ಮಹಿಳೆಯರಿಗೆ ಉಚಿತ ರಾಟೆ ಯಂತ್ರ ವಿತರಣೆ women
ಬಂಗಾರಪೇಟೆ: ರಾಜ್ಯದಲ್ಲಿ ಕಾಂಗ್ರೇಸ್ ಅಧಿಕಾರಕ್ಕೆ ಬಂದ ನಂತರ ಮಹಿಳಾ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು. women
ನಗರದ ಎಸ್.ಎನ್.ರೆಸಾರ್ಟ್ನಲ್ಲಿ ಬುಧವಾರ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಮಹಿಳೆಯರಿಗೆ ಉಚಿತ ರಾಟೆ ಯಂತ್ರಗಳನ್ನು ವಿತರಿಸಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಬಡ ಮಹಿಳೆಯರು ಸ್ವ ಉದ್ಯೋಗದಿಂದ ಸ್ವವಲಂಬಿಗಳಾಗಬೇಕೆಂದು ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಸರ್ಕಾರ ಆಡಳಿತಕ್ಕೆ ಬಂದ ತಕ್ಷಣ, ಶಕ್ತಿ ಯೋಜನೆ, ಗೃಹಲಕ್ಷಿ$್ಮ, ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಇಂದು ದುಡಿಯುವ ಕೈಗಳಿಗೆ ಕೆಲಸ ನೀಡುವ ಉದ್ದೇಶದಿಂದ ರಾಟೆ ಯಂತ್ರಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಮಹಿಳೆಯರಿಗೆ ಟೈಲರಿಂಗ್ ತರಬೇತಿಗೆ ಮತ್ತು ಸಾಲ ಸೌಲಭ್ಯಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.