ಗುಂಡ್ಲುಪೇಟೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ‘ಸಂಘಟನ್ ಸೃಜನ್ ಅಭಿಯಾನ್’ ಕಾರ್ಯಕ್ರಮದಲ್ಲಿ ಗಣೇಶ್ ಪ್ರಸಾದ್ ಮಾತನಾಡಿದರು. ಬಿ.ಎಂ.ಮುನಿರಾಜು, ರಾಜಶೇಖರ್, ಎಚ್.ಎಸ್. ನಂಜುಂಡಪ್ರಸಾದ್, ಎಚ್.ಎಸ್.ನಂಜಪ್ಪ, ಅಣ್ಣಯ್ಯಸ್ವಾಮಿ, ನಾಜಿಮುದ್ದೀನ್, ಲೋಕೇಶ್ ಇದ್ದರು. 
ರಾಜ್ಯ

ಕಾಂಗ್ರೆಸ್ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಿ

ಗುಂಡ್ಲುಪೇಟೆ: ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ‘ಸಂಘಟನ್ ಸೃಜನ್ ಅಭಿಯಾನ್’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆಲವೇ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮಪಂಚಾಯಿತಿಗಳ ಚುನಾವಣೆ ಎದುರಾಗಲಿದೆ. ಆದ್ದರಿಂದ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಬೇಕಾಗಿದೆ. ಮಾಜಿ ಶಾಸಕ ನಿರಂಜನಕುಮಾರ್ ಹಾಗೂ ಬೆಂಬಲಿಗರು ಕ್ಷೇತ್ರದ ಹೊರಗಿನ ಮುಖಂಡರನ್ನು ಕರೆತಂದು ಅಭಿವೃದ್ದಿ ಕಾರ್ಯಗಳ ಬಗ್ಗೆ ವಿನಾಕಾರಣ ಅಪಪ್ರಚಾರ ಮಾಡುವ ಮೂಲಕ ಜನತೆಯನ್ನು ದಾರಿತಪ್ಪಿಸುತ್ತಿದ್ದಾರೆ. ಆದರೆ ತಾವು ಶಾಸಕರಾದ ನಂತರ ಸರ್ಕಾರದಿಂದ ಅನುದಾನ ತಂದು ದಿ.ಮಹದೇವಪ್ರಸಾದ್ ಅವರ ಹಾದಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಟೌನ್‌ನಲ್ಲಿ 88 ಕೋಟಿ ರೂ. ವೆಚ್ಚದಲ್ಲಿ ಯುಜಿಡಿ ನಿರ್ಮಿಸುವ ಡಿಪಿಆರ್ ಆಗಿದ್ದು ಸದ್ಯದಲ್ಲಿಯೇ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಕೇರಳದ ಮಾಜಿ ಶಾಸಕ ಶಬರೀನಾಥನ್ ಮಾತನಾಡಿ, ತಳಮಟ್ಟದಿಂದ ಕಾಂಗ್ರೆಸ್ ಸಂಘಟಿಸಲಾಗುತ್ತಿದ್ದು, ಹಲವಾರು ವರ್ಷಗಳಿಂದ ಆಯಕಟ್ಟಿನ ಸ್ಥಳಗಳಲ್ಲಿರುವ ಪದಾಧಿಕಾರಿಗಳನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಲಾಗುವುದು. ಆದ್ದರಿಂದ ಬ್ಲಾಕ್ ಕಾಂಗ್ರೆಸ್ ಮಟ್ಟದಲ್ಲಿ ಪಕ್ಷದ ಕೆಲಸಮಾಡಲು ಆಸಕ್ತಿಯಿರುವ ಯುವಕರು ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಎಂ.ಮುನಿರಾಜು, ರಾಜಶೇಖರ್, ಚಾಮುಲ್ ನಿರ್ದೇಶಕ ಎಚ್.ಎಸ್. ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಪುರಸಭೆ ಮಾಜಿ ಉಪಾಧ್ಯಕ್ಷ ಅಣ್ಣಯ್ಯಸ್ವಾಮಿ, ಮುಖಂಡರಾದ ನಾಜಿಮುದ್ದೀನ್, ಲೋಕೇಶ್ ಇತರರಿದ್ದರು.