ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳ ಯೋಗಕ್ಷೇಮ ವಿಚಾರಿದ ಕಾನೂನು ಸಚಿವ ಎಚ್​.ಕೆ. ಪಾಟೀಲ. ಬಿ. ಬಿ. ಅಸೂಟಿ, ಅಕ್ಬರ್​ ಸಾಬ್​ ಬಬಜಿರ್, ಸಿದ್ದು ಪಾಟೀಲ, ಪ್ರಭು ಬುರಬುರೆ, ಸಿ. ಎನ್​. ಶ್ರೀಧರ, ಡಾ. ಬಸವರಾಜ ಬೊಮ್ಮನಹಳ್ಳಿ, ಮುರ್ತುಜಾ ಖಾದ್ರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.  
ರಾಜ್ಯ

ತೋಂಟದಾರ್ಯ ಮಠದ ಅವಘಡ: ಸರ್ಕಾರದಿಂದ 50 ಸಾವಿರ ರೂ ವರೆಗೆ ಚಿಕಿತ್ಸಾ ವೆಚ್ಚ

ಶಿವಾನಂದ ಹಿರೇಮಠ
ನಗರದ ತೋಂಟದಾರ್ಯ ಮಠದ ಆವರಣದಲ್ಲಿ ನಡೆದ ಅವಘಡ
ಸರ್ಕಾರದಿಂದ 50 ಸಾವಿರ ರೂ ವರೆಗೆ ಚಿಕಿತ್ಸಾ ವೆಚ್ಚ ಮಂಜೂರು: ಎಚ್​.ಕೆ. ಪಾಟೀಲ
ವಿಜಯವಾಣಿ ಸುದ್ದಿಜಾಲ ಗದಗ
ನಗರದ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದಲ್ಲಿ ನಡೆದ ಅವಡದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಕಾನೂನು ಸಚಿವ ಎಚ್​.ಕೆ. ಪಾಟೀಲ ಅವರು ಸರ್ಕಾರದಿಂದ 50 ರೂ. ವರೆಗೆ ಚಿಕಿತ್ಸಾ ವೆಚ್ಚ ಮಂಜೂರು ಮಾಡಲಾಗಿದೆ ಎಂದರು ಹೇಳಿದರು. ಸೋಮವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವಡ ಪ್ರಕರಣದಲ್ಲಿ ಒಟ್ಟು 17 ಜನರು ಗಾಯಗೊಂಡಿದ್ದು, ಎಲ್ಲರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹಿರಿಯ ವೈದ್ಯರು ಹಾಗೂ ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. 17 ಜನರಲ್ಲಿ ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ 16 ಜನರಲ್ಲಿ ಬಹುತೇಕರು ಗುಣಮುಖರಾಗಿದ್ದಾರೆ. ಸರ್ಕಾರದಿಂದ 50 ಸಾವಿರ ವರೆಗೆ ಚಿಕಿತ್ಸಾ ವೆಚ್ಚ ಮಂಜೂರು ಮಾಡಲಾಗಿದೆ ಎಂದರು.
ಚಿಕಿತ್ಸಾ ವೆಚ್ಚ ಮಂಜೂರು:
ಟನೆಯ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಗಮನಕ್ಕೂ ತರಲಾಗಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚ ಅಥವಾ ಗರಿಷ್ಠ 50 ಸಾವಿರ ರೂ. ವರೆಗೆ ನೆರವು ನೀಡಲು ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ. ಅದರಂತೆ ಕ್ರಮ ಕೈಗೊಳ್ಳಲಾಗುವುದು. ಚಿಕಿತ್ಸಾ ವೆಚ್ಚ ಹೆಚ್ಚಾದಲ್ಲಿ ಸರ್ಕಾರದಿಂದ ಇನ್ನಷ್ಟು ನೆರವು ನೀಡುವ ಕುರಿತು ಸಹ ಚರ್ಚೆ ನಡೆದಿದೆ. ಗಾಯಾಳುಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.
ಜಾತ್ರೆ ಆಯೋಜಕರ ಜವಾಬ್ದಾರಿ:
ಜಾತ್ರೆಗಳಲ್ಲಿ ನಡೆಯುವ ಮನರಂಜನಾ ಆಟಗಳು ಹಾಗೂ ಇತರ ವ್ಯವಸ್ಥೆಗಳ ಗುತ್ತಿಗೆ ಪಡೆದವರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು. ಅವಡಗಳು ಸಂಭವಿಸಿದಾಗ ಪೊಲೀಸರು ಹಾಗೂ ಸಂಬಂಧಿತ ಇಲಾಖೆಗಳು ಸೂಕ್ತ ಕ್ರಮ ಕೈಗೊಳ್ಳುತ್ತವೆ. ಮುಂದಿನ ದಿನಗಳಲ್ಲಿ ಇಂತಹ ಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದರು. ತೋಂಟದಾರ್ಯ ಮಠದ ಜಾತ್ರೆಯ ಅವಧಿಯನ್ನು ಸೀಮಿತಗೊಳಿಸುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ತೋಂಟದಾರ್ಯ ಮಠದ ಶ್ರೀಗಳು ಹಾಗೂ ಜಾತ್ರಾ ಸಮಿತಿ ಚಚಿರ್ಸಿ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.
ಈ ವೇಳೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ. ಬಿ. ಅಸೂಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್​ ಸಾಬ್​ ಬಬಜಿರ್, ಸಿದ್ದು ಪಾಟೀಲ, ಪ್ರಭು ಬುರಬುರೆ, ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ, ಜಿಮ್ಸ್​ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಡಿವೈಎಸ್ಪಿ ಮುರ್ತುಜಾ ಖಾದ್ರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಲಕ್ಕುಂಡಿ ಕುರಿತು ಮಾತನಾಡಿದ ಸಚಿವರು, ಕಳೆದ ವಾರ ಲಕ್ಕುಂಡಿಯಲ್ಲಿ ಪುರಾತತ್ವ ಅವಶೇಷ ಸಪ್ತಾಹ ಆರಂಭಿಸಲಾಗಿದೆ. ಈ ವೇಳೆ 1300ಕ್ಕೂ ಹೆಚ್ಚು ಪುರಾತತ್ವ ಅವಶೇಷಗಳನ್ನು ಗುರುತಿಸಿ ಬಯಲು ಪ್ರಾಚ್ಯಾವಸ್ತು ಸಂಗ್ರಹಾಲಯಕ್ಕೆ ತರುವ ಕಾರ್ಯ ನಡೆದಿದೆ. ರಾಷ್ಟ್ರಕೂಟರು ಹಾಗೂ ಹೊಯ್ಸಳರ ಕಾಲಕ್ಕೆ ಸೇರಿದ ಅಮೂಲ್ಯ ಶಿಲ್ಪಗಳು ಹಾಗೂ ಪುರಾತತ್ವ ಅವಶೇಷಗಳು ದೊರೆತಿವೆ. ದೇಶದಲ್ಲಿಯೇ ಅತ್ಯುತ್ತಮ ಪುರಾತತ್ವ ಸಂಪತ್ತನ್ನು ಹೊಂದಿರುವ ತಾಣಗಳಲ್ಲಿ ಲಕ್ಕುಂಡಿ ಪ್ರಮುಖ ಸ್ಥಾನ ಪಡೆದಿದೆ. ಲಕ್ಕುಂಡಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಉತ್ಖನನ ಕಾರ್ಯ ಆರಂಭಿಸಲಾಗಿದೆ. ಲಕ್ಕುಂಡಿಯ ವಿಷಯಗಳನ್ನು ಮಾಧ್ಯಮಗಳು ಉತ್ತಮವಾಗಿ ಬೆಳಕಿಗೆ ತರುತ್ತಿದ್ದು, ಲಕ್ಕುಂಡಿ ಜನರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಪುರಾತತ್ವ ಅವಶೇಷಗಳು ದೊರೆತರೂ ಜನರು ಅವನ್ನು ಸರ್ಕಾರ ಹಾಗೂ ಪುರಾತತ್ವ ಪ್ರಾಧಿಕಾರಕ್ಕೆ ಒಪ್ಪಿಸುವ ಮೂಲಕ ದೊಡ್ಡತನ ಮೆರೆದಿದ್ದಾರೆ ಎಂದರು.