ಶಾಲಾ ಮಕ್ಕಳನ್ನು ಗ್ರಾಮದಾದ್ಯಂತ ಟ್ರಾ$್ಯಕ್ಟರ್​ ನಲ್ಲಿ ಮೆರವಣಿಗೆ ಮೂಲಕ ಶಾಲೆಗೆ ಕರೆತರಲಾಯಿತು. 
ರಾಜ್ಯ

ಶಾಲಾ ಅರಂಭೋತ್ಸವ! ಎತ್ತಿನಗಾಡಿ ಮೆರವಣಿಗೆ, ಪುಷ್ಪವೃಷ್ಟಿಯೊಂದಿಗೆ ಮಕ್ಕಳಿಗೆ ಭವ್ಯ ಸ್ವಾಗತ

ವಿಜಯವಾಣಿ ವಿಶೇಷ ಗದಗ
ಹೊಸ ಶೈಕ್ಷಣಿಕ ವರ್ಷದ ಆರಂಭವನ್ನು ಸ್ಮರಣೀಯವಾಗಿಸುವ ಉದ್ದೇಶದಿಂದ ಗದಗ ಜಿಲ್ಲೆಯ ತಾಲೂಕಿನ ಅಸುಂಡಿಯ ಕುವೆಂಪು ಶತಮಾನೋತ್ಸವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾರಂಭೋತ್ಸವ ಕಾರ್ಯಕ್ರಮ ಸೋಮವಾರ ಅತ್ಯಂತ ಅದ್ದೂರಿಯಾಗಿ ಹಾಗೂ ಸಂಭ್ರಮದಿಂದ ಜರುಗಿತು. ಶಾಲೆಯ ಮೊದಲ ದಿನವೇ ಮಕ್ಕಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಮತ್ತು ಉತ್ಸಾಹ ಮೂಡಿಸುವ ಉದ್ದೇಶದಿಂದ ವಿವಿಧ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿದ್ಯಾಥಿರ್ಗಳ ಭವ್ಯ ಮೆರವಣಿಗೆ ನಡೆಸಲಾಯಿತು. ಎತ್ತಿನಗಾಡಿ ಹಾಗೂ ಟ್ರಾ$್ಯಕ್ಟರ್​ಗಳಲ್ಲಿ ಮಕ್ಕಳನ್ನು ಕೂರಿಸಿಕೊಂಡು ಗ್ರಾಮದಲ್ಲಿ ಮೆರವಣಿಗೆ ನಡೆಸಿ ಶಾಲೆಗೆ ಕರೆತರಲಾಯಿತು. ಶಾಲೆಯ ಮುಖ್ಯ ದ್ವಾರದಲ್ಲಿ ಅತಿಥಿಗಳು ಹಾಗೂ ಶಿಕ್ಷಕರು ಸೇರಿ ಮಕ್ಕಳ ಮೇಲೆ ಪುಷ್ಪವೃಷ್ಟಿ ಮಾಡುವ ಮೂಲಕ ಶಾಲೆಗೆ ಆತ್ಮೀಯವಾಗಿ ಬರಮಾಡಿಕೊಂಡರು. ಮಕ್ಕಳಿಗಾಗಿ ವಿಶೇಷವಾಗಿ ನಿಮಿರ್ಸಲಾಗಿದ್ದ ಸೆಲ್ಫಿ ಕಾರ್ನರ್​ ವಿದ್ಯಾಥಿರ್ಗಳು ಮತ್ತು ಪಾಲಕರ ಗಮನ ಸೆಳೆಯಿತು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್​. ಎಸ್​. ಬುರಡಿ ಮಾತನಾಡಿ, ಶಿಕ್ಷಣವು ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕಾಗಿದೆ. ಸರ್ಕಾರ ಮತ್ತು ಸಂವಿಧಾನದ ಆಶಯವೂ ಎಲ್ಲ ಮಕ್ಕಳಿಗೆ ಗುಣಮಟ್ಟದ ಹಾಗೂ ಸಮಾನ ಶಿಕ್ಷಣ ಒದಗಿಸುವುದಾಗಿದೆ. ಮಕ್ಕಳಿಗೆ ಸುರಕ್ಷಿತ, ಸಂತೋಷದಾಯಕ ಮತ್ತು ಪ್ರೇರಣಾದಾಯಕ ವಾತಾವರಣದಲ್ಲಿ ಶಿಕ್ಷಣ ದೊರೆಯಬೇಕು. ಶಾಲೆಯ ಮೊದಲ ದಿನವೇ ಮಕ್ಕಳಲ್ಲಿ ಶಾಲೆಯ ಬಗ್ಗೆ ಪ್ರೀತಿ ಮತ್ತು ಅಭಿಮಾನ ಮೂಡಬೇಕು. ಅದಕ್ಕಾಗಿ ಪಾಲಕರು, ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಶಾಲಾರಂಭದ ದಿನ ಮೂಡುವ ಸಂತಸ ಮಕ್ಕಳಲ್ಲಿ ವರ್ಷಪೂತಿರ್ ಕಲಿಕೆಯ ಉತ್ಸಾಹವನ್ನು ಉಳಿಸಬಲ್ಲದು ಎಂದು ಹೇಳಿದರು.
