ಗದಗ  
ರಾಜ್ಯ

ಕನಕ ಸಾಹಿತ್ಯ ಸಂಭ್ರಮ ಹಾಗೂ 100ನೇ ಉಪನ್ಯಾಸ

ಶಿವಾನಂದ ಹಿರೇಮಠ
ಮಾ.1 ರಂದು ಕನಕ ಸಾಹಿತ್ಯ ಸಂಭ್ರಮ : ವಿದ್ಯಾರ್ಥಿಗಳಿಗೆ ಸನ್ಮಾನ : ಫಕ್ಕೀರಪ್ಪ ಹೆಬಸೂರ  
ಗದಗ :  ಬೆಂಗಳೂರಿನ ಕನಕದಾಸರ ಸಾಹಿತ್ಯ ಪ್ರಚಾರ ಸಮಿತಿಯ ಸಹಯೋಗದೊಂದಿಗೆ ಇದೇ ಮಾ.1 ರಂದು ಬೆಳಗ್ಗೆ 9.30 ಕ್ಕೆ ನಗರದ ಕನಕಭವನದಲ್ಲಿ ಕನಕ ಸಾಹಿತ್ಯ ಸಂಭ್ರಮ ಹಾಗೂ 100ನೇ ಉಪನ್ಯಾಸದ ವೇದಿಕೆಯ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕೀರಪ್ಪ ಹೆಬಸೂರ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ  ಅವರು ಮಾತನಾಡಿ, ರಾಮಕೃಷ್ಣ ಯೋಗಾಶ್ರಮದ ಜಗದ್ಗುರು ಸ್ವಾಮಿ ಯೋಗೇಶ್ವರಾನಂದ ಸ್ವಾಮೀಜಿ, ಮನಸೂರ ಜ.ಡಾ.ಬಸವರಾಜ ದೇವರು ಸ್ವಾಮೀಜಿ ಸಾನ್ನಿಧ್ಯ ವಹಿಸುತ್ತಾರೆ. ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕೀರಪ್ಪ ಹೆಬಸೂರ ಅಧ್ಯಕ್ಷತೆ ವಹಿಸುವರು. ಹಾಲುಮತ ಭಾಸ್ಕರ ರಾಜ್ಯ ಕನಕ ಶ್ರೀ ಪ್ರಶಸ್ತಿ ಪುರಸ್ಕöÈತ ಡಾ.ಲಿಂಗದಾಳ ಹಾಲಪ್ಪ ಕಾರ್ಯಕ್ರಮ ಉದ್ಘಾಟನೆ ಮಾಡುವರು. ಕೆ.ಎಚ್.ಪಾಟೀಲ ಕಾಲೇಜ್ ಪ್ರಾಧ್ಯಾಪಕಿ ಡಾ.ಸುಧಾ ಕೌಜಗೇರಿ ಉಪನ್ಯಾಸ ನೀಡುವರು.  ಹಸ್ತ ಪ್ರತಿ ಶಾಸ್ತç ಪ್ರಾಧ್ಯಾಪಕ ಪ್ರೊ.ಎಫ್.ಟಿ.ಹಳ್ಳಿಕೇರಿ, ಮಂಜುನಾಥ ಹೊನ್ನಣ್ಣವರ, ಡಾ.ಹನಮಗೌಡ ಪಾಟೀಲ, ವಾಸಣ್ಣ ಕುರಡಗಿ,  ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ, ರವಿ ದಂಡಿನ, ಪ್ರಕಾಶ ಕರಿ, ಸುರೇಶ ಕೊಪ್ಪದ, ರಾಜಶೇಖರ ಕಲ್ಲೂರ, ಸಿದ್ಧಲಿಂಗ ಬಂಡು, ಆರ್.ಎಸ್.ಬುರಡಿ,ರಾಮಕೃಷ್ಣ ರೊಳ್ಳಿ ಸೇರಿದಂತೆ ಮುಂತಾದವರು ಬಾಗವಹಿಸುವರು ಎಂದರು. 
ಇದೇ ಸಂದರ್ಭದಲ್ಲಿ ಗದಗ, ರೋಣ, ಮುಂಡರಗಿ, ನರಗುಂದ, ಶಿರಹಟ್ಟಿ, ಲಕ್ಷೆ÷್ಮÃಶ್ವರ ಮತ್ತು ಗಜೇಂದ್ರಗಡ ಪದವಿ ಪೂರ್ವ ಕಾಲೇಜಿನ ಮತ್ತು ಪ್ರೌಢಶಾಲೆಯ ಹಂತದ ಕನಕದಾಸರ ಸಾಹಿತ್ಯ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ 76 ರಿಂದ 100 ನೇ ಆನ್‌ಲೈನ್ ಗೂಗಲ್ ಮೀಟ್‌ನಲ್ಲಿ ಕನಕದಾಸರ ಸಾಹಿತ್ಯದ ಉಪನ್ಯಾಸ ನೀಡಿದವರಿಗೆ ಸನ್ಮಾನ ಮಾಡಲಾಗುತ್ತದೆ, ಕನಕ ದಾಸರ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ 42 ವಿದ್ಯಾರ್ಥಿಗಳಿಗೆ ನಗದು ಬಹುಮಾನ ಜತೆಗೆ ಪ್ರಮಾಣ ಪತ್ರ ವಿತರಣೆ ಮಾಡಲಾಗುತ್ತದೆ ಎಂದರು. 
 ಈ ಪತ್ರಿಕಾಗೋಷ್ಠಿಯಲ್ಲಿ  ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ, ಆರ್.ಜಿ.ಕಲ್ಲೂರ, ಬಿ.ಎಸ್.ಕೆರಿ, ಈರಪ್ಪ ಹಳ್ಯಾಳ , ಪ್ರೋ. ಮಾರುತಿ ಮಡ್ಡಿ,  ಸಿದ್ಧಲಿಂಗೇಶ್ವರ ಯಂಡಿಗೇರಿ, ಹೇಮಂತ ಗಿಡ್ಡಹಣ್ಣಮನವರ, ಸೋಮನಗೌಡ ಪಾಟೀಲ, ಮುತ್ತು ಜಡಿ,ರಾಘು ವಗ್ಗನವರ ಸೇರಿದಂತೆ ಇತರರು ಇದ್ದರು.