ಗದಗ ಉತ್ಸವ ಕುರಿತು ಶರಣಬಸಪ್ಪ ಗುಡಿಮನಿ ಸುದ್ದಿಗೋಷ್ಠಿ ನಡೆಸಿದರು. ಜಯದೇವ ಮೆಣಸಗಿ, ಪ್ರಕಾಶ ಉಗಲಾಟ, ಸಿದ್ರಾಮಪ್ಪ ಉಮಚಗಿ ಹಲವರು ಇದ್ದರು. 
ರಾಜ್ಯ

ಆ. 14 ರಿಂದ 18 ರವರೆಗೆ ಗದಗ ಉತ್ಸವ 2026: ಶರಣಬಸಪ್ಪ ಗುಡಿಮನಿ

ಶಿವಾನಂದ ಹಿರೇಮಠ

ವಿಜಯವಾಣಿ ಸುದ್ದಿಜಾಲ ಗದಗ

ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗ ಹಾಗೂ ಜಿಪಂ ಸಹಯೋಗದಲ್ಲಿ ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಆ.14 ರಿಂದ 1ರ ವರೆಗೆ ಗದಗ ಉತ್ಸವ 2026 ಮೇಳ ನಡೆಯಲಿದೆ ಎಂದು ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಸಪ್ಪ ಗುಡಿಮನಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಆ. 14 ರಿಂದ ಪ್ರತಿದಿನ ಬೆಳಗ್ಗೆ 9 ರಿಂದ ರಾತ್ರಿ 9 ಗಂಟೆಯವರೆಗೆ ಜರಗುವು ಮೇಳದಲ್ಲಿ ಜಿಲ್ಲೆ ಹಾಗೂ ರಾಜ್ಯದ ವಿವಿಧ ಕೈಗಾರಿಕಾ ಉತ್ಪನ್ನಗಳು, ಸ್ವಸಹಾಯ ಸಂಗಳ ಉತ್ಪನ್ನಗಳು, ಕರಕುಶಲ ವಸ್ತುಗಳು ಸೇರಿದಂತೆ ವಿಶೇಷವಾಗಿ ವ್ಯಾಪಾರಸ್ಥರಿಗೆ ಅವಶ್ಯವಿರುವ ಸಾಟೆಕ್ಸ್​, ಗ್ರೇಡಿಂಗ್​ ಹಾಗೂ ಮಡ್ಡ ಕ್ಲೀನರ್​ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಪ್ರತಿದಿನ ಸಂಜೆ ಕರ್ಲಸ್​ ಕನ್ನಡ ಖ್ಯಾತಿಯ ಕಲಾವಿದರು, ಸ್ಥಳಿಯ ಕಲಾವಿದರಿಂದ ಸಾಂಸತಿಕ ಮತ್ತು ಸಂಗೀತ ಕಾರ್ಯಕ್ರಮಗಳು ಜರುಗಲಿವೆ. ಆ.14 ರಂದು ಶುಕ್ರವಾರ ಸಂಜೆ 5 ಗಂಟೆಗೆ ತೋಂಟದ ಸಿದ್ದರಾಮ ಶ್ರೀಗಳು ಸಾನ್ನಿಧ್ಯದಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದೆ. ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯ ಜಿ.ಕೆ.ಆದಪ್ಪಗೌಡ್ರ ಉದ್ಘಾಟಿಸುವರು. ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಮಾಜಿ ಅಧ್ಯ ಡಾ. ಜಾಬೋರ್ಬ ಕ್ರಾಸ್ಟಾ, ಸಂಸದ ಪಿ.ಸಿ.ಗದ್ದಿಗೌಡ್ರ, ವಿಧಾನ ಪರಿಷತ್​ ಸದಸ್ಯ ಪ್ರದಿಪ ಶೆಟ್ಟರ, ಡಿ.ಆರ್​. ಪಾಟೀಲ, ಬಿ.ಬಿ.ಅಸೂಟಿ, ಖೂಷ್ಭೂ ಚೌಧರಿ ಹಲವರು ಉಪಸ್ಥಿತಿ ಇರುವರು.
