ಇಂಡಿ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ ಮಾತನಾಡಿದರು. ಅಜೀತ ಧನಶೆಟ್ಟಿ, ಇಲಿಯಾಸ ಬೋರಾಮಣಿ, ಪ್ರಶಾಂತ ಕಾಳೆ, ನಿರ್ಮಲಾ ತಳಕೇರಿ, ಶೈಲಜಾ ಜಾಧವ ಇತರರಿದ್ದರು. 
ರಾಜ್ಯ

ಇಂಡಿ ಮತಕ್ಷೇತ್ರಕ್ಕೆ ಸಚಿವ ಸ್ಥಾನ ನೀಡಿ

ಪ್ರಮುಖ ಮುಖ್ಯಾಂಶಗಳು

  • ನಿಂಬೆ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ ಆಗ್ರಹ
  • ಸಾಮೂಹಿಕ ರಾಜೀನಾಮೆಗೆ ಸಿದ್ಧ
ಇಂಡಿ: ಸಚಿವ ಸಂಪುಟದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಇಲ್ಲದಿದ್ದರೆ ಪಕ್ಷದ ಎಲ್ಲ ಪದಾಧಿಕಾರಿಗಳು ಸರ್ಕಾರದ ನಾಮ ನಿರ್ದೇಶಿತ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡುವುದಾಗಿ ರಾಜ್ಯ ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ ಹೇಳಿದರು.
ನಗರದಲ್ಲಿ ಮಂಗಳವಾರ ಬೃಹತ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇಂಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಜೀತ ಧನಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಇಲಿಯಾಸ ಬೋರಾಮಣಿ ಮಾತನಾಡಿ, ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸಂಘಟಿಸಿ ಜಿಪಂ, ತಾಪಂ ಪುರಸಭೆ ಸೇರಿ ಎಲ್ಲ ಕಡೆ ಮುಂಚೂಣಿ ತಂದಿದ್ದಾರೆ. 1957ರಿಂದ ಇಂಡಿಗೆ ಒಮ್ಮೆ ಕೂಡ ಸಚಿವ ಸ್ಥಾನ ದೊರೆತಿಲ್ಲ. ಈ ಬಾರಿ ನೀಡದಿದ್ದರೆ ಎಲ್ಲ ಪಕ್ಷದ ಅಧಿಕಾರದಲ್ಲಿ ಇದ್ದವರು ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದರು.
ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಪ್ರಶಾಂತ ಕಾಳೆ, ಕಾಂಗ್ರೆಸ್ ಮಹಿಳಾ ವಿಭಾಗದ ಅಧ್ಯಕ್ಷೆ ನಿರ್ಮಲಾ ತಳಕೇರಿ ಮತ್ತು ಹಿರೇಬೇವನೂರ ಗ್ರಾ.ಪಂ ಅಧ್ಯಕ್ಷೆ ಶೈಲಜಾ ಜಾಧವ ಮಾತನಾಡಿ, ಮೂರು ಬಾರಿ ಜಿಪಂ ಸದಸ್ಯರಾಗಿ, ಜಿಪಂ ಅಧ್ಯಕ್ಷರಾಗಿ ಹಾಗೂ ಮೂರು ಬಾರಿ ಶಾಸಕರಾಗಿ ಕಾರ್ಯ ನಿರ್ವಹಿಸಿ ಅಪಾರ ಆಡಳಿತ ಅನುಭವ ಮತ್ತು ಜನಸೇವೆಯ ಪರಿಪಕ್ವತೆ ಗಳಿಸಿದ್ದಾರೆ.
ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕತ್ವ, ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಹಾಗೂ ಗಡಿನಾಡಿನ ಅಭಿವೃದ್ಧಿ ಕುರಿತು ಅವರ ಬದ್ಧತೆ ಸದಾ ಶ್ಲಾಘನೀಯವಾಗಿದ್ದು ಅವರಿಗೆ ಸಚಿವ ಸ್ಥಾನ ನೀಡಿದರೆ ಮತ್ತಷ್ಟು ಅಭಿವೃದ್ಧಿ ಕಾರ್ಯ ಮಾಡಲು ಸಹಕಾರಿಯಾಗಲಿದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಸಿದ್ದಣ್ಣ ಬೂದಿಹಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಯೋಗಪ್ಪ ಜೊತಗೊಂಡ, ಪುರಸಭೆ ಮಾಜಿ ಅಧ್ಯಕ್ಷ ಶ್ರೀಕಾಂತ ಕುಡಿಗನೂರ, ಸಣ್ಣಪ್ಪ ತಳವಾರ, ಜಾವೇದ ಮೋಮಿನ ಮಾತನಾಡಿದರು.
ಪುರಸಭೆ ಮಾಜಿ ಅಧ್ಯಕ್ಷ ಭೀಮನಗೌಡ ಪಾಟೀಲ, ರವೀಂದ್ರ ನಿಗಡಿ, ಭೀಮಾಶಂಕರ ಮೂರಮನ, ರುದ್ರು ಅಲಗೊಂಡ, ಮಹಿಬೂಬ ಅರಬ, ಜಟ್ಟೆಪ್ಪ ರವಳಿ, ಪಾಪು ಕಿತ್ತಲಿ, ಮಲ್ಲನಗೌಡ ಪಾಟೀಲ, ಸಂತೋಷ ಪರಶೇನವರ, ಸದಾಶಿವ ಪ್ಯಾಟಿ, ಶಿವಯೋಗಪ್ಪ ಜೋತಗೊಂಡ, ಶಿವಯೋಗಪ್ಪ ಚನ್ನಗೊಂಡ ಇತರರಿದ್ದರು.