ಪ್ರತಿ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಪೂರ್ವಯೋಜಿತವಾಗಿ ರೂಪಿಸಿ ಅನುಷ್ಠಾನಗೊಳಿಸುವುದೇ ಶಾಲಾರಂಭೋತ್ಸವದ ಪ್ರಮುಖ ಉದ್ದೇಶ. ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಸರ್ಕಾರಿ ಶಾಲೆಗಳು ಇಂದು ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲ್ಲ ಎಂಬುದನ್ನು ಸಮಾಜ ಅರಿಯಬೇಕು ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಆಧುನಿಕ ಕಲಿಕಾ ಸೌಲಭ್ಯಗಳು, ಉತ್ತಮ ಶಿಕ್ಷಕರ ಬಳಗ, ಪಠ್ಯಪುಸ್ತಕಗಳು, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ವಿದ್ಯಾಥಿರ್ ಸ್ನೇಹಿ ವ್ಯವಸ್ಥೆಗಳು ಲಭ್ಯವಿವೆ. ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲಿಷ್​ ಶಿಕ್ಷಣವನ್ನೂ ಒದಗಿಸಲಾಗುತ್ತಿದ್ದು, ಗ್ರಾಮೀಣ ಭಾಗದ ವಿದ್ಯಾಥಿರ್ಗಳೂ ಜಾಗತಿಕ ಮಟ್ಟದಲ್ಲಿ ಸ್ಪಧಿರ್ಸುವ ಸಾಮರ್ಥ್ಯ ಹೊಂದುವಂತೆ ಶಿಕ್ಷಣ ನೀಡಲಾಗುತ್ತಿದೆ ಎಂದು ಹೇಳಿದರು.
ಸರ್ಕಾರದ ಆಶಯ ಮಕ್ಕಳು ಶಾಲೆಯಲ್ಲಿರಬೇಕು, ವಿದ್ಯಾವಂತರಾಗಬೇಕು ಮತ್ತು ಸಂಸ್ಕಾರವಂತರಾಗಬೇಕು ಎಂಬುದಾಗಿದೆ. ಶಾಲೆ ನಮ್ಮದು ಎಂಬ ಭಾವನೆ ಪಾಲಕರು, ಶಿಕ್ಷಕರು ಮತ್ತು ಗ್ರಾಮಸ್ಥರಲ್ಲಿ ಮೂಡಿದಾಗ ಮಾತ್ರ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯವಾಗುತ್ತದೆ. ಅಸುಂಡಿ ಶಾಲೆಯಲ್ಲಿ ಗುಣಮಟ್ಟದ ಕಲಿಕೆಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳಿದ್ದು, ವಿದ್ಯಾಥಿರ್ಗಳು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ನಿವೃತ್ತ ಉಪನಿರ್ದೇಶಕ ಎ. ಎನ್​. ನಾಗರಳ್ಳಿ ಮಾತನಾಡಿ, ಶಿಕ್ಷಕರ ಪಾತ್ರ ಸಮಾಜ ನಿಮಾರ್ಣದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳಿಗೆ ಶಿಕ್ಷಕರು ಕಲಿಸಿದರೆ ಅವರು ಖಂಡಿತ ಕಲಿಯುತ್ತಾರೆ. ಆದ್ದರಿಂದ ಶಿಕ್ಷಕರು ಪಾಠ ಬೋಧನೆಯಲ್ಲಿ ಹೆಚ್ಚಿನ ಬದ್ಧತೆ ಮತ್ತು ಜವಾಬ್ದಾರಿಯೊಂದಿಗೆ ಕಾರ್ಯ ನಿರ್ವಹಿಸಬೇಕು. ಶಿಕ್ಷಕರು ಏನನ್ನು ಕಲಿಸುತ್ತಾರೋ ಅದನ್ನೇ ಮಕ್ಕಳು ಕಲಿಯುತ್ತಾರೆ. ಹೀಗಾಗಿ ಮಕ್ಕಳಲ್ಲಿ ಉತ್ತಮ ಮೌಲ್ಯಗಳು ಮತ್ತು ಜ್ಞಾನವನ್ನು ಬೆಳೆಸುವ ಕೆಲಸ ಶಿಕ್ಷಕರಿಂದ ಆಗಬೇಕು ಎಂದು ತಿಳಿಸಿದರು.
