Gadag 
ರಾಜ್ಯ

ಬಡವರ ಪಾಲಿನ ಆಶಾಕಿರಣ : ಜನತಾ ದರ್ಶನ

ಶಿವಾನಂದ ಹಿರೇಮಠ

ಗದಗ: ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಕೆ ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವು ಜನಸಾಮಾನ್ಯರ ಪಾಲಿಗೆ ನಿಜವಾದ ಆಶಾಕಿರಣವಾಗಿ ಪರಿಣಮಿಸಿತು. ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಸಚಿವರು ಹಾಗೂ ಅಧಿಕಾರಿಗಳ ಮುಂದಿಡುವ ಮೂಲಕ ತ್ವರಿತ ಪರಿಹಾರ ಕೋರಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಿರಹಟ್ಟಿ ತಾಲೂಕಿನ ವಡವಿ ಹೊಸೂರು ಗ್ರಾಮದ ಪ್ರಭುಗೌಡ ಪಾಟೀಲ್, ತಮ್ಮ ಹೊಲದ ಬೋರವೇಲ್ಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಹವಾಲು ಸಲ್ಲಿಸಿ, ಜನತಾ ದರ್ಶನ ಕಾರ್ಯಕ್ರಮದಿಂದ ಬಡವರಿಗೆ ಮತ್ತು ರೈತರಿಗೆ ಬಹಳ ಅನುಕೂಲವಾಗಿದೆ. ಸರ್ಕಾರದ ದಿಟ್ಟ ಹೆಜ್ಜೆಯಿಂದ ಸಾಮಾನ್ಯರಿಗೆ ನ್ಯಾಯ ಸಿಗುವ ವೇದಿಕೆ ಸಿಕ್ಕಿದೆ? ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮುಡರಗಿ ತಾಲೂಕಿನ ಕದಾಂಪುರ ಗ್ರಾಮದ ಬಸವರೆಡ್ಡಿ ಕೆ. ನಾಗನೂರು ಅವರು ತಮ್ಮ ಜಮೀನಿನಲ್ಲಿ ನೀರಿನ ಪೂರೈಕೆಯಿಂದ ಸುತ್ತಮುತ್ತಲಿನ ರೈತರಿಗೆ ಉಂಟಾಗಿರುವ ತೊಂದರೆ ಪರಿಹರಿಸಲು 25 ವೋಲ್ಟ್ ಸಾಮರ್ಥ್ಯದ ಟ್ರಾನ್ಸಾ÷್ಫರ್ಮರ್ ಅನ್ನು 63 ವೋಲ್ಟ್ ಸಾಮರ್ಥ್ಯಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದರು. ರೈತರ ಸಮಸ್ಯೆಗಳಿಗೆ ಇಂತಹ ಕಾರ್ಯಕ್ರಮಗಳು ಸ್ಪೂರ್ತಿಯಾಗುತ್ತವೆ. ಕುಂದುಕೊರತೆಗಳನ್ನು ಬಗೆಹರಿಸಿದರೆ ಗ್ರಾಮೀಣ ಜನರಿಗೆ ಹೆಚ್ಚು ಪ್ರಯೋಜನವಾಗುತ್ತದೆ ಎಂದು ಹೇಳಿದರು.

ಮುಂಡರಗಿ ತಾಲೂಕಿನ ಹೆಸರೂರು ಗ್ರಾಮದ ಮಂಜುನಾಥಯ್ಯ ಹಳ್ಳಿ ಅವರು ಭೂಸ್ವಾಧೀನ ಕುರಿತ ಅಹವಾಲು ಸಲ್ಲಿಸಿ, ಜನತಾ ದರ್ಶನ ಕಾರ್ಯಕ್ರಮದಿಂದ ಜನಸಾಮಾನ್ಯರಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ. ಇಂತಹ ಕಾರ್ಯಕ್ರಮಗಳು ತಾಲೂಕು ಮಟ್ಟದಲ್ಲಿಯೂ ನಡೆಯಬೇಕು? ಎಂದು ಸಲಹೆ ನೀಡಿದರು.
ಗಜೇಂದ್ರಗಡ ತಾಲೂಕಿನ ನಾಗರಸಕೊಪ್ಪದ ಗ್ರಾಮದ ಶರಣು ಎಸ್. ಸೊಬರದ ಅವರು ಕೇಂದ್ರೀಯ ವಿದ್ಯಾಲಯ ನಿರ್ಮಾಣಕ್ಕೆ ಸಂಬAಧಿಸಿದAತೆ ಮನವಿ ಸಲ್ಲಿಸಿ, ಜನತಾ ದರ್ಶನ ಜನರ ಅಹವಾಲುಗಳಿಗೆ ಸ್ಪಂದಿಸುವ ಪರಿಣಾಮಕಾರಿ ವೇದಿಕೆಯಾಗಲಿ? ಎಂದು ಆಶಿಸಿದರು. ಅದೇ ಗ್ರಾಮದ ಭಾಗ್ಯಶ್ರೀ ಅಂಗಡಿ ಅವರು ಗೃಹಲಕ್ಷಿ÷್ಮ ಯೋಜನೆಯ ಹಣ ಜಮೆಯಾಗದಿರುವ ಕುರಿತು ಅಹವಾಲು ನೀಡಿ ತ್ವರಿತ ಪರಿಹಾರ ಕೋರಿದರು.

ಒಟ್ಟಾರೆ, ಜನತಾ ದರ್ಶನ ಕಾರ್ಯಕ್ರಮವು ಜನಸಾಮಾನ್ಯರ ಸಮಸ್ಯೆಗಳಿಗೆ ನೇರ ಸ್ಪಂದನೆ ದೊರಕಿಸುವ ವೇದಿಕೆಯಾಗಿ ರೂಪುಗೊಂಡಿದ್ದು, ಬಡವರು ಮತ್ತು ರೈತರ ಪಾಲಿಗೆ ಆಶಾಕಿರಣವಾಗಿ ಪರಿಣಮಿಸಿದೆ ಎಂಬ ಅಭಿಪ್ರಾಯ ಸಾರ್ವಜನಿಕರಿಂದ ವ್ಯಕ್ತವಾಯಿತು.