ಆ.15 ರಂದು ಶನಿವಾರ ಸಂಜೆ 5 ಗಂಟೆಗೆ ಸಾಧಕರಿಗೆ ಸನ್ಮಾನ ಸಮಾರಂಭ ಜರುಗಲಿದೆ. ಆ. 16 ರಂದು ಬೆಳಗ್ಗೆ 10 ಗಂಟೆಗೆ ರಕ್ತದಾನ ಶಿಬಿರ ನಡೆಯಲಿದೆ. ಸಂಜೆ 4.30 ಗಂಟೆಗೆ 2026ನೇ ಸಾಲಿನ ಜೀವಮಾನ ಸಾಧನೆ, ಶ್ರೇಷ್ಠ ವರ್ತಕ, ಶ್ರೇಷ್ಠ ಉದ್ಯಮಿ, ಶ್ರೇಷ್ಠ ಮಹಿಳಾ ಉದ್ಯಮಿ ಪ್ರಶಸ್ತಿ ಪ್ರದಾನ ಸಮಾರಂಭವು ಸೂಡಿ ಜುಕ್ತಿ ಹಿರೇಮಠದ ಕೊಟ್ಟೂರ ಬಸವೇಶ್ವರ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಜರಗುವುದು. ವಿಧಾನಸಭೆಯ ಸಭಾಪತಿ ಜಿ.ಎಸ್​.ಪಾಟೀಲ, ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಚಿವ ಬಸವರಾಜ ರಾಯರೆಡ್ಡಿ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕರಾದ ಎಚ್​.ಕೆ.ಪಾಟೀಲ, ಸಿ.ಸಿ.ಪಾಟೀಲ, ಡಾ.ಚಂದ್ರು ಲಮಾಣಿ, ವಿಧಾನ ಪರಿಷತ್​ ಸದಸ್ಯ ಎಸ್​.ವಿ.ಸಂಕನೂರ ಉಪಸ್ಥಿತಿ ಇರುವರು. ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯ ಆನಂದ ಪೋತ್ನಿಸ್​ ಮತ್ತು ಈಶಣ್ಣ ಮುನವಳ್ಳಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ, ಶ್ರೇಷ್ಠ ಉದ್ಯಮಿ ಪ್ರಶಸ್ತಿಯನ್ನು ವಿತರಿಸಲಾಗುವುದು. ಕಾರ್ಯಕ್ರಮದಲ್ಲಿ ಶ್ರೇಷ್ಠ ವರ್ತಕ ಪ್ರಶಸ್ತಿ, ಶ್ರೇಷ್ಠ ಮಹಿಳಾ ಉದ್ಯಮಿ ಪ್ರಶಸ್ತಿ ನೀಡಲಾಗುವುದು ಎಂದರು.
ಆ. 17 ರಂದು ಸೋಮವಾರ ಮುಂಜಾನೆ 10 ಗಂಟೆಗೆ ಜವಳಿ ವಲಯದ ರ್ತು ಉದ್ಯಮಿದಾರರಿಗೆ ಪ್ರೋತ್ಸಾಹ ಕಾರ್ಯಾಗಾರ ಜರುಗಲಿದೆ. ಉದ್ಯಮ ಕ್ಷೇತ್ರದ ಜತ್ಞರಿಂದ ಉಪನ್ಯಾಸ ಜರಗುವುದು. ಸಂಜೆ 5 ಗಂಟೆಗೆ ಮಹಿಳಾ ಟಕದಿಂದ ಮಹಿಳಾ ಉದ್ಯಮಿದಾರರ ಸಂವಾದ ಕಾರ್ಯಕ್ರಮ ಜರುಗಲಿದೆ. ಎಂದರು.
ಆ.18 ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ಮಹಿಳೆಯರ ಅಡುಗೆ ಸ್ಪರ್ಧೆ ಜರುಗುವುದು. ಸಂಜೆ 4&30ಕ್ಕೆ ಶ್ರೇಷ್ಠ ಮಳಿಗೆ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭನಡೆಯಲಿದೆ ಎಂದು ತಿಳಿಸಿದರು.
ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಉಪಾಧ್ಯ ಜಯದೇವ ಮೆಣಸಗಿ, ಪ್ರಕಾಶ ಉಗಲಾಟ, ಸಿದ್ರಾಮಪ್ಪ ಉಮಚಗಿ, ಗೌರವ ಕಾರ್ಯದಶಿರ್ ಚನ್ನವಿರಪ್ಪ ಹುಣಶೀಕಟ್ಟಿ, ಸಹ ಗೌರವ ಕಾರ್ಯದಶಿರ್ ರಾವೇಂದ್ರ ಕಾಲವಾಡ, ಅಶೋಕ ಸಂಕಣ್ಣವರ, ಕೋಶಾಧ್ಯ ಅರವಿಂದ ಕಾಮತ, ಗದಗ ಉತ್ಸವ ಸಮಿತಿಯ ಚೇರಮನ್​ ಮದುಸೂಧನ ಪುಣೇಕರ, ಕೋಚೇರಮನ್​ ಮಂಜುನಾಥ ವೀರಲಿಂಗಯ್ಯನಮಠ ಹಲವರು ಇದ್ದರು.