ಗದಗ 
ರಾಜ್ಯ

ಯುವನಿಧಿ ಯೋಜನೆಯ ಸೌಲಭ್ಯ ಅರ್ಹರು ಪಡೆದುಕೊಳ್ಳಬೇಕು : ಬಿ.ಬಿ.ಅಸೂಟಿ

ಶಿವಾನಂದ ಹಿರೇಮಠ

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರು ಮಾತನಾಡಿ ಯುವನಿಧಿ ಯೋಜನೆಯು ಯುವಕರಿಗೆ ಡಿಗ್ರಿ ಮುಗಿದ ನಂತರ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಯುವಕರು ಯೋಜನೆಯ ಈ ಹಣವನ್ನು ಪಾಕೆಟ್ ಮನಿ ಎಂದು ಬಳಸಿಕೊಳ್ಳದೇ ಉದ್ಯೋಗಕ್ಕೆ ಸಹಾಯವಾಗುವ ಕೌಶಲ್ಯತೆಯನ್ನು ಬೆಳೆಸಿಕೊಳ್ಳಲು ಉಪಯೋಗಿಸಬೇಕು ಎಂದು ತಿಳಿಸಿದರು.
ಆನಂದ ಹೊಂಬಳ ಅವರು ರಾಜ್ಯ ಸರ್ಕಾರದ ಯುವನಿಧಿ ಯೋಜನೆ ವೃತ್ತಿ ಮಾರ್ಗದರ್ಶನ ಕುರಿತು ಹಾಗೂ ಸರಕಾರದಿಂದ ಸಿಗುವ ಸೌಲಭ್ಯಗಳ ಕುರಿತು ವಿವರಿಸಿದರು.

ಉದ್ಯೋಗ ವಿನಿಮಯ ಅಧಿಕಾರಿ ಬಸವಂತಪ್ಪ ಪಿ. ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ವಿ.ಟಿ. ನಾಯ್ಕರ್, ಆದರ್ಶ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎ.ಡಿ.ಗೋಡಖಿಂಡಿ, ವೃತ್ತಿ ಮಾರ್ಗದರ್ಶನದ ಸಮಾಲೋಚನೆಯ ಮುಖ್ಯಸ್ಥರಾದ ಐ.ಎಂ.ಯಾವಗಲ್ , ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದರು.