ಕಲಬುರಗಿ ಸರ್ಕಾರಿ ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್​ ನ್ಯಾಯಾಧೀಶ ಶ್ರೀನಿವಾಸ ನವಲೆ ಚಾಲನೆ ನೀಡಿದರು. ಡಾ.ಸವಿತಾ ತಿವಾರಿ, ಡಾ.ಶರಣಬಸಪ್ಪ ಕ್ಯಾತನಾಳ್​, ಡಾ.ರವಿಕಾಂತಿ ಕ್ಯಾತನಾಳ, ಡಾ.ಮಹಮ್ಮದ್​ ಇರ್ಫಾನ್​ ಇತರರಿದ್ದರು. 
ರಾಜ್ಯ

ಮಾದಕ ವ್ಯಸನ ಬಿಡಿ ಆರೋಗ್ಯ ಕಾಪಾಡಿಕೊಳ್ಳಿ

ಪ್ರಮುಖ ಮುಖ್ಯಾಂಶಗಳು

  • ಹಿರಿಯ ಸಿವಿಲ್​ ನ್ಯಾಯಾಧೀಶ ಶ್ರೀನಿವಾಸ ನವಲೆ ಹೇಳಿಕೆ
  • ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮ
ಕಲಬುರಗಿ: ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ಉತ್ತಮ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವ ಮೂಲಕ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್​ ನ್ಯಾಯಾಧೀಶ ಶ್ರೀನಿವಾಸ ನವಲೆ ಹೇಳಿದರು.
ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ), ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕಾಲೇಜಿನ ಡಾ.ಬಿ.ಆರ್​. ಅಂಬೇಡ್ಕರ್​ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ದುಷ್ಪರಿಣಾಮ ಬೀರಲಿದೆ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಕಾನೂನಿನ ಅರಿವಿನೊಂದಿಗೆ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ರವಿಕಾಂತಿ ಎಸ್​.ಕ್ಯಾತನಾಳ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ.ಮಹಮ್ಮದ್​ ಇರ್ಫಾನ್​ ಮಹಾಗಾವಿ ಅವರು ಮಾನಸಿಕ ಆರೋಗ್ಯ, ಒತ್ತಡ ನಿರ್ವಹಣೆ, ಮಾದಕ ವ್ಯಸನದ ದುಷ್ಪರಿಣಾಮ ಹಾಗೂ ಅವುಗಳಿಂದ ಹೊರಬರುವ ಮಾರ್ಗಗಳ ಕುರಿತು ಮಾಹಿತಿ ನೀಡಿದರು.
ಸರ್ಕಾರಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸವಿತಾ ತಿವಾರಿ ಅಧ್ಯಕ್ಷತೆ ವಹಿಸಿದ್ದರು. ಡಾ.ಮಲ್ಲೆಶಪ್ಪ ಕುಂಬಾರ, ಡಾ.ವಿಜಯಕುಮಾರ ಸಾಲಿಮನಿ, ಡಾ.ರಾಜಕುಮಾರ ಸಲಗರ, ಡಾ.ದೌಲಪ್ಪ ಬಿ.ಎಚ್​, ಡಾ.ಟಿ.ವಿ.ಅಡಿವೇಶ, ಡಾ.ರವೀಂದ್ರಕುಮಾರ ಭಂಡಾರಿ, ಡಾ.ಶ್ರೀಮಂತ ಹೋಳ್ಕರ್​, ಡಾ.ಚಂದ್ರಕಾಂತ ಜಮಾದಾರ, ಐಕ್ಯೂಎಸಿ ಸಂಚಾಲಕ ಮಹೇಶ, ಅಜಯಸಿಂಗ್​ ತಿವಾರಿ ಹಾಗೂ ವಿಜಯಲಕ್ಷ್ಮೀ ಉಪಸ್ಥಿತರಿದ್ದರು.
ಜಗದೇವಪ್ಪ, ಡಾ.ಮಂಜುನಾಥ ರೆಡ್ಡಿ, ಡಾ.ಶೈಲಜಾ, ಡಾ.ನಾಗಪ್ಪ ಗೋಗಿ, ಡಾ.ಶಂಕರ ರಾಠೋಡ್​ ಇತರರಿದ್ದರು. ಡಾ.ಶಾಮಲಾ ಸ್ವಾಮಿ ಪ್ರಾರ್ಥಿಸಿದರು. ಡಾ.ಮೀನಾ ಕೆ.ಸಿ ಸ್ವಾಗತಿಸಿದರು. ಡಾ.ಬಸಂತ ಸಾಗರ ವಂದಿಸಿದರು. ಡಾ.ಬಲಭೀಮ ಸಾಂಗ್ಲಿ ನಿರೂಪಿಸಿದರು.
"

ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಇಂದಿನ ಅಗತ್ಯ. ಸಮಸ್ಯೆಗಳನ್ನು ಮುಚ್ಚಿಡದೆ ತರ ಸಲಹೆ ಪಡೆಯುವ ಮನೋಭಾವ ಬೆಳೆಸಿಕೊಳ್ಳಬೇಕು.

— ಡಾ.ಶರಣಬಸಪ್ಪ ಕ್ಯಾತನಾಳ, ಜಿಲ್ಲಾ ಆರೋಗ್ಯಾಧಿಕಾರಿ, ಕಲಬುರಗಿ.