ಎಚ್​. ಕೆ. ಬೂಮ್ಮಕ್ಕನವರ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳ ಅಸ್ತಿತ್ವ ಉಳಿಸುವ ಅಗತ್ಯವಿದೆ. ಖಾಸಗಿ ಶಾಲೆಗಳ ಹೆಚ್ಚಳದ ನಂತರ ಅನೇಕ ಸರ್ಕಾರಿ ಶಾಲೆಗಳು ವಿದ್ಯಾಥಿರ್ಗಳ ಕೊರತೆಯಿಂದ ಸಂಕಷ್ಟ ಎದುರಿಸುತ್ತಿವೆ. ಸರ್ಕಾರಿ ಶಾಲೆಗಳ ಉಳಿವಿಗೆ ಪಾಲಕರು, ಹಳೆಯ ವಿದ್ಯಾಥಿರ್ಗಳು ಮತ್ತು ಸಮಾಜದ ಎಲ್ಲ ವರ್ಗದವರು ಕೈಜೋಡಿಸಬೇಕು. ಅಸುಂಡಿ ಶಾಲೆಯಲ್ಲಿ ಕಲಿತ ಅನೇಕ ವಿದ್ಯಾಥಿರ್ಗಳು ಇಂದು ಉನ್ನತ ಹುದ್ದೆಗಳನ್ನು ಅಲಂಕರಿಸಿರುವುದು ಈ ಶಾಲೆಯ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ. ಇದು ನಮ್ಮೆಲ್ಲರ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆಯ ಅಭೀವೃದ್ಧಿ ವಿಭಾಗದ ಉಪನಿರ್ದೇಶಕ ಕೆ.ಡಿ. ಬಡಿಗೇರ ಮಾತನಾಡಿ, ಸರ್ಕಾರಿ ಶಾಲೆಗಳ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಒಂದು ಮಗುವೂ ಸರ್ಕಾರಿ ಶಾಲೆಯಿಂದ ಖಾಸಗಿ ಶಾಲೆಗೆ ಹೋಗದಂತೆ ನೋಡಿಕೊಳ್ಳಬೇಕು. ವಿದ್ಯಾಥಿರ್ಗಳೇ ಸರ್ಕಾರಿ ಶಾಲೆಗಳ ಜೀವಾಳ. ಮಕ್ಕಳು ಇದ್ದರೆ ಶಿಕ್ಷಕರು ಇರುತ್ತಾರೆ. ಇಲ್ಲದಿದ್ದರೆ ಯಾರೂ ಇರುವುದಿಲ್ಲ ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾಥಿರ್ಗಳಿಗೆ ಉಚಿತ ಪಠ್ಯಪುಸ್ತಕಗಳು ಹಾಗೂ ಸಮವಸ್ತ್ರಗಳನ್ನು ವಿತರಿಸಲಾಯಿತು. ಶಿವಕುಮಾರ ಕುರಿ, ವಿ. ವಿ. ನಡುವಿನಮನಿ, ಡಿ. ಎಚ್​. ಪರಂಗಿ, ಜೆ. ಎ. ಭಾವಿಕಟ್ಟಿ, ರವಿ ಪ್ರಕಾಶ, ಬಿ. ಎಫ್​. ಪೂಜಾರ, ವಿ. ಎಂ. ಹಿರೇಮಠ, ರವಿರಾಜ ಪವಾರ, ಗೀತಾ ಕುಲಕಣಿರ್, ವಿ. ಎಫ್​. ಕಲಕುಂಬಿ, ಶಂಕರ ಹಡಗಲಿ, ಶೈಲಜಾ ಮಟ್ಟಿ ಇತರರು ಇದ್ದರು.