ಗಂಗಮ್ಮದೇವಿ ಜಾತ್ರಾ ಮಹೋತ್ಸವ ಸಂಪನ್ನ festival 
ರಾಜ್ಯ

ಗಂಗಮ್ಮದೇವಿ ಜಾತ್ರಾ ಮಹೋತ್ಸವ ಸಂಪನ್ನ festival

ಬೂದಿಕೋಟೆ: ಹೋಬಳಿಯ ಗುಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ಕೊತ್ತೂರು ಕೃಷ್ಣಾಪುರ ಗ್ರಾಮದಲ್ಲಿ ನಾಲ್ಕನೇ ವರ್ಷದ ಗಂಗಮ್ಮ ದೇವಿ ಜಾತ್ರಾ ಮಹೋತ್ಸವವು ಅದ್ದೂರಿಯಾಗಿ ನೆರವೇರಿತು. festival
ಜಾತ್ರಾ ಮಹೋತ್ಸವದ ಪ್ರಯುಕ್ತ ಮುಂಜಾನೆಯಿಂದಲೇ ಹೋಮ-ಹವನ, ವಿಶೇಷ ಪೂಜೆ, ಪುಷ್ಪಾಲಂಕಾರ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಭಕ್ತರು ದೇವಿಯ ದರ್ಶನ ಪಡೆದರು.
ಜಾತ್ರೆಯ ಪ್ರಮುಖ ಆಕರ್ಷಣೆಯಾಗಿ ಗುಲ್ಲಹಳ್ಳಿ, ಗೊಡಗಮಂದೆ, ದೊಡ್ಡೂರು ಸೇರಿದಂತೆ ವಿವಿಧ ಗ್ರಾಮಗಳ 11 ದೇವರುಗಳನ್ನು ಆಹ್ವಾನಿಸಲಾಗಿತ್ತು. ಒಟ್ಟು 12 ದೇವರುಗಳೊಂದಿಗೆ ಐದು ಊರುಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಡೊಳ್ಳು, ತಮಟೆ ಹಾಗೂ ವಿವಿಧ ಜಾನಪದ ವಾದ್ಯಗಳ ಮೊಳಗಿನೊಂದಿಗೆ ನಡೆದ ಮೆರವಣಿಗೆಯು ನೋಡುಗರ ಗಮನ ಸೆಳೆಯಿತು.
ಜಾತ್ರಾ ಮಹೋತ್ಸವ ಅಂಗವಾಗಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು.
ಗ್ರಾಮದ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಶಾಸಕರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಇದೇ ವೇಳೆ ’ಐ ಮಸ್ಟ್ ಲೈಟೋ’ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಯಿತು. ಜಾತ್ರೆಗೆ ಬಂದಿದ್ದ ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಗಿತ್ತು.