ಗದಗ ಜಿಲ್ಲಾಸ್ಪತ್ರೆಗೆ ಶುಕ್ರವಾರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿಚೌಧರಿ ಭೇಟಿ ನೀಡಿ ಪರಿಶೀಲಿಸದರು. ಡಾ. ಬಸವರಾಜ ಬೊಮ್ಮನಹಳ್ಳಿ, ರಾಧಾ ಮಣ್ಣೂರು, ಡಾ. ನಂದಾ ಹಣಬರಹಟ್ಟಿ, ಎಂ. ಎಂ. ತುಂಬರಮಟ್ಟಿ ಇತರರು ಇದ್ದರು.
ವಿಜಯವಾಣಿ ಸುದ್ದಿಜಾಲ ಗದಗ
ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆ ಕಾರ್ಯವೈಖರಿ, ಹೆರಿಗೆ ಮತ್ತು ಬಾಣಂತಿ ವಿಭಾಗದ ಸೌಲಭ್ಯಗಳು, ನಸಿರ್ಂಗ್ ವಿದ್ಯಾಥಿರ್ಗಳ ಹಾಸ್ಟೆಲ್, ಬಿಸಿಎಂ ಹಾಸ್ಟೆಲ್ಗಳಿಗೆ ಭೇಟಿ ನೀಡಿದರು. ಈ ವೇಳೆ ಕೆಲವು ಪ್ರಮುಖ ಕೊರತೆಗಳು ಮತ್ತು ಲೋಪಗಳ ಕುರಿತು ಕಳವಳ ವ್ಯಕ್ತಪಡಿಸಿದ ಅವರು, ಆಸ್ಪತ್ರೆಯ ವೈದ್ಯಕಿಯ ಸೇವೆಗಳನ್ನು ಶ್ಲಾಘಿಸಿದರು.
ಈ ವೇಳೆ ಮಾದ್ಯಮದವರೊಂದಿಗೆ ಮಾತನಾಡದ ಅವರು, ಆಸ್ಪತ್ರೆಯಲ್ಲಿ ಕಳೆದ 3 ವರ್ಷಗಳಲ್ಲಿ ಗಭಿರ್ಣಿಯರು, ತಾಯಂದಿರ ಸಾವಿನ ಪ್ರಮಾಣ ಅತ್ಯಂತ ಕಡಿಮೆ ಇದೆ. ಕೇವಲ 3-4 ಪ್ರಕರಣಗಳು ಜರುಗಿವೆ. ತೀವ್ರ ಸಮಸ್ಯೆಯಿಂದ ಬಳಲುವ ಬಾಣಂತಿಯರನ್ನು ರಕ್ಷಿಸಲು ಆಸ್ಪತ್ರೆಯಲ್ಲಿ ಪ್ರತ್ಯೇಕ ಸ್ಪೆಷಲ್ ತಂಡ ರಚಿಸಿದ್ದು ಪ್ರಶಂಸನೀಯ. ರಕ್ತದೊತ್ತಡ, ರಕ್ತಸ್ರಾವ ಹಾಗೂ ಫಿಟ್ಸ್ ನಂತಹ ಸಮಸ್ಯೆಯಿಂದ ತಾಯಂದಿರು ಸಾವನ್ನಪ್ಪುವುದನ್ನು ತಡೆಯಲು ಈ ಆಸ್ಪತ್ರೆ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮ ಅತ್ಯುತ್ತಮವಾಗಿದೆ. ಈ ಮಾದರಿಯನ್ನು ರಾಜ್ಯದ ಎಲ್ಲಾ ಬೋಧಕ ಆಸ್ಪತ್ರೆಗಳು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲೂ ಜಾರಿಗೆ ತರಲು ಆರೋಗ್ಯ ಇಲಾಖೆಯ ಆಯುಕ್ತರು ಹಾಗೂ ಸರ್ಕಾರ ಗಮನಕ್ಕೆ ತರುವುದಾಗಿ ತಿಳಿಸಿದರು.
ಹೆಪಟೈಟಿಸ್ ಲಸಿಕೆ ನೀಡದಿರುವುದಕ್ಕೆ ಅಸಮಾಧಾನ:
ಕ್ಲಿನಿಕಲ್ ತರಬೇತಿಗೆ ತೆರಳುವ ಮುನ್ನ ನಸಿರ್ಂಗ್ ವಿದ್ಯಾಥಿರ್ಗಳಿಗೆ ಕಡ್ಡಾಯವಾಗಿ ನೀಡಬೇಕಾದ ಹೈಪಟೈಟಿಸ್ ಲಸಿಕೆಯನ್ನು ನೀಡದಿರುವುದನ್ನು ಗಮನಿಸಿದ ಅವರು ವೈದ್ಯಾಧಿಕಾರಿಗಳ ನಿರ್ಲಕ್ಷ$್ಯವನ್ನು ಎಚ್ಚರಿಸಿದರು. ತಕ್ಷಣವೇ ಸಂಬಂಧ ಪಟ್ಟವರ ವಿರುದ್ಧ ಕ್ರಮ ಕೈಗೊಂಡು, ಎಲ್ಲ ನಸಿರ್ಂಗ್ ವಿದ್ಯಾಥಿರ್ಗಳಿಗೆ ಕೂಡಲೇ ಲಸಿಕೆ ಹಾಕಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಹೆಣ್ಣು ಭ್ರೂಣ ಹತ್ಯೆ ಮತ್ತು ಲಿಂಗಾನುಪಾತದ ಆತಂಕ:
ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಗಳಲ್ಲಿ ಹೆಣ್ಣು ಮಕ್ಕಳಿಗಿಂತ ಗಂಡು ಮಕ್ಕಳ ಜನನ ಪ್ರಮಾಣವೇ ಹೆಚ್ಚಾಗುತ್ತಿರುವುದು ಮತ್ತು ನೈಸಗಿರ್ಕ ನಿಯಮಕ್ಕೆ ವಿರುದ್ಧವಾಗಿ ಲಿಂಗಾನುಪಾತದಲ್ಲಿ ವ್ಯತ್ಯಾಸ ಕಾಣಿಸುತ್ತಿರುವುದು ಗಂಭೀರ ವಿಷಯ. ಇದು ಕಾನೂನುಬಾಹಿರವಾಗಿ ಲಿಂಗ ಪತ್ತೆ ಹಾಗೂ 'ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿರುವುದರ ಸೂಚಕವಾಗಿದೆ. ಈ ಕುರಿತು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ವರದಿ ಪಡೆಯಲಾಗುವುದು ಎಂದು ತಿಳಿಸಿದರು.
ಋತುಚಕ್ರ ರಜೆ:
ಆಸ್ಪತ್ರೆಯಲ್ಲಿ ಡಿ ಗ್ರೂಪ್ ಮತ್ತು ಹೊರಗುತ್ತಿಗೆ ನೌಕರರಿಗೆ ಸಮವಸ್ತ್ರ ಸೇವಾ ಭದ್ರತೆ ಹಾಗೂ ಪರಿಷತ ಕನಿಷ್ಠ ವೇತನ ದೊರೆಯುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡುವ ಕುರಿತು ವೈದ್ಯಕಿಯ ಶಿಕ್ಷಣ ಇಲಾಖೆಯಿಂದ ಸ್ಪಷ್ಟಿಕರಣ ಕೇಳಲಾಗಿದೆ. ಎಲ್ಲಾ ಮಹಿಳೆಯರಿಗೂ ಇದು ಅನ್ವಯವಾಗುವಂತೆ ಸರ್ಕಾರದ ಮಟ್ಟದಲ್ಲಿ ಕ್ರಮ ವಹಿಸಲಾಗುವುದು ಎಂದು ಡಾ. ನಾಗಲಕ್ಷಿ$್ಮ ಚೌಧರಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಡಾ. ನಂದಾ ಹಣಬರಹಟ್ಟಿ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಎಂ. ಎಂ. ತುಂಬರಮಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ ಬಿದರಿ ಹಲವು ಇದ್ದರು.