Get involved in cultural activities too.
prathiba kranji ಹುಲಿಯೂರುದುರ್ಗ: ಓದುವ ತೆಗೆ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ ಎಂದು ಶಾಸಕ ಡಾ.ರಂಗನಾಥ್ ತಿಳಿಸಿದರು.
ಪಟ್ಟಣದ ಹೊಸಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣ ಮಾಡಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ. ತಂದೆ ತಾಯಿ ಹಾಗೂ ಶಿಕ್ಷಕರ ಮಾರ್ಗದರ್ಶನದಲ್ಲಿ ನಿಮ್ಮಲ್ಲಿರುವ ಪ್ರತಿಭೆ ಗುರುತಿಸುವಂತಾಗಲಿ. ಎಲ್ಲರೂ ಓದಿನಷ್ಟೆ ಇತರೆ ಚಟುವಟಿಕೆಗಳಿಗೆ ಮಹತ್ವ ನೀಡಿ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬೋರೇಗೌಡ ಮಾತನಾಡಿ, ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಸರ್ಕಾರದಿಂದ ಅನುದಾನ ನೀಡುವುದು ಕಡಿಮೆ ಆದರೆ ಸ್ಥಳಿಯರ ನೆರವಿನೊಂದಿಗೆ ಹಾಗೂ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಮಕ್ಕಳಲ್ಲಿನ ಗುಪ್ತ ಪ್ರತಿಭೆ ಅನಾವರಣಗೊಳಿಸುವ ಹಾಗೂ ಅವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.
ತಹಸೀಲ್ದಾರ್ ಯು.ರಶ್ಮಿಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಪ್ರತಿಭಾ ಕಾರಂಜಿ ಒಂದು ಅದ್ಬುತ ಕಾರ್ಯಕ್ರಮ. ತಮ್ಮ ಪ್ರತಿಭೆಯನ್ನು ತೊರ್ಪಡಿಸುವ ಮೂಲಕ ತಾಲೂಕಿನ ಮಕ್ಕಳು ಜಿಲ್ಲಾ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ತಾಲೂಕಿಗೆ ಕೀರ್ತಿ ತರಬೇಕು ಎಂದರು.
ಕಾರ್ಯಕ್ರಮದಲ್ಲಿ ಅಯೋಧ್ಯೆ ಬಾಲ ರಾಮನ, ಮಾಹಾ ಕಾಳಿ ವೇಷಭೂಷಣ ತೊಟ್ಟಿದ್ದ ಮಕ್ಕಳು ಗಮನ ಸೆಳೆದರು.