ಪ್ಲಾಸ್ಟಿಕ್ ಧ್ವಜ ನಿಷೇಧಿಸುವಂತೆ ಹಿಂದು ಜನಜಾಗೃತಿ ಸಮಿತಿ ಸದಸ್ಯರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ ಅವರಿಗೆ ಮನವಿ ಸಲ್ಲಿಸಿದರು. ಭೀಮರಾಜ ದೊಡ್ಡಮನಿ, ಡಾ. ರವೀಂದ್ರ ನಂದಿ, ಪ್ರವಿಣ ಬೆನ್ನೂರ ಇತರರು ಇದ್ದರು.
ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಆಗುವ ಅವಮಾನವನ್ನು ತಡೆಗಟ್ಟಲು ಮತ್ತು ನಿಷೇಧಿತ ಪ್ಲಾಸ್ಟಿಕ್ ಧ್ವಜಗಳ ಮಾರಾಟವನ್ನು ನಿಷೇಧಿಸಿ, ಮಾರಾಟ ಮಾಡುವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಸದಸ್ಯರು ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ೇತ್ರ ಶಿಣಾಧಿಕಾರಿಗಳಿಗೆ ಪ್ರತ್ಯೇಕ ಮನವಿ ಸಲ್ಲಿಸಿದರು.
ಕಾಗದದ ಧ್ವಜಗಳು ಬೇಗನೆ ಮಣ್ಣಿನಲ್ಲಿ ಸೇರಿಹೋಗುತ್ತವೆ. ಆದರೆ ಪ್ಲಾಸ್ಟಿಕ್ ಧ್ವಜಗಳು ನಾಶವಾಗದೆ ಹಲವು ದಿನಗಳವರೆಗೆ ರಸ್ತೆಗಳಲ್ಲಿ ಬಿದ್ದು ರಾಷ್ಟ್ರಧ್ವಜಕ್ಕೆ ಅಗೌರವ ಉಂಟಾಗುತ್ತಿದೆ. ಈ ರಾಷ್ಟ್ರೀಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಹಿಂದೂ ಜನಜಾಗೃತಿ ಸಮಿತಿಯು ಮುಂಬೈ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅಜಿರ್ ಸಲ್ಲಿಕೆ ಆಗಿತ್ತು. ಅಜಿರ್ಯ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ಲಾಸ್ಟಿಕ್ ಧ್ವಜದಿಂದ ಆಗುವ ರಾಷ್ಟ್ರಧ್ವಜದ ಅವಮಾನವನ್ನು ತಡೆಯುವಂತೆ ಸರ್ಕಾರಕ್ಕೆ ಸ್ಪಷ್ಟ ಆದೇಶ ನೀಡಿತ್ತು. ಈ ಆದೇಶದಂತೆ ಕೇಂದ್ರ ಮತ್ತು ರಾಜ್ಯ ಗೃಹ ಇಲಾಖೆ ಹಾಗೂ ಶಿಣ ಇಲಾಖೆಯು ಈ ಕುರಿತು ಸುತ್ತೋಲೆ ಹೊರಡಿಸಿವೆ. ಕೇಂದ್ರ ಸರ್ಕಾರ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಹಾಗಾಗಿ ಪ್ಲಾಸ್ಟಿಕ್ ಧ್ವಜವನ್ನು ನಿಷೇಧಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಪ್ರಕಾಶ ಕೋಟಿ, ವಿನಾಯಕ ಕೆ., ಭೀಮರಾಜ ದೊಡ್ಡಮನಿ, ಡಾ. ರವೀಂದ್ರ ನಂದಿ, ಲಕ್ಷಿ$್ಮ ನಂದಿ, ಪ್ರವಿಣ ಬೆನ್ನೂರ, ವಸಂತ ಕುಲಕಣಿರ್, ಕರಿಸೋಮನಗೌಡ್ರು, ನಿರಂಜನ ನಾರಾಯಣಕರ ಹಲವರು ಇದ್ದರು.