ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ
- ಪರೀಕ್ಷೆ-2ಕ್ಕೆ ನೋಂದಣಿಯಾಗಲು ಏ. 17 ಕೊನೆಯ ದಿನ.
- ಮೊದಲನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳು ಯಾವುದೇ ಪರೀಕ್ಷಾ ಶುಲ್ಕ ಪಾವತಿಸುವ ಅಗತ್ಯವಿಲ್ಲ.
- ವಿದ್ಯಾರ್ಥಿಗಳು ಉಚಿತವಾಗಿ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಬಹುದು ಎಂದು ಮಂಡಳಿ ತಿಳಿಸಿದೆ.
ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣಗೊಂಡಿರುವ ಅಥವಾ ಪರೀಕ್ಷೆಗೆ ಗೈರಾದ ಅಭ್ಯರ್ಥಿಗಳು ಉಚಿತವಾಗಿ ನೋಂದಣಿ ಮಾಡಿಕೊಳ್ಳಲು ಏ.17ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಪರೀಕ್ಷೆ-2ಕ್ಕೆ ನೋಂದಣಿಯಾಗಲು ಏ. 17 ಕೊನೆಯ ದಿನ. 2026ರಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊಂಡು, ಮೊದಲನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳು ಯಾವುದೇ ಪರೀಕ್ಷಾ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಇಂತಹ ವಿದ್ಯಾರ್ಥಿಗಳು ಉಚಿತವಾಗಿ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಬಹುದು ಎಂದು ಮಂಡಳಿ ತಿಳಿಸಿದೆ.
ಬಳಸಿ ನೇರವಾಗಿ ನೋಂದಾಯಿಸಿಕೊಳ್ಳಬಹುದು ಅಥವಾ ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪಿಯು ಎಕ್ಸಾಂ ಪೋರ್ಟಲ್ ಮೂಲಕವೂ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ನೋಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆ ನಿಗದಿತ ಸಮಯದಲ್ಲಿ ಕಾಲೇಜಿನ ಪ್ರಾಂಶುಪಾಲರ ಲಾಗಿನ್‌ನಲ್ಲಿ ಪ್ರವೇಶಪತ್ರ ಲಭ್ಯವಾಗಲಿದೆ.
ಪ್ರಶ್ನೆ ಕೋಠಿ ಬಳಸಿಕೊಳ್ಳಿ:
ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಶಾಂತಚಿತ್ತದಿಂದ ಸಿದ್ಧತೆ ಮಾಡಿಕೊಳ್ಳಲು ಮಂಡಳಿ ಕೋರಿದೆ. ಹೆಚ್ಚಿನ ನೆರವಿಗಾಗಿ ಮಂಡಲಿಯ ಜಾಲತಾಣದಲ್ಲಿ ಲಭ್ಯವಿರುವ ಪ್ರಶ್ನೆ ಕೋಠಿ ಮತ್ತು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಳಸಿಕೊಳ್ಳಲು ಸೂಚಿಸಲಾಗಿದೆ.