ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ 
ರಾಜ್ಯ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗೆ ಶಿಕ್ಷೆ ಪ್ರಕಟ

ಪ್ರಮುಖ ಮುಖ್ಯಾಂಶಗಳು

  • ಬಾಲಕಿಗೆ ಲೈಂಗಿಕ ದೌರ್ಜನ್ಯ
  • ಅಪರಾಧಿಗೆ ಶಿಕ್ಷೆ ಪ್ರಕಟ
  • ಕಿತ್ತೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 5 ವರ್ಷ ಶಿಕ್ಷೆ ಪ್ರಕಟ
ಬೆಳಗಾವಿ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಿತ್ತೂರು ತಾಲೂಕಿನ ದಾಸ್ತಿಕೊಪ್ಪ ಗ್ರಾಮದ ನಿವಾಸಿ ಅಕ್ಷಯ ಯಲ್ಲಪ ರಾವಳೆ( ೨೩),ಅಪರಾಧಿಗೆ ೫ ವರ್ಷ ಕಾರಾಗೃಹ ಶಿಕ್ಷೆ ಹಾಗೂ ೧೦ ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ.

ಬಾಲಕಿಯನ್ನು ಅಪರಾಧಿಯು ೨೦೨೨ ರಲ್ಲಿ ಅಪಹರಣ ಮಾಡಿ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಬಾಲಕವೆಸಗಿ,ಜೀವ ಬೆದರಿಕೆಯೊಡ್ಡಿದ ಕುರಿತು ಕಿತ್ತೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದೂರು ದಾಖಲಿಸಿಕೊಂಡ ತನಿಖಾಧಿಕಾರಿ ಮಹಾಂತೇಶ ಹೊಸಪೇಟ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,ವಿಶೇಷ ಶೀಘ್ರಗತಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪಿಸಿದ ಶಿಕ್ಷೆ ವಿಧಿಸಿ ತೀರ್ಪು ಹೇಳಿದ.ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 1 ಲಕ್ಷ.ರೂ ಧನ ನೀಡುವಂತೆ ಆದೇಶ ನೀಡಲಾಗಿದೆ.ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.