ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಿ extracurricular activities
- ಪ್ರೋತ್ಸಾಹಧನ ವಿತರಣೆ
- ಆರಕ್ಷಕ ವೃತ್ತ ನಿರೀಕ್ಷಕ ಡಿ.ಎಚ್.ಮುನಿಕೃಷ್ಣ ಹೇಳಿಕೆ
ಗುಡಿಬಂಡೆ: ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ ಸೇರಿ ಸಾಂಸತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಆರಕ್ಷಕ ವೃತ್ತ ನಿರೀಕ್ಷಕ ಡಿ.ಎಚ್.ಮುನಿಕೃಷ್ಣ ತಿಳಿಸಿದರು.extracurricular activities
ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಸಭಾಂಗಣದಲ್ಲಿ ಶನಿವಾರ ಮುತ್ತೂಟ್ ೈನಾನ್ಸ್ಯಿಂದ ಬಾಗೇಪಲ್ಲಿ& ಗುಡಿಬಂಡೆ ತಾಲೂಕಿನ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶಾಲೆಯಲ್ಲಿ ಕಳೆದ ಸಮಯ ಮತ್ತೆ ಬರುವುದಿಲ್ಲ. ಪ್ರತಿ ನಿಮಿಷವನ್ನು ವ್ಯರ್ಥ ಮಾಡದೇ ಸದುಪಯೋಗ ಪಡಿಸಿಕೊಂಡು ಗುರಿಯೊಂದಿಗೆ ಮುನ್ನಡೆಯಬೇಕು ಎಂದರು.
ಬಾಗೇಪಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯ ಸಾಮರ್ಥ್ಯವನ್ನುಉತ್ತಮ ಪಡಿಸಿಕೊಳ್ಳಬೇಕು. ಅಲ್ಲದೆ ಶಿಸ್ತು, ಸಂಯಮ ಮೈಗೂಡಿಸಿಕೊಂಡು ಭವಿಷ್ಯದ ದಾರಿ ಉತ್ತಮಗೊಳಿಸಿಕೊಳ್ಳಬೇಕು ಎಂದರು.
ಮುತ್ತೂಟ್ ೈನಾನ್ಸ್ ಸಂಸ್ಥೆ ಸಿಎಸ್ಆರ್ ಮುಖ್ಯಸ್ಥ ಮಹೇಶ್ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚಾಗಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಾರೆ. ಅಲ್ಲಿನ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅಲ್ಲಿ ಸೌಲಭ್ಯಗಳು ಸರಿಯಾಗಿ ಇರುವುದಿಲ್ಲ. ಹಾಗಾಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಕೊಠಡಿಗಳು, ಗ್ರಂಥಾಲಯಗಳು, ಪರಿಸರ ಅಭಿವೃದ್ಧಿ ಸೇರಿ ಇನ್ನಿತರ ಸೌಲಭ್ಯಗಳನ್ನು ಒದಗಿಸುತ್ತೀದ್ದೇವೆ. ವಿದ್ಯಾಭ್ಯಾಸಕ್ಕೆ ನಾವು ಎಲ್ಲ ರೀತಿಯ ಪ್ರೋತ್ಸಾಹ ನೀಡಲು ಸಿದ್ಧರಿದ್ದೇವೆ. ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಶೇ.90 ಅಂಕ ಗಳಿಸಿದರೆ ಅಂತಹವರಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಸಲ್ಲಿಸಬಹುದಾಗಿದೆ ಎಂದರು.
ಗುಡಿಬಂಡೆ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಕುಮಾರಿ, ನವೀನ್ ಮಾತನಾಡಿದರು.