ಗದಗ ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಿದ್ದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ- ಕಾರ್ಯಾಗಾರ ಕಾರ್ಯಕ್ರಮವನ್ನು ನಾಗಲಕ್ಷಿ$್ಮ ಚೌಧರಿ ಉದ್ಘಾಟಿಸಿದರು. ಸಿ.ಎನ್. ಶ್ರಿಧರ, ರೋಹನ ಜಗದೀಶ, ಡಾ. ದುರಗೇಶ ಕೆ.ಆರ್, ಸಿ. ಆರ್. ಮುಂಡರಗಿ, ರಾಧಾ ಮಣ್ಣೂರ ಹಲವರು ಇದ್ದರು.
ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ. ಮಹಿಳೆಯರು ಅನ್ಯಾಯ ಮತ್ತು ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು. ಜಿಲ್ಲೆಯ ಮಹಿಳೆಯರು ದೌರ್ಜನ್ಯ ರಹಿತರಾಗಿರಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷಿ$್ಮ ಚೌಧರಿ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸ್ಥಳಿಯ ಹಾಗೂ ಆಂತರಿಕ ದೂರು ನಿವಾರಣಾ ಸಮಿತಿ ಸದಸ್ಯರಿಗೆ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ- 2013 ಕುರಿತು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಆಥಿರ್ಕವಾಗಿ ಸ್ವಾವಲಂಬಿ ಆಗಬೇಕು. ಮಹಿಳೆಯರ ಯಶಸ್ವಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಪುರುಷರ ಸಹಕಾರವೂ ಅಗತ್ಯವಾಗಿತ್ತದೆ. ಮಹಿಳೆಯರು ತಮಗಾದ ದೌರ್ಜನ್ಯವನ್ನು ಸಹಿಸಿಕೊಳ್ಳಬಾರದು. ಕಾಯಿದೆಗಿಂತ ಮೊದಲೇ ಸಾಕಷ್ಟು ಕಾನೂನು ಮಹಿಳಾ ಸಬಲೀಕರಣಕ್ಕಾಗಿ ಜಾರಿಗೊಂಡಿವೆ. ಹೆಣ್ಣುಮಕ್ಕಳಿಗೆ ಕೆಲಸದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯವಾಗುತ್ತಿದ್ದರೆ ಸಮಿತಿಗೆ ದೂರು ಕೊಟ್ಟು ಪರಿಹಾರ ಕಂಡುಕೊಳ್ಳಬಹುದು ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದಶಿರ್ ಸಿ.ಎಸ್. ಶಿವನಗೌಡ್ರ ಮಾತನಾಡಿ ಕಾನೂನು ಸೇವಾ ಪ್ರಾದಿಕಾರದಿಂದ ವಿವಿಧ ಇಲಾಖೆಯ ಸಹಯೋಗದೊಂದಿಗೆ ಕಾಯಿದೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಕಾಯಿದೆಯ ಉದ್ದೇಶವನ್ನು ಎಲ್ಲರೂ ತಿಳಿದುಕೊಳ್ಳಬೇಕು. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ತೊಂದರೆಯಾದರೆ ಅಲ್ಲಿಯೇ ಇರುವ ಕಮೀಟಿಗೆ ದೂರು ಕೊಡಬಹುದು. ಸಿವಿಲ್ ಕೋರ್ಟಗೆ ಇರುವ ಅಧಿಕಾರವೇ ಆ ಕಮೀಟಿಗೂ ಇರುತ್ತದೆ. ಈ ಕಾಯ್ದೆಯು ಸರ್ಕಾರಿ ಕ್ಷೇತ್ರವಲ್ಲದೇ ಖಾಸಗಿ, ಸಂ ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ಸಂಬಂಧಿಸಿದ್ದಾಗಿರುತ್ತದೆ. ಕಾಯ್ದೆಯ ಸದ್ಭಳಕೆ ಆಗಬಾರದು. ಒಂದು ವೇಳೆ ಕಾಯ್ದೆಯ ಉದ್ದೇಶಪೂರ್ವಕವಾದ ರ್ದುಬಳಕೆಯಾದರೆ ದೂರುದಾರರಿಗೂ ಶಿಕ್ಷೆಯಾಗುತ್ತದೆ ಎಂದರು.
ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಮಾತನಾಡಿ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆಗಾಗಿ, ಮಾನವೀಯತೆ ಇಲ್ಲದೇ ಮಹಿಳಯರ ಮೇಲೆ ದಬ್ಬಾಳಿಕೆಯಾದಾಗ ಅಂತಹ ದೌರ್ಜನ್ಯವನ್ನು ಸಹಿಸಿಕೊಳ್ಳಬಾರದು. ಅನ್ಯಾಯ ಮತ್ತು ದೌರ್ಜನ್ಯವನ್ನು ಸಂಭವಿಸಿದಾಗ ಮೂಕವಿಸ್ಮಿತರಾಗಿ ಇದ್ದು ಸಹಿಸಿಕೊಳ್ಳುವುದು ಸಹ ತಪ್ಪು. ದೌರ್ಜನ್ಯದ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಟಿ.ಎಸ್. ಚಂದ್ರಿಕಾ ಅವರು ಸ್ಥಳಿಯ ಹಾಗೂ ಆಂತರಿಕ ದೂರು ನಿವಾರಣಾ ಸಮಿತಿ ಸದಸ್ಯರಿಗೆ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ -2013 ರ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ರೋಹನ ಜಗದೀಶ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್, ರಾಜ್ಯ ಮಹಿಳಾ ಆಯೋಗದ ಕಾರ್ಯದಶಿರ್ ರೂಪಾ , ಜಿ. ಪಂ. ಉಪಕಾರ್ಯದಶಿರ್ ಸಿ. ಆರ್. ಮುಂಡರಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಆರ್, ಮಲ್ಲಪ್ಪ ಹೊಸಳ್ಳಿ, ಮಹಾಂತಸ್ವಾಮಿ ಪೂಜಾರ ಇತರರು ಇದ್ದರು.