ಕಾನೂನು ಸಚಿವ ಎಚ್.ಕೆ. ಪಾಟೀಲ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಗುದ್ದಲಿಪೂಜೆ ನೆರವೇರಿಸಿದರು. ಬಿ.ಬಿ. ಅಸೂಟಿ, ಇಮ್ತಿಯಾಜ್ ಶಿರಹಟ್ಟಿ, ಬಸನಗೌಡ ಕೋಟೂರ, ರಾಜಾರಾಮ ಪವಾರ ಸೇರಿದಂತೆ ಹಲವರು ಉಪಸ್ಥಿತಿ ಇದ್ದರು.
ವಿವಿಧ ವಾರ್ಡಗಳಲ್ಲಿ 3 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ನಗರದ ಕುರಹಟ್ಟಿ ಪೇಟೆ ಸೇರಿದಂತೆ ವಿವಿಧ ವಾರ್ಡಗಳಲ್ಇ 3 ಕೋಟಿವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ನಗರೋತ್ಥಾನ ಯೋಜನೆ ಅಡಿ ನಿರ್ಮಾಣವಾದ ಅಂಗನವಾಡಿ ಕಟ್ಟಡಗಳ ಲೋಕಾರ್ಪಣೆ, ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಮಂಗಳವಾ ಜರುಗಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕಾನೂನು ಸಚಿವ ಎಚ್.ಕೆ. ಪಾಟೀಲ, ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ಎಲ್ಲ ಕಾಂಗಾರಿಗಳನ್ನು ಆದಷ್ಟು ಬೇಗ ರ್ಪೂಣಗೊಳಿಸವಬೇಕು. ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಗುಣಮಟ್ಟದಿಂದ ರ್ಪೂಣಗೊಳಿಸಬೇಕು. ಸಾರ್ವಜನಿಕರ ಅನುಕೂಲಕ್ಕಾಗಿ ಕೈಗೆತ್ತಿಕೊಳ್ಳಲಾಗುತ್ತಿರುವ ರಸ್ತೆ ಕಾಮಗಾರಿಗಳು ದೀರ್ಕಾಲ ಬಾಳಿಕೆ ಬರುವಂತೆ ಕಾಮಗಾರಿಗೆ ನಡೆಸಬೇಕು. ಕಾಮಗಾರಿಯ ಪ್ರತಿಯೊಂದು ಹಂತದಲ್ಲೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಿಗಾ ವಹಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು ಎಂದು ಎಚ್. ಕೆ. ಪಾಟೀಲ ಹೇಳಿದರು.
ನಗರಾಭಿವೃದ್ಧಿಯ ದೃಷ್ಟಿಯಿಂದ ಮೂಲಸೌಕರ್ಯಗಳ ಅಭಿವೃದ್ಧಿ ಅತ್ಯಂತ ಮುಖ್ಯವಾಗಿದೆ. ರಸ್ತೆ, ಕುಡಿಯುವ ನೀರು ಹಾಗೂ ಸಾರ್ವಜನಿಕ ಸೌಲಭ್ಯಗಳಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದರು.
ಅಂಗನವಾಡಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವರು, ಮಕ್ಕಳ ಶೈಕ್ಷಣಿಕ ಜೀವನದ ಅಡಿಪಾಯ ಅಂಗನವಾಡಿಗಳಲ್ಲಿಯೇ ನಿರ್ಮಾಣವಾಗುತ್ತದೆ. ಅಂಗನವಾಡಿಗಳು ಕೇವಲ ಪೋಷಣಾ ಕೇಂದ್ರಗಳಲ್ಲ. ಮಕ್ಕಳ ಬೌದ್ಧಿಕ ಹಾಗೂ ಸಾಮಾಜಿಕ ಬೆಳವಣಿಗೆಯ ಮೊದಲ ಪಾಠಶಾಲೆಗಳಾಗಿವೆ. ಉತ್ತಮ ಕಟ್ಟಡಗಳು ಮತ್ತು ಸಮರ್ಪಕ ಸೌಲಭ್ಯಗಳೊಂದಿಗೆ ಅಂಗನವಾಡಿಗಳು ಗುಣಮಟ್ಟದ ಶಿಕ್ಷಣ ಕೇಂದ್ರಗಳಾಗಿ ರೂಪುಗೊಳ್ಳಬೇಕು. ಮಕ್ಕಳ ಪ್ರಾಥಮಿಕ ಶಿಕ್ಷಣ, ಪೌಷ್ಠಿಕ ಆಹಾರ ಹಾಗೂ ಸಂಸ್ಕಾರಗಳ ಮೊದಲ ಹಂತ ಅಂಗನವಾಡಿಯಲ್ಲಿಯೇ ಆರಂಭವಾಗುತ್ತದೆ. ಉತ್ತಮ ಸೌಲಭ್ಯಗಳೊಂದಿಗೆ ಅಂಗನವಾಡಿಗಳು ಮಕ್ಕಳ ಬೆಳವಣಿಗೆಗೆ ಪೂರಕ ವಾತಾವರಣ ಒದಗಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ವಾರ್ಡ ನಂ.6ರ 35 ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಯಿತು. ನೀಲವ್ವ ಪರಸಪ್ಪ ಬಜಂತ್ರಿ, ರೇಖವ್ವ ರಾಜಪ್ಪ ಬಜಂತ್ರಿ, ಅನಂತ ಬೋಜಪ್ಪ ಬಜಂತ್ರಿ, ಯಮನವ್ವ ಬಜಂತ್ರಿ, ಮಾಯವ್ವ ಬಜಂತ್ರಿ, ಗವಿಸಿದ್ದಪ್ಪ ಬಜಂತ್ರಿ ಸೇರಿದಂತೆ ಹಲವರು ಸಚಿವರಿಂದ ಹಕ್ಕುಪತ್ರ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬಜಿರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ನಗರಸಭಾ ಸದಸ್ಯ ಇಮ್ತಿಯಾಜ್ ಶಿರಹಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ ಸೇರಿದಂತೆ ಹಲವರು ಉಪಸ್ಥಿತಿ ಇದ್ದರು.