ಎಂ. ಕೃಷ್ಣಪ್ಪ ಅಥವಾ ಪ್ರಿಯಕೃಷ್ಣಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ 
ರಾಜ್ಯ

ಎಂ. ಕೃಷ್ಣಪ್ಪ ಅಥವಾ ಪ್ರಿಯಕೃಷ್ಣಗೆ ಸಚಿವ ಸ್ಥಾನ ಕೊಡಿ: ರಾಜ್ಯ ಒಕ್ಕಲಿಗರ ಒಕ್ಕೂಟ ಒತ್ತಾಯ-ministerial position

ಬೆಂಗಳೂರು: ರಾಜ್ಯದ ಹೊಸ ಸಿಎಂ ಆಗಿರುವ ಡಿ.ಕೆ.ಶಿವಕುಮಾರ್‌ಗೆ ಅಭಿನಂದನೆ ಸಲ್ಲಿಸಿರುವ ರಾಜ್ಯ ಒಕ್ಕಲಿಗರ ಒಕ್ಕೂಟ, ಈ ಬಾರಿಯಾದರೂ ಶಾಸಕರಾದ ಎಂ. ಕೃಷ್ಣಪ್ಪ ಅಥವಾ ಪ್ರಿಯಕೃಷ್ಣಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದೆ.
ವಿಜಯನಗರ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಹಾಗೂ ಗೋವಿಂದರಾಜನಗರ ಕ್ಷೇತ್ರದ ಶಾಸಕ ಪ್ರಿಯಕೃಷ್ಣ ಜನಪರ ಕಾಳಜಿಯುಳ್ಳ ಪ್ರಾಮಾಣಿಕ ರಾಜಕಾರಣಿಯಾಗಿದ್ದು, ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ, ಇವರನ್ನು ಪರಿಗಣಿಸಲಿಲ್ಲ. ಡಿ.ಕೆ.ಶಿವಕುಮಾರ್‌ಗೆ ಸಂಪುಟದಲ್ಲಿ ಇವರಿಗೆ ಸೂಕ್ತ ಸ್ಥಾನಮಾನ ಸಿಗಬೇಕು ಎಂದು ಒಕ್ಕೂಟದ ಅಧ್ಯಕ್ಷ ಸಿ.ವಿ. ದೇವರಾಜ್ ಹೇಳಿದ್ದಾರೆ.
ಇವರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಿದರೆ ರಾಜಧಾನಿಯಲ್ಲಿ ಕಾಂಗ್ರೆಸ್​ ಸಂಘಟನೆಗೆ ಇನ್ನಷ್ಟು ಬಲ ಸಿಗಲಿದೆ. ಜತೆಗೆ, ಸಿಲಿಕಾನ್ ಸಿಟಿಯಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಕ್ಕೆ ಅನುಕೂಲವಾಗಲಿದೆ ಎಂದರು.