ಜಮೀರ್ಗೆ ಡಿಸಿಎಂ ಸ್ಥಾನ ನೀಡಿ DCM
ಶಿಡ್ಲಘಟ್ಟ: ಜಮೀರ್ ಅಹ್ಮದ್ ಖಾನ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕೆಂದು ಆಗ್ರಹಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.DCM
ನಗರದ ಅಮೀರ್ಬಾಬಾ ದರ್ಗಾದಿಂದ ಕಾಂಗ್ರೆಸ್ ಭವನದವರೆಗೂ ಮೆರವಣಿಗೆ ನಡೆಸಿದ ಕಾರ್ಯಕರ್ತರು ಜಮೀರ್ ಅಹ್ಮದ್ ಖಾನ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿ ಜನಸೇವೆ ಮಾಡಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಮೆರವಣಿಗೆಯಲ್ಲಿ ಜಮೀರ್ ಅಹ್ಮದ್ ಖಾನ್ ಭಾವಚಿತ್ರದ ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಹರಿಪ್ರಸಾದ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್ ರ್ಖಗೆ ಅವರು ಮುಸ್ಲಿಂ ಸಮುದಾಯದ ಪರವಾಗಿ ಜಮೀರ್ ಅಹ್ಮದ್ ಖಾನ್ ಅವರನ್ನು ಡಿಸಿಎಂ ಮಾಡಲಿ ಎಂದು ಆಗ್ರಹಿಸಿದರು.