ಗದಗ  
ರಾಜ್ಯ

ಛತ್ರಪತಿ ಶಿವಾಜಿ ಮಹಾರಾಜರು ಸ್ವಾಭಿಮಾನದ ಪ್ರತಿಕ: ಸಿ. ಎನ್​. ಶ್ರೀಧರ

ಶಿವಾನಂದ ಹಿರೇಮಠ
ವಿಜಯವಾಣಿ ಸುದ್ದಿಜಾಲ ಗದಗ
ಛತ್ರಪತಿ ಶಿವಾಜಿ ಮಹಾರಾಜರು ಎಂದರೆ ಶಕ್ತಿಯ ಸಂಕೇತ ಹಾಗೂ ಸ್ವಾಭಿಮಾನದ ಪ್ರತಿಕ ಎಂದು ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ ಹೇಳಿದರು
ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಕನ್ನಡ ಮತ್ತು ಸಂಸತಿ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಛತ್ರಪತಿ ಶಿವಾಜಿಯವರು ಅಪ್ಪಟ ದೇಶಪ್ರೇಮಿ ಆಗಿದ್ದರು. ದೇಶ ಕಂಡ ಸಂಟನಾಕಾರ. ತಾಯಿ ಜೀಜಾಬಾಯಿಯ ಪ್ರೇರಣೆಯಿಂದ ಶಿವಾಜಿ ಮಹಾರಾಜರು ಸಂಸ್ಕಾರವಂತರಾಗಿ ಆದರ್ಶ ಜೀವನ ನಡೆಸಲು ಕಾರಣವಾಯಿತು. ಜೀಜಾಬಾಯಿ ಅವರ ಸ್ವರಾಜ್ಯದ ಕನಸು ನನಸು ಮಾಡಿದ ಅಪ್ರತಿಮ ವೀರ ಶಿವಾಜಿ ಮಹಾರಾಜರು. ಶಿವಾಜಿ ಮಹಾರಾಜರ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಉಪನ್ಯಾಸಕ ಹಿರಿಯ ವಕೀಲ ಸುಧೀರಸಿಂಹ ೂರ್ಪಡೆ ಮಾತನಾಡಿ ಶಿವಾಜಿಯವರ ತತ್ವಗಳು ಒಂದೇ ಸಮುದಾಯಕ್ಕೆ ಅಲ್ಲದೇ ಎಲ್ಲ ಸಮುದಾಯಕ್ಕೆ ಸೀಮಿತವಾಗಿವೆ. ಕ್ರಿ.ಶ 1630 ರಲ್ಲಿ ಶಿವನೇರಿ ದುರ್ಗದಲ್ಲಿ ಶಿವಾಜಿ ಮಹಾರಾಜರ ಜನನವಾಗುತ್ತದೆ. ಪರಕೀಯರ ಆಳ್ವಿಕೆಯಲ್ಲಿ ಇರಬಾರದು ಎಂಬುದು ಜೀಜಾಮಾತೆಯು ಬಯಕೆಯಾಗಿತ್ತು. ಶಿವಾಜಿ ಮಹಾರಾಜರು ತಮ್ಮ 13 ನೇ ವರ್ಷದಲ್ಲಿ ಸ್ವರಾಜ್ಯ ಸ್ಥಾಪನೆಯ ಕನಸು ಕಂಡು ಮಾವಳಿಯರ, ರೈತರು, ಗುಡ್ಡಗಾಡು ಜನರ ಸಂಟನೆಯೊಂದಿಗೆ ಮೊಲರ ವಶದಲ್ಲಿರುವ ಕೋಟೆಗಳನ್ನು ವಶಪಡಿಸಿಕೊಂಡರು. ಇವರು ಸಮರ್ಥ ಆಡಳಿತಗಾರ ಆಗಿದ್ದರು. ಗೆರಿಲ್ಲಾ ಯುದ್ಧ ನೀತಿ ಅನುಸರಿಸುತ್ತಿದ್ದರು. 1674ರಲ್ಲಿ ರಾಯಗಡದಲ್ಲಿ ಶಿವಾಜಿಯವರಿಗೆ ಪಟ್ಟಾಭಿಷೇಕವಾಯಿತು. ಅವರು 'ಛತ್ರಪತಿ' ಎಂದು ೂಷಿಸಿಕೊಂಡರು. ಇದು ಕೇವಲ ಒಬ್ಬ ವ್ಯಕ್ತಿಯ ಪಟ್ಟಾಭಿಷೇಕ ಆಗಿರಲಿಲ್ಲ, ಶತಮಾನಗಳ ಪರಕೀಯರ ಆಳ್ವಿಕೆಯ ನಂತರ ಹಿಂದೂ ಸಾಮ್ರಾಜ್ಯವೊಂದು ತಲೆ ಎತ್ತಿ ನಿಂತ ಐತಿಹಾಸಿಕ ಣವಾಗಿತ್ತು ಎಂದು ಶಿವಾಜಿ ಮಹಾರಾಜರ ಶೌರ್ಯ ಪರಾಕ್ರಮ ಸೇರಿದಂತೆ ಜೀವನ ಸಾಧನೆ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಎಸೆಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾಥಿರ್ಗಳಿಗೆ ಮತ್ತು ವಿವಿಧ ೇತ್ರಗಳಲ್ಲಿ ಸಾಧನೆ ಮಾಡಿದ ಸಮುದಾಯದ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಯಿತು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯ ಅಕ್ಬರಸಾಬ್​ ಬಬಚಿರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್​, ಜಿಲ್ಲಾ ಪಂಚಾಯತ ಉಪಕಾರ್ಯದಶಿರ್ ಸಿ.ಆರ್​.ಮುಂಡರಗಿ. ಬಸವರಾಜ ಜಕ್ಕಲಿ, ಸುರೇಶ ಬೇಂದ್ರೆ, ಕೃಷ್ಣಾಜಿ ತುಕ್ಕಪ್ಪನವರ, ಮುರಿಗೆಪ್ಪ ಶೆಟ್ಟರ್​, ಅಜಿತ ಘೋರ್ಪಡೆ, ಯಲ್ಲಪ್ಪ ಬೇಂದ್ರೆ ಹಲವರು ಇದ್ದರು.
