ಬರ ಸಮೀಕ್ಷೆಯಲ್ಲಿ ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಅನ್ಯಾಯ ಆಗಿದೆ. ಈ ಬಗ್ಗೆ ಸಿಎಂ ಅವರಿಗೆ ಖಾರವಾಗಿ ಪ್ರತಿಕ್ರಿಯಿಸಿ ಪತ್ರ ಬರೆದಿದ್ದೇನೆ ಎಂದು ವಿಧಾನಸಭೆ ಸ್ಪೀಕರ್ ಜಿ.ಎಸ್. ಪಾಟೀಲ ಹೇಳಿದರು.
ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ನಾಗರಿಕ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಬರ ಕುರಿತು ಕುರಿತು ಆಡಳಿತ ಪಕ್ಷದವರೂ ಸಮೀಕ್ಷೆ ನಡೆಸಿದ್ದಾರೆ. ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಹಲವು ತಾಲೂಕುಗಳನ್ನು ಬರ ಎಂದು ಘೋಷಿಸಲಾಗಿದೆ. ಆದರೆ ಬರ ಘೋಷಣೆ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಹಲವು ತಾಲೂಕುಗಳೇ ಇಲ್ಲ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಬರ ಘೋಷಣೆ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ದಕ್ಷಿಣ ಕರ್ನಾಟಕ ತಾರತಮ್ಮ ಮಾಡುತ್ತಿದ್ದಿರಾ ಎಂದು ಸಿಎಂ ಅವರಿಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದೇನೆ. ನಮ್ಮ ಭಾಗದಲ್ಲಿ ಅನ್ಯಾಯ ಆದಾಗಲೆಲ್ಲ ನಾನು ವಿರೋಧ ಮಾಡುತ್ತೇನೆ ಎಂದರು
ನಾನು ಎಷ್ಟು ದಿನ ಸಭಾಪತಿ ಖುರ್ಚಿಯಲ್ಲಿ ಇರುತ್ತೇನೋ ಗೊತ್ತಿಲ್ಲ. ಸಭಾಪತಿ ಆಗಿದಷ್ಟು ದಿನ ಉತ್ತರ ಕರ್ನಾಟಕ ಭಾಗಕ್ಕೆ ನ್ಯಾಯ ಒದಗಿಸುತ್ತೇನೆ ಎಂದು ಜಿ.ಎಸ್ ಪಾಟೀಲ ಹೇಳಿದರು.