ಗದಗ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಸಾಯಿ ಕರ್ಮಚಾರಿ ಸಮಿತಿ ತೆಮಾಸಿಕ ಸಭೆ ಜರುಗಿತು. ರೋಹನ ಜಗದೀಶ, ಡಾ. ನಂದಾ ಹಣಬರಟ್ಟಿ, ಸಿ. ಆರ್. ಮುಂಡರಗಿ, ಶರಣಪ್ಪ ಮೂಕಪ್ಪ ಪೂಜಾರ, ರೇಣುಕಾ ದೊಡ್ಡಮನಿ, ಅಂಜನಾದೇವಿ. ಎಂ., ಇತರರು ಇದ್ದರು.
ಸಮಾಜದ ನೈರ್ಮಲ್ಯ ಕಾಪಾಡುವಲ್ಲಿ ಸಫಾಯಿ ಕರ್ಮಚಾರಿಗಳ ಸೇವೆ ಅತ್ಯಮೂಲ್ಯವಾಗಿದೆ. ಅವರ ಶ್ರಮಕ್ಕೆ ಗೌರವ ನೀಡುವುದು ಮತ್ತು ಅವರ ಸಾಮಾಜಿಕ ಭದ್ರತೆಯನ್ನು ಖಚಿತಪಡಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಜಿಲ್ಲಾಧಿಕಾರಿ ಸಿ ಎನ್. ಶ್ರೀಧರ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಸಫಾಯಿ ಕರ್ಮಚಾರಿಗಳ ಸಮಿತಿ ತೆಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.
ಸಫಾಯಿ ಕರ್ಮಚಾರಿಗಳಿಗೆ ನಿಯಮಿತವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲು ಮತ್ತು ಅಗತ್ಯ ವೈದ್ಯಕಿಯ ಕಿಟ್ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರತಿಯೊಬ್ಬ ಕರ್ಮಚಾರಿಗೂ ಆಧುನಿಕ ಸುರಕ್ಷತಾ ಪರಿಕರಗಳಾದ ಗ್ಲೌಸ್, ಮಾಸ್ಕ, ಶೂ ಮತ್ತು ಸಮವಸ್ತ್ರಗಳನ್ನು ವಿಳಂಬವಿಲ್ಲದೆ ಒದಗಿಸಲು ಸೂಚಿಸಲಾಗಿದೆ ಎಂದರು.
ಸಫಾಯಿ ಕರ್ಮಚಾರಿಗಳ ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾಥಿರ್ವೇತನ ಮತ್ತು ವಸತಿ ಯೋಜನೆಗಳ ಅಡಿಯಲ್ಲಿ ಬಾಕಿ ಇರುವ ಅಜಿರ್ಗಳನ್ನು ಶ್ರೀವಾಗಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕರ್ಮಚಾರಿಗಳ ಮಾಸಿಕ ವೇತನವನ್ನು ನಿಗದಿತ ಸಮಯದಲ್ಲಿ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವುದು ಮತ್ತು ಪ್ರತಿಯೊಬ್ಬರಿಗೂ ವಿಮಾ ಸೌಲಭ್ಯ ಖಚಿತ ಪಡಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚಚಿರ್ಸಲಾಯಿತು.
ಕರ್ಮಚಾರಿಗಳಿಗೆ ಸಂಬಂಧಿಸಿ ಯಾವುದೇ ಸಮಸ್ಯೆಗಳಿದ್ದರೆ ತಕ್ಷಣವೇ ಕರ್ಮಚಾರಿಗಳು ನೇರವಾಗಿ ಜಿಲ್ಲಾಧಿಕಾರಿ ಗಮನಕ್ಕೆ ತರಬೇಕು ಎಂದು ತಿಳಿಸಿದರು. ಸಫಾರಿ ಕರ್ಮಚಾರಿಗಳಿಗೆ ಮೀಸಲಿರುವ ವಸತಿ ಯೋಜನೆಗಳ ಅಡಿಯಲ್ಲಿ ಬಾಕಿ ಇರುವ ಅಜಿರ್ಗಳನ್ನು ಶ್ರೀವಾಗಿ ವಿಲೇವಾರಿ ಮಾಡಿ, ಅರ್ಹರಿಗೆ ಮನೆಗಳನ್ನು ಒದಗಿಸಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಸಭೆಯಲ್ಲಿ ಸಫಾಯಿ ಕರ್ಮಚಾರಿಗಳ ಕ್ಷೇಮಾಭಿವೃದ್ಧಿ, ಆರೋಗ್ಯ ತಪಾಸಣೆ, ವೇತನ ಪಾವತಿ ಮತ್ತು ಸರ್ಕಾರದ ಸೌಲಭ್ಯಗಳು ತಲುಪುತ್ತಿರುವ ಬಗ್ಗೆ ಸುದೀರ್ ಚರ್ಚೆ ನಡೆಸಲಾಯಿತು. ಸಫಾಯಿ ಕರ್ಮಚಾರಿಗಳು ಎದುರಿಸುತ್ತಿರುವ ಸವಾಲುಗಳು, ವೇತನ ವಿಳಂಬ, ಆರೋಗ್ಯ ಸುರಕ್ಷತೆ ಮತ್ತು ಸರ್ಕಾರದ ವಿವಿಧ ಸೌಲಭ್ಯಗಳ ಅನುಷ್ಠಾನದ ಬಗ್ಗೆಯೂ ಚಚಿರ್ಸಲಾಯಿತು.
ಈ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ ಜಗದೀಶ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಜಿಲ್ಲಾ ಪಂಚಾಯತ ಉಪಕಾರ್ಯದಶಿರ್ ಸಿ. ಆರ್. ಮುಂಡರಗಿ, ಶರಣಪ್ಪ ಮೂಕಪ್ಪ ಪೂಜಾರ, ರೇಣುಕಾ ದೊಡ್ಡಮನಿ, ಅಂಜನಾದೇವಿ. ಎಂ., ಇತರರು ಇದ್ದರು.