ಪ್ರೋತ್ಸಾಹಧನ ಹೆಚ್ಚಳ ಸೇರಿ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಕಲಬುರಗಿ ಡಿಸಿ ಕಚೇರಿ ಎದುರು ಶುಕ್ರವಾರ ಬೃಹತ್​ ಪ್ರತಿಭಟನೆ ನಡೆಸಿದರು. ಶಿವಲಿಂಗಮ್ಮ ನಂದೂರು, ಗೀತಾ ಬಡಗೇರ, ನಾಗಮಣಿ ಚಿಂಚೋಳಿ, ತಾಯಮ್ಮ ನರಬೋಳ, ಸುಗಂಧ, ನಾಗಮ್ಮ, ಭಾರತಿ, ದೇವಮ್ಮ, ಸಂಗೀತ ಸಾವಳಗಿ, ವಿಜಯಲಕ್ಷಿ$್ಮ ಇತರರಿದ್ದರು. 
ರಾಜ್ಯ

ಗೌರವಧನ 15 ಸಾವಿರ ರೂ. ಕೊಡಿ

ಪ್ರಮುಖ ಮುಖ್ಯಾಂಶಗಳು

  • ಸಿಡಿದೆದ್ದ ಆಶಾ ಕಾರ್ಯಕರ್ತೆಯರು
  • ಕಲಬುರಗಿಯಲ್ಲಿ ಬೃಹತ್​ ಪ್ರತಿಭಟನಾ ಮೆರವಣಿಗೆ
ಕಲಬುರಗಿ: ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಮತ್ತು ರಾಜ್ಯ ಸರ್ಕಾರದ ಗೌರವಧನ ಒಟ್ಟಿಗೆ ಸೇರಿಸಿ ಮಾಸಿಕ 15 ಸಾವಿರ ರೂ.ಗೌರವಧನ ನೀಡುವುದೂ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂ ಜಿಲ್ಲಾ ಟಕದ ಪದಾಧಿಕಾರಿಗಳು, ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರದಿಂದ ಮಾರ್ಚ್​ ಬಜೆಟ್​ನಲ್ಲಿ ಗೌರವಧನ 5 ರಿಂದ 8 ಸಾವಿರ ರೂ.ಗೆ ಹೆಚ್ಚಿಸಬೇಕು, ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು, ತೀವ್ರತರ ರೋಗಗಳ ಚಿಕಿತ್ಸಾ ವೆಚ್ಚಕ್ಕಾಗಿ ಕಾರ್ಪಸ್​ ಫಂಡ್​ ಮಾಡಿ, ಚಿಕಿತ್ಸಾ ವೆಚ್ಚ ಮರುಪಾವತಿಗೆ ವ್ಯವಸ್ಥೆ ಮಾಡಬೇಕು, ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಚೇತರಿಕೆ ಅವಧಿಯಲ್ಲಿ (ಮೂರು ತಿಂಗಳು) ಮಾಸಿಕ ನಿಶ್ಚಿತ ಗೌರವಧನ ಪಾವತಿ ಮಾಡಬೇಕು ಎಂದು ಬಜೆಟ್​ ಪೂರ್ವ ಹಕ್ಕೊತ್ತಾಯ ಮಾಡಿದರು.
ಕೇಂದ್ರದ ಮಾರ್ಗಸೂಚಿ ಉಲ್ಲಂಸಿ ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರನ್ನು ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರನ್ನು ಕೈಬಿಡುವ ಪ್ರಕ್ರಿಯೆ ನಿಲ್ಲಿಸಬೇಕು, ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು, ಆಶಾ ಸುಗಮಕಾರರಿಗೆ 2024&25ರಲ್ಲಿ ಹೆಚ್ಚಳ ಆದ ಗೌರವಧನ (6000&7500) ಒಂದು ವರ್ಷದ ಬಾಕಿ ಮಾಸಿಕ 1500ರಂತೆ ನೀಡಬೇಕು, ಆಶಾ ಕಾರ್ಯಕರ್ತೆಯರು ಕೆಲಸ ಮಾಡಿದಷ್ಟು ಕೇಂದ್ರದ ಪ್ರೋತ್ಸಾಹಧನ ಬರುತ್ತಿಲ್ಲ. ಈ ಸಮಸ್ಯೆಗೆ ಪರಿಹಾರ ನೀಡಬೇಕು, ಆಶಾಗಳಿಗೆ ತಕ್ಷಣ ಬಾಕಿ ಪ್ರೋತ್ಸಾಹಧನ ನೀಡಬೇಕು, ಹಲವಾರು ವರ್ಷಗಳಿಂದ ಬಾಕಿ ಇರುವ ವಿವಿಧ ಕಾಂಪೋನೆಂಟ್​ ಹಣ ಬಿಡುಗಡೆ ಮಾಡಬೇಕು, ರಾಜ್ಯ ಸರ್ಕಾರದ ಗ್ಯಾರಂಟಿ ಸರ್ವೆ ಮಾಡಿದ್ದಕ್ಕೆ ನಿಗದಿಯಾಗಿದ್ದ 1000 ರೂ. ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಮಾದರಿಯಲ್ಲಿ ಆಶಾ ಕಾರ್ಯಕರ್ತೆಯರಿಗೂ ಒಂದು ಸಾವಿರ ರೂ. ಹೆಚ್ಚಳ ಮಾಡುವ ಭರವಸೆ ನೀಡಲಾಗಿತ್ತು. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. 5000 ರೂ. ಗೌರವಧನ 8 ಸಾವಿರ ರೂ.ಗೆ ಹೆಚ್ಚಿಸುವ ಭರವಸೆಯೂ ಈಡೇರಿಲ್ಲ. ಆಶಾ ಕಾರ್ಯಕರ್ತೆಯರನ್ನು ಕೈಬಿಡುವುದಾಗಿ ಹೊರಡಿಸಿರುವ ಆದೇಶ ಕೇಂದ್ರ ಸರ್ಕಾರದ ಮಾರ್ಗಸೂಚಿ ಉಲ್ಲಂನೆಯಾಗಿದೆ. ದೇಶದ ಯಾವ ರಾಜ್ಯದಲ್ಲೂ ಹೀಗೆ ಮಾಡಿಲ್ಲ ಎಂದು ವ್ಯಂಗ್ಯವಾಡಿದರು.
ಜಗತ್​ ವೃತ್ತದಿಂದ ಮುಖ್ಯರಸ್ತೆ, ಸರ್ದಾರ್​ ಪಟೇಲ್​ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್​ ಮೆರವಣಿಗೆ ನಡೆಸಿದರು. ಜಿಲ್ಲಾ ಗೌರವಾಧ್ಯಕ್ಷ ವಿ.ಜಿ.ದೇಸಾಯಿ, ಜಿಲ್ಲಾಧ್ಯಕ್ಷೆ ಶಿವಲಿಂಗಮ್ಮ ನಂದೂರು, ಕಾರ್ಯದರ್ಶಿ ಗೀತಾ ಬಡಗೇರ, ರಾವೇಂದ್ರ ಎಂ.ಜಿ, ಶರಣು ದೇವಕರ್​, ನಾಗಮಣಿ ಚಿಂಚೋಳಿ, ತಾಯಮ್ಮ ನರಬೋಳ, ಸುಗಂಧ, ನಾಗಮ್ಮ, ಭಾರತಿ, ದೇವಮ್ಮ, ಸಂಗೀತ ಸಾವಳಗಿ, ವಿಜಯಲಕ್ಷಿ$್ಮ ಸೇರಿ ಸಾವಿರಾರು ಆಶಾ ಕಾರ್ಯಕರ್ತೆಯರು ಖಡಕ್​ ಬಿಸಿಲು ಲೆಕ್ಕಿಸದೆ ಪಾಲ್ಗೊಂಡಿದ್ದರು.
"

ಮೇಲ್ವಿಚಾರಕರಾಗಿ ಹತ್ತು ವರ್ಷಗಳಿಂದ ಕಾರ್ಯನಿರ್ವಹಿಸಿದ ಸುಗಮಕಾರರನ್ನು ಮತ್ತೆ ಮರುನೇಮಕ ಮಾಡುವ ಭರವಸೆ ಈವರೆಗೂ ಈಡೇರಿಲ್ಲ. ಇಲಾಖೆಯ ರ್ನಿಲಕ್ಷವೇ ಇದಕ್ಕೆ ಕಾರಣ. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಅರ್ನಿದಿಷ್ಟಾವಧಿ ಹೋರಾಟ ಕೈಗೊಳ್ಳಬೇಕಾಗುತ್ತದ ಎಂದು ಎಚ್ಚರಿಸಿದರು.

ವಿ.ಜಿ.ದೇಸಾಯಿ,

ಗೌರವಾಧ್ಯಕ್ಷ, ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂ.