ಗದಗ ಜಿಲ್ಲಾಡಳಿತ ಭವನದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳ ಸಮಗ್ರ ಪ್ರಗತಿ ಪರಿಶೀಲನೆ ಜರುಗಿತು. ಯು. ನಿಸಾರ ಅಹಮದ್, ರೋಹನ್ ಜಗದೀಶ್, ಪದ್ಮಾವತಿ ಜಿ, ಆರ್. ಎಸ್. ಬುರುಡಿ, ಅಮಿತ ಬಿದರಿ, ಡಾ. ಎಸ್. ಎಸ್. ನೀಲಗುಂದ ಇತರರು ಇದ್ದರು.
ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳ ಸಮಗ್ರ ಪ್ರಗತಿ ಪರಿಶೀಲನೆ
ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ ಅಹಮದ್ ಅವರು ಬುಧವಾರ ಜಿಲ್ಲಾಡಳಿತ ಭವನದಲ್ಲಿ ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಯು. ನಿಸಾರ ಅಹಮದ್ ಅವರು, ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಣ ಪಡೆದ ಪ್ರತಿಯೊಂದು ಮಗು ಮುಂದಿನ ಹಂತವಾಗಿ ಸರ್ಕಾರಿ ಅಥವಾ ಖಾಸಗಿ ಶಾಲೆಗಳ 1ನೇ ತರಗತಿಗೆ ಸೇರ್ಪಡೆ ಆಗಿರುವುದನ್ನು ಸಂಬಂಧಿತ ಇಲಾಖೆ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಮಕ್ಕಳ ಶಿಣದಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗಬಾರದು. ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಣದಿಂದ ದೂರವಾಗದಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಶಾಲಾ ಶಿಕ್ಷಣ, ಪೌಷ್ಠಿಕ ಆಹಾರ, ವಿದ್ಯಾಥಿರ್ವೇತನ, ಆರೋಗ್ಯ ಸೇವೆಗಳು ಸೇರಿದಂತೆ ಸರ್ಕಾರ ನೀಡುವ ಸೌಲಭ್ಯಗಳು ಸಮರ್ಪಕವಾಗಿ ಮಕ್ಕಳಿಗೆ ತಲುಪುವಂತೆ ನೋಡಿಕೊಳ್ಳಬೇಕು. ಸರ್ಕಾರದ ವಿವಿಧ ಯೋಜನೆಗಳು ಕೇವಲ ಕಾಗದದಲ್ಲಿ ಮಾತ್ರ ಉಳಿಯದೆ, ನೆಲಮಟ್ಟದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಇದಕ್ಕಾಗಿ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು, ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಗದಗ ಜಿಲ್ಲೆಯು ಕೋಮು ಸೌಹಾರ್ದತೆಗೆ ಹೆಸರುವಾಸಿ ಆಗಿದೆ. ಎಲ್ಲ ಸಮುದಾಯಗಳು ಪರಸ್ಪರ ಸಹಕಾರದಿಂದ ಬದುಕುತ್ತಿರುವುದು ರಾಜ್ಯಕ್ಕೆ ಮಾದರಿಯಾಗಿದೆ. ತಮ್ಮ ಪೊಲೀಸ್ ವೃತ್ತಿ ಜೀವನದ ಆರಂಭವನ್ನು ಗದಗ ಜಿಲ್ಲೆಯ ನರಗುಂದದಲ್ಲಿ ಸೇವೆ ಸಲ್ಲಿಸಿದ್ದೇನೆ. ಪೊಲೀಸ್ ಇಲಾಖೆಯು ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ. ಸಮಾಜದಲ್ಲಿ ಶಾಂತಿ ನೆಲೆಸಲು ಪೊಲೀಸ್ ಇಲಾಖೆ ಇನ್ನಷ್ಟು ಚುರುಕಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ವರದಿಗಳನ್ನು ಪರಿಶೀಲಿಸಿ, ಕಾರ್ಯ ನಿರ್ವಹಣೆಯ ಗುಣಮಟ್ಟವನ್ನು ಹೆಚ್ಚಿಸುವುದು, ಗುರಿ ಸಾಧನೆಗೆ ವೇಗ ನೀಡುವುದು, ಹಾಗೂ ಜನಸಾಮಾನ್ಯರಿಗೆ ಹೆಚ್ಚಿನ ಪ್ರಯೋಜನವಾಗುವಂತೆ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಅವರು ಸೂಕ್ತ ಮಾರ್ಗದರ್ಶನ ನೀಡಿದರು.
ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಮಾತನಾಡಿ ಶಾಲಾ ಕಾಲೇಜು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕರಿಯರ್ ಗೈಡನ್ಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಅರ್ಹ ಅಲ್ಪಸಂಖ್ಯಾತ ಲಾನುಭವಿಗಳಿಗೆ ವಿವಿಧ ಇಲಾಖೆಗಳಿಂದ ಇರುವ ಸೌಲಭ್ಯಗಳನ್ನು ವಿಳಂಬವಿಲ್ಲದೇ ದೊರಕಿಸುವಲ್ಲಿ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಶಾಲಾ ಶಿಣ ಇಲಾಖೆಯಿಂದ ಏ. 2025 ರಿಂದ ಮಾ. 2026 ರ ಅಂತ್ಯದವರೆಗೆ ಸಮವಸ್ತ್ರ ಮತ್ತು ಶೂ ಮತ್ತು ಸಾಕ್ಸ್ ಯೋಜನೆಯಡಿ 14794 ಲಾನುಭವಿಗಳು ಸೌಲಭ್ಯ ಪಡೆದಿರುತ್ತಾರೆ. ಅರ ದಾಸೋಹ ಮತ್ತು ರ ಭಾಗ್ಯ ಯೋಜನೆಯಡಿ 19128 ಲಾನುಭವಿಗಳು ಸೌಲಭ್ಯ ಪಡೆದಿರುತ್ತಾರೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಏ. 2025 ರಿಂದ ಮಾ. 2026 ರ ಅಂತ್ಯದವರೆಗೆ 5187 ಲ ರೂ. ವೆಚ್ಚ ಮಾಡಲಾಗಿದ್ದು 798 ಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿರುತ್ತಾರೆ. ಪ್ರಸಕ್ತ ಉದ್ಯೋಗ ಮೇಳದಲ್ಲಿ 8 ಜನ ಅಲ್ಪಸಂಖ್ಯಾತರಿಗೆ ಉದ್ಯೋಗ ಪಡೆದಿರುತ್ತಾರೆ ಎಂದು ಸಭೆಗೆ ಮಾಹಿತಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್ , ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ, ಶಾಲಾ ಶಿಣ ಇಲಾಖೆಯ ಉಪನಿರ್ದೇಶಕ ಆರ್. ಎಸ್. ಬುರುಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ ಬಿದರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಎಸ್. ಎಸ್. ನೀಲಗುಂದ ಇತರರು ಇದ್ದರು.