ಮೆರವಣಿಗೆ:
ಛತ್ರಪತಿ ಶಿವಾಜಿ ಜಯಂತ್ಯೋತ್ಸವದ ಅಂಗವಾಗಿ ಶ್ರೀರಾಮ ಸೇನಾ ಹಾಗೂ ವಿವಿಧ ಸಂಘಟನೆಯ ಸಹಯೋಗದಲ್ಲಿ ಗುರುವಾರ ನರದಾದ್ಯಂತ ಶಿವಾಜಿ ಮಹಾರಾಜರ ಮೂತಿರ್ಗಳ ಬೃಹತ್​ ಮೆರವಣಿಗೆ ಅದ್ಧೂರಿಯಾಗಿ ಜರುಗಿತು. ಮೆರವಣಿಗೆಯಲ್ಲಿ ಈ ಬಾರಿ 17 ಅಡಿ ಎತ್ತರದ ಪ್ರಭು ಶ್ರೀರಾಮ, ಸಹಸ್ರಾರ್ಜುನ, ಮಹಷಿರ್ ವಾಲ್ಮೀಕಿ, ವೀರಮಾತೆ ಕಿತ್ತೂರ ರಾಣಿ ಚೆನ್ನಮ್ಮ, ಪಾಡುರಂಗ ವಿಠ್ಠಲ ಸೇರಿದಂತೆ ಮೂತಿರ್ಗಳ ಮೆರವಣಿಗೆ ಮಾಡಿದ್ದು ವಿಶೇಷವಾಗಿತ್ತು. ನಗರದ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ಕೇಸರಿ ಧ್ವಜ, ಬಟಿಂಗ್ಸ್​ಗಳನ್ನು ಸಂಘಟಿಕರು ಕಟ್ಟಿದ್ದರು.
ಒಕ್ಕಲಗೇರಿ ಓಣಿಯ ರಾಚೋಟೇಶ್ವರ ದೇವಸ್ಥಾನದಿಂದ ಶಿವಾಜಿ ಜಯಂತಿಯ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಒಕ್ಕಲಗೇರಿ ಓಣಿಯ ರಾಚೋಟೇಶ್ವರ ದೇವಸ್ಥಾನದಿಂದ ಪ್ರಾರಂಭಗೊಂಡ ಭವ್ಯ ಮೆರವಣಿಗೆಯು ಜುಮ್ಮಾ ಮಸೀದಿ, ಬಸವೇಶ್ವರ ಸರ್ಕಲ್​, ಹುಯಿಲಗೋಳ ನಾರಾಯಣರಾವ್​ ಸರ್ಕಲ್​ ಮಾರ್ಗವಾಗಿ ಮುನ್ಸಿಪಲ್​ ಕಾಲೇಜು ಮೈದಾನ ತಲುಪಲಿತು. ರಸ್ತೆ ಬದಿಗಳಲ್ಲಿ, ಮಹಡಿ ಮೇಲೆ ಕಿಕ್ಕಿರಿದು ಸೇರಿದ್ದ ಜನರು ಮೆರವಣಿಗೆಯನ್ನು ಕಣ್ತುಂಬಿಕೊಂಡರು. ಶಿವಾಜಿ ಮಹಾರಾಜ್​ ಕೀ ಜೈ ಎಂಬ ಘೋಷಣೆ ಮೊಳಗಿದವು.
ರಾಜ್ಯದ ನಾನಾ ಜಿಲ್ಲೆಯ ಜನರು ಬಾಗಿ:
ಛತ್ರಪತಿ ಶಿವಾಜಿ ಮೂತಿರ್ ಮೆರವಣಿಗೆಯಲ್ಲಿ ಈ ಬಾರಿ ಸಾವಿರಾರು ಮಂದಿ ಭಾಗವಹಿಸಿದ್ದರು. ಹುಬ್ಬಳ್ಳಿ, ಬಾಗಲಕೋಟೆ, ಕೊಪ್ಪಳ, ಹಾವೇರಿ ಜಿಲ್ಲಾ ಸಂಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು. ಕೊರಳಲ್ಲಿ ಕೇಸರಿ ಶಾಲು, ಹಣೆಯಲ್ಲಿ ಕುಂಕುಮ ಧರಿಸಿದ್ದ ಯುವಪಡೆ ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತ, ಶಿವಾಜಿ, ಶ್ರೀರಾಮ ಘೋಷಣೆ ಕೂಗಿದರು. ಎಲ್ಲೆಲ್ಲೂ ಶಿವಾಜಿ, ಶ್ರೀರಾಮನ ಧ್ವಜಗಳು ಹಾರಾಡಿದವು. ಬೆಳಗ್ಗೆ ಆರಂಭಗೊಂಡ ಮೆರವಣಿಗೆ ನಗರದ ವಿವಿಧೆಡೆಗಳಲ್ಲಿ ಸಂಚರಿಸಿತು.