ಜಿಲ್ಲಾಧಿಕಾರಿ ಸಿ.ಎನ್​, ಶ್ರೀಧರ ಅವರು ಶಿವಾನಂದ ಶ್ರೀಗಳಿಗೆ ಎಸ್​ಐಆರ್​ ಎಮ್ಯೂನರೇಶನ್​ ವಿತರಿಸಿದರು. ಗಂಗಪ್ಪ ಎಂ, ಶ್ರೀನಿವಾಸ ಮೂತಿರ್, ವಸಂತ ಮಡ್ಲೂರ ಸೇರಿದಂತೆ ಇತರರು ಇದ್ದರು. 
ರಾಜ್ಯ

ಎಸ್​ಐಆರ್​ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ: ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ

ಶಿವಾನಂದ ಹಿರೇಮಠ
ವಿಜಯವಾಣಿ ಸುದ್ದಿಜಾಲ ಗದಗ
ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್​ಐಆರ್​) ಪ್ರಕ್ರಿಯೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ಸಕ್ರಿಯವಾಗಿ ಭಾಗವಹಿಸಿ ಮತದಾರರ ಪಟ್ಟಿಯನ್ನು ನಿಖರ ಹಾಗೂ ದೋಷ ರಹಿತವಾಗಿಸುವ ಕಾರ್ಯಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ ಹೇಳಿದರು.
ನಗರದ ವಿವಿಧ ಮಠಾಧೀಶರಿಗೆ ಎಸ್​ಐಆರ್​ ಎನ್ಯೂಮರೇಶನ್​ ನಮೂನೆಯನ್ನು ವಿತರಿಸಿ ಹಾಗೂ ಬಿಎಲ್​ಒ ಅವರುಗಳು ಎಸ್​ಐಆರ್​ ನೋಂದಣಿಯ ಪ್ರಕ್ರಿಯೆಗೆ ಮನೆ ಭೇಟಿಗೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಸ್​ಐಆರ್​ ಪ್ರಕ್ರಿಯೆಯ ಉದ್ದೇಶ, ಮಹತ್ವ ಹಾಗೂ ಅನುಸರಿಸಬೇಕಾದ ಕ್ರಮಗಳ ಕುರಿತು ಅರಿತುಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ಹೆಸರುಗಳ ನಿಖರತೆ ಕಾಪಾಡುವುದು, ಅರ್ಹ ಮತದಾರರ ಹೆಸರು ಸೇರ್ಪಡೆ, ಅನರ್ಹ ಅಥವಾ ಪುನರಾವತಿರ್ತ ಹೆಸರುಗಳ ತಿದ್ದುಪಡಿ ಹಾಗೂ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವುದು ಎಸ್​ಐಆರ್​ ಪ್ರಕ್ರಿಯೆಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಪ್ರತಿಯೊಬ್ಬ ನಾಗರಿಕರು ತಮ್ಮ ಮಾಹಿತಿಯನ್ನು ಸರಿಯಾಗಿ ಪರಿಶೀಲಿಸಿ ಅಗತ್ಯವಿದ್ದರೆ ಎಸ್​ಐಆರ್​ ನಮೂನೆಗಳನ್ನು ಭತಿರ್ ಮಾಡಿ ಸಂಬಂಧಿಸಿದ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಬೇಕು. ಇದರಿಂದ ಪಾರದರ್ಶಕ ಹಾಗೂ ವಿಶ್ವಾಸಾರ್ಹ ಮತದಾರರ ಪಟ್ಟಿ ಸಿದ್ಧಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಧಾಮಿರ್ಕ, ಸಾಮಾಜಿಕ ಹಾಗೂ ಸಾರ್ವಜನಿಕ ಸಂಸ್ಥೆಗಳ ಮುಖಂಡರು ಜನರಲ್ಲಿ ಎಸ್​ಐಆರ್​ ಕುರಿತು ಅರಿವು ಮೂಡಿಸುವ ಕಾರ್ಯದಲ್ಲಿ ಕೈಜೋಡಿಸಬೇಕು. ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಪ್ರಜಾಪ್ರಬೂತ್ವವನ್ನು ಮತ್ತಷ್ಟು ಬಲಪಡಿಸಬೇಕು. ಜೂ.30 ರಿಂದ ಜು.29 ರವರೆಗೆ ಬಿಎಲ್​ಒ ಗಳು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಹಾಗೂ ಪರಿಶೀಲನೆ ನಡೆಸಲಿದ್ದಾರೆ. ನಂತರ ಆ. 5 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಆಯೋಗದ ಮಾರ್ಗ ಸೂಚಿಯಂತೆ 2002ರ ಮತದಾರರ ಪಟ್ಟಿಯನ್ನು ಮಾನದಂಡವಾಗಿ ಇಟ್ಟುಕೊಂಡು, ಪ್ರಸ್ತುತ ಇರುವ 2025ರ ಮತದಾರರ ಪಟ್ಟಿಯೊಂದಿಗೆ ಹೋಲಿಕೆ ಹಾಗೂ ಮ್ಯಾಪಿಂಗ್​ ಪ್ರಕ್ರಿಯೆ ನಡೆಸಲಾಗಿದೆ. ಬೂತ್​ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಿಲ್ಲೆಯಲ್ಲಿ ಈಗಾಗಲೇ ಶೇ 94ಕ್ಕೂ ಅಧಿಕ ನೈಜ ಮತದಾರರನ್ನು ಗುರುತಿಸಿ, ಕುಟುಂಬಗಳ ಲಿಂಕೇಜ್​ನೊಂದಿಗೆ ಹೊಂದಾಣಿಕೆ ಮಾಡಲಾಗಿದೆ ಎಂದರು.
ಅ. 7 ರಂದು ಅಂತಿಮ ಮತಪಟ್ಟಿ ಪ್ರಕಟ:
ಮನೆ ಗಣತಿ ನಂತರ ಆ. 5 ರಂದು ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು. ಮತದಾರ ಪಟ್ಟಿಗೆ ಆಕ್ಷೇಪಣೆ ಸಲ್ಲಿಕೆಗೆ ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರು ಅ. 3 ಒಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಸಾರ್ವಜನಿಕರಿಂದ ಬರುವ ಆಕ್ಷೇಪಣೆಗಳ ಇತ್ಯರ್ಥದ ನಂತರ, ಅ. 7 ರಂದು ಅಂತಿಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು. ನಂತರ ಈಗ ಜಾರಿಯಲ್ಲಿರುವ ಎಲ್ಲಾ ಮತದಾರರ ಪಟ್ಟಿಗಳು ಸಂರ್ಪೂಣವಾಗಿ ರದ್ದಾಗಲಿದ್ದು ಪರಿಷತ ಮತದಾರರ ಪಟ್ಟಿ ಮಾತ್ರ ಊಜಿರ್ವಾಗುತ್ತದೆ ಎಂದರು.
ಅಗತ್ಯ ದಾಖಲೆ ಪಡೆದು ಮತಪಟ್ಟಿಗೆ ಸೇರ್ಪಡೆ.
