ಯ ಉಚಿತ ತಪಾಸಣೆ ನಾಡಿದ್ದು

ಬೆಳಗಾವಿ: ರಾಷ್ಟ್ರೀಯ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಹಾಗೂ ರಾಜ್ಯ ಹಿರಿಯ ನಾಗರಿಕರ ಸಂಘದ ಸಂಯುಕ್ತಾಶ್ರಯದಲ್ಲಿ ಆಸ್ಪತ್ರೆಯ ಜೆರಿಯಾಟ್ರಿಕ್ ಮೆಡಿಸಿನ್ ವಿಭಾಗದಿಂದ ಹಿರಿಯ ನಾಗರಿಕರಿಗಾಗಿ ಆರೋಗ್ಯ ಉಚಿತ ತಪಾಸಣೆ ಶಿಬಿರ ಆ.14ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಏರ್ಪಡಿಸಲಾಗಿದೆ.

ಟೆಸ್ಟ್ ಹಾಗಡಿ ಮೂಳೆ ಸಾಂದ್ರತೆ ಪರೀಕ್ಷೆ ನಡೆಸಲಾಗುವುದು. ಜೆರಿಯಾಟ್ರಿಕ್ ಮೆಡಿಸಿನ್, ಜನರಲ್ ಮೆಡಿಸಿನ್, ನ್ಯೂರಾಲಜಿ, ಕಾರ್ಡಿಯಾಲಜಿ, ಆರ್ಥೋಪೆಡಿಕ್ಸ್ ಹಾಗೂ ನೇತ್ರ ವಿಭಾಗಗಳ ತಜ್ಞ ಮತ್ತು ಸೂಪರ್ ಸ್ಪೆಷಲಿಸ್ಟ್ ವೈದ್ಯರು ಸಮಾಲೋಚನೆ ನಡೆಸಲಿದ್ದಾರೆ. ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.