ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾವಿರಾರು ಮಹಿಳೆಯರು ಹಾಜರಿದ್ದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಭಾನುವಾರ ಗದಗ ಕಾಟನ್ ಸೇಲ್ ಸೊಸೈಟಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಮಹಿಳೆಯರನ್ನು ಮಾತೃಭೂಮಿ ಎಂದು ಸಂಬೋಧಿಸುವ ಮೂಲಕ ಗೌರವಿಸುವ ಸಂಸತಿ ನಮ್ಮದಾಗಿದೆ. ವಿಶ್ವದಾದ್ಯಂತ ಮಹಿಳೆಯರಿಗೆ ಮಹತ್ವದ ಸ್ಥಾನಮಾನ ನೀಡಲಾಗುತ್ತಿದೆ. ಮಹಿಳೆ ಸಮಾಜದಲ್ಲಿ ಹಲವಾರು ರುಪಗಳಲ್ಲಿ ಕಾರ್ಯ ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾಳೆ ಎಂದರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 17 ವರ್ಷಗಳ ಕಾಲ ದೇಶವನ್ನು ಸಮರ್ಥವಾಗಿ ಮುನ್ನಡೆಸಿದ್ದಾರೆ. ಮಹಿಳೆಯರಲ್ಲಿ ಅಗಾಧ ಶಕ್ತಿ ಅಡಗಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕಿದೆ. ಮಹಿಳೆಯರ ಆಥಿರ್ಕ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. 2023ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ರಚನೆಗೆ ಮಹಿಳೆಯರು ಪ್ರಮುಖ ಕಾರಣರಾಗಿದ್ದಾರೆ. ಇದಕ್ಕಾಗಿ ಮಹಿಳೆಯರ ಕಲ್ಯಾಣಕ್ಕೆ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಅವು ನಿರಂತರವಾಗಿ ಮುಂದುವರಿಯುತ್ತವೆ. ರಾಜ್ಯದಲ್ಲಿ ಸುಮಾರು 1.20 ಕೋಟಿ ಕುಟುಂಬಗಳ ಆಥಿರ್ಕ ಅಭಿವೃದ್ಧಿಗೆ ಈ ಯೋಜನೆಗಳು ಸಹಾಯಕವಾಗಿವೆ ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಮಹಿಳೆ ಮಗಳಾಗಿ, ಸಹೋದರಿಯಾಗಿ, ಹೆಂಡತಿಯಾಗಿ, ತಾಯಿಯಾಗಿ, ಸೊಸೆಯಾಗಿ, ಅತ್ತೆಯಾಗಿ ಹಾಗೂ ಅಜ್ಜಿಯಾಗಿ ಹಲವು ಹೊಣೆಗಾರಿಕೆಗಳನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾಳೆ. ಚುನಾವಣೆಗೂ ಮೊದಲು ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳೊಳಗೆ ಜಾರಿಗೆ ತಂದಿದೆ. ಗದಗ ಜಿಲ್ಲೆಗೆ ಗೃಹಲಕ್ಷಿ$್ಮ ಯೋಜನೆಯಡಿ 1135 ಕೋಟಿ ರೂ., ಅನ್ನಭಾಗ್ಯ ಯೋಜನೆಯಡಿ 216 ಕೋಟಿ ರೂ., ಶಕ್ತಿ ಯೋಜನೆಯಡಿ 475 ಕೋಟಿ ರೂ., ಯುವನಿಧಿ ಯೋಜನೆಯಡಿ 15 ಕೋಟಿ ರೂ. ಸೇರಿದಂತೆ ಒಟ್ಟು 2130 ಕೋಟಿ ರೂ.ಗಳ ಅನುದಾನ ಗ್ಯಾರಂಟಿ ಯೋಜನೆಗಳ ಮೂಲಕ ಬಂದಿದೆ ಎಂದು ಮಾಹಿತಿ ನೀಡಿದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಮಂದಾಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಗೃಹಲಕ್ಷಿ$್ಮ ಯೋಜನೆಯಡಿ ಪ್ರತಿ ತಿಂಗಳು ಗದಗ ತಾಲೂಕಿಗೆ ಸುಮಾರು 30 ಕೋಟಿ ರೂ. ಅನುದಾನ ಬರುತ್ತಿದೆ. ಈ ಯೋಜನೆಗಳಿಂದ ಮಹಿಳೆಯರ ವಾಷಿರ್ಕ ತಲಾ ಆದಾಯವು 2 ಲಕ್ಷ ರೂ.ಗಿಂತ ಹೆಚ್ಚು ಹೆಚ್ಚಳವಾಗಿದ್ದು, ಇದರಿಂದ ಮಹಿಳೆಯರ ಆಥಿರ್ಕ ಸದೃಢತೆ ಸಾಧ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಾತನಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬಚಿರ್, ಸಿದ್ದು ಪಾಟೀಲ, ಪ್ರಕಾಶ ಆಕಳವಾಡಿ, ನೀಲಮ್ಮ ಬೋಳನವರ, ಶಕುಂತಲಾ ಅಕ್ಕಿ, ಸೋಮನಕಟ್ಟಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಸಹಾಯಕ ಆಯುಕ್ತ ಗಂಗಪ್ಪ, ಜಿ.ಪಂ ಉಪಕಾರ್ಯದಶಿರ್ ಸಿ.ಆರ್. ಮುಂಡರಗಿ, ಎಂ.ವಿ. ಚಳಗೇರಿ, ಪದ್ಮಾವತಿ ಜಿ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.
* ಗದಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ
* ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಆಥಿರ್ಕ ಸ್ವಾವಲಂಬನೆ ಸಚಿವ ಎಚ್.ಕೆ. ಪಾಟೀಲ
* ಗದಗ ಜಿಲ್ಲೆಗೆ ಗ್ಯಾರಂಟಿ ಯೋಜನೆಗಳ ಮೂಲಕ 2130 ಕೋಟಿ ಅನುದಾನ
* ಮಹಿಳೆಯರ ವಾಷಿರ್ಕ ತಲಾ ಆದಾಯದಲ್ಲಿ 2 ಲಕ್ಷಗಿಂತ ಹೆಚ್ಚಳ
* ಫಲಾನುಭವಿಗಳಿಂದ ಗ್ಯಾರಂಟಿ ಪ್ರಯೋಜನಗಳ ಹಂಚಿಕೆ.