ಎಸ್ಸೆನ್ನೆನ್ಗೆ ಸಚಿವ ಸ್ಥಾನ ನೀಡುವಂತೆ ಗಾಣಿಗ ಸಮುದಾಯ ಒತ್ತಾಯ ministerial
ಬಂಗಾರಪೇಟೆ: ಬಂಗಾರಪೇಟೆ ಮೀಸಲು ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡುವಂತೆ ಗಾಣಿಗ ಸಮುದಾಯ ಒತ್ತಾಯಿಸಿದೆ.ministerial
ನಗರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಭಾನುವಾರ ಸಮುದಾಯದಿಂದ ಹಮ್ಮಿಕೊಂಡಿದ್ದ ಬೆಂಬಲ ಸಭೆಯಲ್ಲಿ ಕ್ಷೇತ್ರದಲ್ಲಿ ಮೂಲಸೌಕರ್ಯ, ಶಿಕ್ಷಣ, ಕುಡಿಯುವ ನೀರು ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತವಾಗಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.
ಮುಖಂಡ ಬೂದಿಕೋಟೆ ಎ.ಬಾಬು ಮಾತನಾಡಿ, ಪಕ್ಷದ ಕಷ್ಟಕಾಲದಲ್ಲೂ ಸಂಘಟನೆ ಬಲಪಡಿಸಿ, ಕಾರ್ಯಕರ್ತರನ್ನು ಒಗ್ಗೂಡಿಸುವ ಮೂಲಕ ಕ್ಷೇತ್ರವನ್ನು ಪಕ್ಷದ ಭದ್ರಕೋಟೆಯನ್ನಾಗಿ ರೂಪಿಸುವಲ್ಲಿ ನಾರಾಯಣಸ್ವಾಮಿ ಅವರ ಪಾತ್ರ ಮಹತ್ತರವಾದುದ್ದು. ಜನಪರ ಹಾಗೂ ಅಭಿವೃದ್ಧಿ ಪರ ಚಿಂತನೆಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅವರು ಪಕ್ಷದ ನಿಷ್ಠಾವಂತ ಕಟ್ಟಾಳಾಗಿದ್ದು, ಸಚಿವ ಸ್ಥಾನ ದೊರೆತರೆ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಕೊಡುಗೆ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.