ತೋಂಟದಾರ್ಯ ಶ್ರೀಗಳು 
ರಾಜ್ಯ

ಜಾತ್ರೆಯಲ್ಲಿ ಗಾಯಗೊಂಡವರಿಗೆ ಮಿಡಿದ ಶ್ರೀಗಳು

ಶಿವಾನಂದ ಹಿರೇಮಠ
ಗದಗ: ನಗರದ ತೋಂಟದಾರ್ಯ ಮಠದ ಜಾತ್ರಾಮಹೋತ್ಸವದಲ್ಲಿ ಅವಡ ಸಂಭವಿಸಿ 15 ಕ್ಕೂ ಅಧಿಕ ಜನರು ಗಾಯಗೊಂಡಿರುವುದು ಅತ್ಯಂತ ನೋವಿನ ಸಂಗತಿ. ಗಾಯಗೊಂಡವರು ಬೇಗನೇ ಗುಣಮುಖ ಆಗಬೇಕು ಎಂದು ಭಗವಂತನಲ್ಲಿ ಪ್ರಾಥಿರ್ಸಿದ್ದಾರೆ ಎಂದು ತೊಂಟದಾರ್ಯ ಮಠದ ತಿಳಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಮಠ, ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡಬೇಕೆಂದು ಆಸ್ಪತ್ರೆಯ ವೈದ್ಯರಿಗೆ ಮನವಿಯನ್ನೂ ಮಾಡಿಕೊಂಡಿದ್ದಾರೆ. ಶ್ರೀಗಳ ಮನವಿಗೆ ಸ್ಪಂದಿಸಿದ ವೈದ್ಯರು ಗಾಯಾಳುಗಳಿಗೆ ಎಲ್ಲ ರೀತಿಯಿಂದಲೂ ಚಿಕಿತ್ಸೆ ನೀಡುತ್ತಿದ್ದೇವೆ. ಎಲ್ಲರೂ ಗುಣಮುಖರಾಗುತ್ತಿದ್ದು ಚಿಂತಿಸುವ ಅಗತ್ಯ ಇಲ್ಲ ಎಂದಿದ್ದಾರೆ. ಜಿಲ್ಲಾಧಿಕಾರಿಗಳೂ ಕೂಡ ಈ ವಿಷಯದಲ್ಲಿ ವಿಶೇಷ ಆಸಕ್ತಿವಹಿಸಿ ಜಿಲ್ಲಾಸ್ಪತ್ರೆಯ ವೈದ್ಯರೊಂದಿಗೆ ಸಮಾಲೋಚಿಸಿದ್ದಾರೆ. ಚಿಕಿತ್ಸೆಯಲ್ಲಿ ಯಾವುದೇ ಲೋಪಗಳಾಗದಂತೆ ಕಾಳಜಿ ವಹಿಸಲು ಸೂಚಿಸಿದ್ದಾರೆ. ಹೀಗಾಗಿ ಯಾರೂ ಆಂತಕಪಡುವ ಅಗತ್ಯ ಇಲ್ಲ. ಈ ವಿಷಯದಲ್ಲಿ ಜಾತ್ರಾ ಮಹೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಆಡಳಿತ ಸಿಬ್ಬಂದಿಯವರು ಎಲ್ಲ ಕಡೆಗೂ ಗಮನಹರಿಸಿ ಗಾಯಾಳುಗಳ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ. ಸಾಧ್ಯವಿದ್ದ ಎಲ್ಲ ಅನುಕೂಲ ಅವರಿಗೆ ಮಾಡಿಕೊಡಲೂ ಶ್ರೀಗಳು ತಿಳಿಸಿರುವುದಾಗಿ ಶ್ರೀಮಠ ಪ್ರಕಟಣೆ ತಿಳಿಸಿದೆ.