ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ರೈತ ಸಂಟನೆಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದವು.
ಪ್ರತಿ ಎಕರೆಗೆ 50 ಸಾವಿರ ಪರಿಹಾರ, ಕೃಷಿ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ
ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಗರದಲ್ಲಿ ರಾಜ್ಯ ಸಂ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಅವರಿಗೆ ಮನವಿ ಸಲ್ಲಿಸಿದರು.
ನಗರದ ಕಿತ್ತೂರಾಣಿ ಚೆನ್ನಮ್ಮ ವೃತ್ತದಿಂದ ಜಿಲ್ಲಾಡಳಿತವರೆಗೆ ಪಾದಯಾತ್ರೆ ಮಾಡಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಒತ್ತಾಯಿಸಿದರು.
ಜಿಲ್ಲೆಯಾದ್ಯಂತ ಸಮರ್ಪಕ ಮಳೆಯಾಗದೆ ಬೆಳೆಗಳು ಕೈಕೊಟ್ಟಿವೆ. ಬಿತ್ತನೆ, ಬೀಜ, ಗೊಬ್ಬರ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಹಣ ಖರ್ಚು ಮಾಡಿದ ರೈತರು ಇದೀಗ ಬೆಳೆ ನಷ್ಟದಿಂದ ಆಥಿರ್ಕ ಸಂಕಷ್ಟ ಎದುರಿಸುತ್ತಿದ್ದಾರೆ. ಬರಪೀಡಿತ ಪ್ರದೇಶದ ನಿಯಮಾನುಸಾರ ಪ್ರತಿ ಎಕರೆಗೆ 50 ಸಾವಿರ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.
ಇದಲ್ಲದೆ, ಬರ ಪರಿಸ್ಥಿತಿಯಿಂದ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗುವ ಸಾಧ್ಯತೆ ಇರುವುದರಿಂದ ಪ್ರತಿ ಹೋಬಳಿ ಮಟ್ಟದಲ್ಲಿ ಗೋಶಾಲೆ ಹಾಗೂ ಮೇವು ಬ್ಯಾಂಕ್ಗಳನ್ನು ತೆರೆಯಬೇಕು. ರೈತರು ಕೃಷಿ ಚಟುವಟಿಕೆಗಳಿಗಾಗಿ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್ಗಳಲ್ಲಿ ಪಡೆದಿರುವ ಬೆಳೆ ಸಾಲವನ್ನು ಪ್ರಸಕ್ತ ಬರಗಾಲದ ಹಿನ್ನೆಲೆಯಲ್ಲಿ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಬೆಳೆ ವಿಮೆ ಬಿಡುಗಡೆಗೆ ಒತ್ತಾಯ:
2025&26ನೇ ಸಾಲಿನ ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಹಲವು ರೈತರು ಬೆಳೆ ವಿಮೆ ಪಾವತಿಸಿದ್ದಾರೆ. ಆದರೆ ಕೆಲ ರೈತರಿಗೆ ತಾಂತ್ರಿಕ ಹಾಗೂ ಇತರ ಕಾರಣಗಳಿಂದ ಸಮರ್ಪಕವಾಗಿ ಬೆಳೆ ವಿಮೆ ಪರಿಹಾರ ದೊರೆತಿಲ್ಲ. ಈ ಕುರಿತು ಕೂಡಲೇ ಪರಿಶೀಲನೆ ನಡೆಸಿ, ಬೆಳೆ ವಿಮೆ ಪಾವತಿಸಿರುವ ಅರ್ಹ ರೈತರಿಗೆ ಸಂರ್ಪೂಣ ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡಬೇಕು. ಜಿಲ್ಲೆಯಲ್ಲಿ ಬೆಳೆ ವಿಮೆಗೆ ಸಂಬಂಧಿಸಿದ ಎಲ್ಲ ಅಜಿರ್ಗಳನ್ನು ಪುನರ್ ಪರಿಶೀಲಿಸಿ ಅರ್ಹ ರೈತರಿಗೆ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಅರಣ್ಯ ಹಕ್ಕುಪತ್ರ, ರೇಷ್ಮೆ ಬೆಳೆಗಾರರಿಗೆ ನೆರವು:
1978 ರಿಂದ ಅರಣ್ಯ ಒತ್ತುವರಿದಾರರು ಹಾಗೂ ಬಗರಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ದೊರೆಯದೆ ಇರುವ ಪ್ರಕರಣಗಳನ್ನು ಕೂಡಲೇ ಪರಿಶೀಲಿಸಿ, ಅರ್ಹರಿಗೆ ಅರಣ್ಯ ಹಕ್ಕುಪತ್ರ ಹಾಗೂ ಪಟ್ಟಾ ನೀಡಬೇಕು. ಅರಣ್ಯ ಒತ್ತುವರಿ ಪ್ರಕರಣಗಳಲ್ಲಿ ರೈತರ ವಿರುದ್ಧ ದಾಖಲಿಸಿರುವ ಪ್ರಕರಣಗಳು ಹಾಗೂ ಎಫ್ಐಆರ್ಗಳನ್ನು ಹಿಂಪಡೆಯಬೇಕು. ರೀತಿ ರೇಷ್ಮೆ ಬೆಳೆಗಾರರಿಗೆ ಸರ್ಕಾರದಿಂದ ದೊರೆಯಬೇಕಾದ ಸಹಾಯಧನ ಸರಿಯಾದ ರೀತಿಯಲ್ಲಿ ಲಭ್ಯವಾಗುತ್ತಿಲ್ಲ. ಈ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿ ಅರ್ಹ ರೇಷ್ಮೆ ಬೆಳೆಗಾರರಿಗೆ ಕೂಡಲೇ ಸಹಾಯಧನ ಒದಗಿಸಬೇಕು ಎಂದು ಹೇಳಿದರು.