ಗದಗ ನಗರದ ಶಂಕರ ಮಠದಲ್ಲಿ ಏರ್ಪಡಿಸಿದ್ದ ಜಗದ್ಗುರು ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಸಿ.ಎನ್​. ಶ್ರೀಧರ ಮಾತನಾಡಿದರು. ಗಂಗಪ್ಪ ಎಂ, ಡಾ. ನಂದಾ ಹಣಬರಟ್ಟಿ, ಡಾ. ಬಸವರಾಜ ಬಳ್ಳಾರಿ, ವೇದಮೂತಿರ್ ರತ್ನಾಕರ್​ ಭಟ್​ ಜೋಶಿ, ಡಾ.ಕುಶಾಲ ಗೋಡಖಿಂಡಿ, ಆನಂದ ಗೋಡಖಿಂಡಿ, ದತ್ತಾತ್ರೇಯ ಜೋಶಿ, ಸುಮನ ಪಾಟೀಲ, ವೆಂಕಟೇಶ ಕುಲಕಣಿರ್, ಗಿರೀಶ ಕುಲಕಣಿರ್, ಸುಧೀಂದ್ರ ದೇಶಪಾಂಡೆ, ದತ್ತಣ್ಣ ಜೋಶಿ, ಗಿರೀಶ ಪಂತರ, ಅನಿಲ ತೆಂಬದಮನಿ ಇತರರು ಇದ್ದರು. 
ರಾಜ್ಯ

ಕುಡಿಯುವ ನೀರಿನ ಪೂರೈಕೆಗೆ ಪ್ರಥಮಾದ್ಯತೆ ನೀಡಿ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

ಶಿವಾನಂದ ಹಿರೇಮಠ

ಗದಗ: ಪ್ರಸ್ತುತ ಬೇಸಿಗೆ ದಿನಗಳಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಪ್ರಥಮಾದ್ಯತೆ ಮೇರೆಗೆ ಇಲಾಖಾಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತ ವಹಿಸಿ ಮಾತನಾಡಿದರು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಯುದ್ದೋಪಾದಿಯಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಲು ತಯಾರಿ ಮಾಡಿಟ್ಟುಕೊಳ್ಳಬೇಕು.ಈಗಿರುವ ಬೋರ್‌ವೆಲ್‌ಗಳನ್ನು ರಿಪೇರಿ ಮಾಡಿಸಿ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದರು.

ಬೇಸಿಗೆ ದಿನಗಳಲ್ಲಿ ಬಿಸಿಲಿನ ತಾಪದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಹಿರಿಯ ನಾಗರಿಕರು, ಗರ್ಭಿಣಿಯರು ಚಿಕ್ಕಮಕ್ಕಳಿಗೆ ಬಿಸಿಲಿನ ತಾಪಮಾನದಿಂದ ಆರೋಗ್ಯ ಸಮಸ್ಯೆ ಉಂಟಾಗದAತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಅವರು ಮಾತನಾಡಿ ಬೇಸಿಗೆ ದಿನಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುವ ಸಂಭವವಿರುವುದರಿAದ ಹೀಟ್‌ವೇವ್‌ನಿಂದ ಆರೋಗ್ಯ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದರು.

ಜಿಲ್ಲೆಯ ಜಿಗಳೂರು ಗ್ರಾಮದ ಹತ್ತಿರ ನಿರ್ಮಿಸಿರುವ ಜಲಸಂಗ್ರಹಗಾರ ಕೆರೆಯ ಸದ್ಯ ನೀರಿನ ಸಂಗ್ರಹಣಾ ಸಾಮರ್ಥ್ಯ 2510 ಎಂ ಎಲ್ ಡಿ (0.08 ಟಿಎಂಸಿ) ಇದೆ. ಆ ನೀರು ರೋಣ, ಗಜೇಂದ್ರಗಡ ಮತ್ತು ನರೇಗಲ್ ಪಟ್ಟಣಗಳಿಗೆ 7 ತಿಂಗಳಿಗೆ ಸಾಕಾಗುತ್ತದೆ. ನವಿಲು ತೀರ್ಥ ಡ್ಯಾಂ ದಲ್ಲಿ ( ಲೈವ್ ಸ್ಟೋರೇಜ್ ) 8.259 ಟಿಎಂಸಿ ನೀರು, ಭದ್ರಾ ಡ್ಯಾಂ ದಲ್ಲಿ ( ಲೈವ್ ಸ್ಟೋರೇಜ್ ) 25.548 ಟಿಎಂಸಿ ನೀರು , ಶಿಂಗಟಾಲೂರ ಬ್ಯಾರೇಜ್ ದಲ್ಲಿ ( ಲೈವ್ ಸ್ಟೋರೇಜ್ ) 1.828 ಟಿಎಂಸಿ ನೀರು ಸಂಗ್ರಹವಿರುತ್ತದೆ. ಪ್ರಸ್ತುತ ಲಭ್ಯವಿರುವ ನೀರು ಮುಂದಿನ 72 ದಿನಗಳಿಗೆ ಸಾಕಾಗಲಿದೆ ಎಂದು ಸಂಬAಧಿತ ಅಧಿಕಾರಿಗಳು ಸಭೆಗೆ ತಿಳಿಸಿದರು.

ಜಿಲ್ಲೆಯಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ ಒಟ್ಟು 55 ಗ್ರಾಮಗಳನ್ನು ಮುಂಜಾಗ್ರತೆಗಾಗಿ ಗುರುತಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ಕಾರ್ಯನಿರ್ವಾಹಕ ಇಂಜನೀಯರ್ ಸಭೆಗೆ ತಿಳಿಸಿದರು. ನೀರಿನ ಸಮಸ್ಯೆ ಉದ್ಭವಿಸಬಹುದಾದ 9 ನಗರ ಸ್ಥಳೀಯ ಸಂಸ್ಥೆಗಳಲ್ಲಿನ 60 ವಾರ್ಡುಗಳನ್ನು ಮುಂಜಾಗ್ರತೆಗಾಗಿ ಗುರುತಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಕುಡಿಯುವ ನೀರು ಕೊರತೆ ಆಗಬಹುದಾದ ವಾರ್ಡುಗಳಲ್ಲಿ ಒಪ್ಪಂದಕ್ಕಾಗಿ ಗುರುತಿಸಲಾದ ಹೆಚ್ಚಿನ ಇಳುವರಿ ನೀಡುವ 29 ಬೋರ್‌ವೆಲ್‌ಗಳನ್ನು ಗುರುತಿಸಲಾಗಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ ಸಭೆಗೆ ತಿಳಿಸಿದರು.

ಈ ಸಂದರ್ಬದಲ್ಲಿ ಡಿವೈಎಸ್‌ಪಿ ಮಹಾಂತೇಶ ಸಜ್ಜನರ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕೆ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್.ಬುರುಡಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.