ಕುಟುಂಬದ ಮುಖ್ಯಸ್ಥರ ಹೆಸರು 2002ರ ಮತದಾರರ ಪಟ್ಟಿಯಲ್ಲಿದ್ದರೆ, ಹೊಸದಾಗಿ ಅರ್ಹತೆ ಪಡೆಯುವ ಕುಟುಂಬದ ಇತರೆ ಸದಸ್ಯರ ಹೆಸರನ್ನು ಸೇರ್ಪಡೆ ಮಾಡುವುದು ಸುಲಭವಾಗುತ್ತದೆ. ಮದುವೆಯಾಗಿ ಅಥವಾ ವಲಸೆ ಬಂದು ಇಲ್ಲಿ ನೆಲೆಸಿರುವವರ ಹೆಸರು ಹಳೆಯ ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ ಅವರಿಗೆ ಫ್ಯಾಮಿಲಿ ಲಿಂಕೇಜ್​ ಸಿಗುವುದಿಲ್ಲ. ಈ ಹಿಂದೆ ಅವರು ವಾಸವಾಗಿದ್ದ ಸ್ಥಳದಲ್ಲಿನ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇದ್ದರೆ, ಆ ಮಾಹಿತಿ ಅನುಸಾರ ಹೆಸರು ಸೇರ್ಪಡೆ ಮಾಡಬಹುದು. ಮ್ಯಾಪಿಂಗ್​ ಆಗದೆ ಇರುವವರು ಮನೆ ಗಣತಿ ಫಾರಂ ಜೊತೆ ಚುನಾವಣಾ ಆಯೋಗ ನಿಗದಿಪಡಿಸಿದ ಕೇಂದ್ರ ಅಥವಾ ರಾಜ್ಯ ಸರ್ಕಾರದ ಗುರುತಿನ ಚೀಟಿ, ಪಿಂಚಣಿ ಆದೇಶ ಅಥವಾ ಗುರುತಿನ ಚೀಟಿ, ಜು.1 1987ಕ್ಕಿಂತ ಮೊದಲು ಭಾರತದಲ್ಲಿ ಸರ್ಕಾರಿ, ಸ್ಥಳಿಯ ಪ್ರಾಧಿಕಾರ, ಬ್ಯಾಂಕ್​,ಅಂಚೆ ಕಚೇರಿ, ಎಲ್​ಐಸಿ ಉದ್ಯಮಗಳಿಂದ ನೀಡಲಾದ ಯಾವುದೇ ಗುರುತಿನ ಚೀಟಿ, ಪ್ರಮಾಣ ಪತ್ರ ಅಥವಾ ದಾಖಲೆ, ಜನನ ಪ್ರಮಾಣ ಪತ್ರ, ಪಾಸ್​ಪೋರ್ಟ, ಶೈಕ್ಷಣಿಕ ಪ್ರಮಾಣ ಪತ್ರ, ಶಾಶ್ವತ ನಿವಾಸ ಪ್ರಮಾಣ ಪತ್ರ, ಅರಣ್ಯ ಹಕ್ಕು ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ರಾಷ್ಟ್ರಿಯ ನಾಗರಿಕರ ನೋಂದಣಿ, ಕುಟುಂಬ ನೊಂದಣಿ, ಭೂಮಿ ಮನೆ ಹಂಚಿಕೆ ಪ್ರಮಾಣ ಪತ್ರ ಸಲ್ಲಿಸಬಹುದು. ಇದರೊಂದಿಗೆ ಆಧಾರ್​ ಕಾರ್ಡನ್ನು ಗುರುತಿನ ಪುರಾವೆಯಾಗಿ ಮಾತ್ರ ನೀಡಬಹುದು. ಇವುಗಳನ್ನು ಪಡೆದು ಮತಪಟ್ಟಿಗೆ ಸೇರಿಸಲು ಕ್ರಮ ವಹಿಸಲಾಗುವುದು ಎಂದರು.
ಈ ವೇಳೆ ಉಪವಿಭಾಗಾಧಿಕಾರಿ ಗಂಗಪ್ಪ ಎಂ, ತಹಸೀಲ್ದಾರ ಶ್ರೀನಿವಾಸ ಮೂತಿರ್, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಇತರರು ಇದ್ದರು.
ಬಾಕ್ಸ್​:
ನಗರದ ವಿರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರಿಗೆ, ಶಿವಾನಂದ ಮಠದ ಶಿವಾನಂದ ಶ್ರೀಗಳಿಗೆ, ಅಂತರಾಷ್ಟ್ರೀಯ ಕುಸ್ತಿಪಟು ಪ್ರೇಮಾ ಹುಚ್ಚನ್ನವರ ಸೇರಿದಂತೆ ವಿವಿಧ ಸಾಧಕರಿಗೆ ಮಂಗಳವಾರ ಜಿಲ್ಲಾಧಿಕಾರಿಗಳು ಎಸ್​ಐಆರ್​ ಮ್ಯೂನರೇಶನ್​ ವಿತರಿಸಿದರು.