ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನದ ಗಟ್ಟಿ ಪತ್ತೆಯಾಗಿರುವುದು.
ಬೆಂಗಳೂರು ಗ್ರಾಮಾಂತರ : ದೇಹದ ಖಾಸಗಿ ಭಾಗದಲ್ಲಿ ಚಿನ್ನ ಇರಿಸಿಕೊಂಡು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಬಾಂಗ್ಲಾದೇಶದ ಐವರು ಆರೋಪಿಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿ, ಸುಮಾರು ಐದು ಕೋಟಿ ರೂ. ಮೌಲ್ಯದ 3.356 ಕೆ.ಜಿ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಸ್ಥಳಿಯರ ಸಹಕಾರದೊಂದಿಗೆ ಚಿನ್ನ ಕಳ್ಳಸಾಗಣೆ ಮಾಡಲು ಮುಂದಾಗಿದ್ದರು ಎಂಬುದು ಗೊತ್ತಾಗಿದೆ. ಇತ್ತೀಚೆಗೆ ಕೆಐಎಎಲ್ನ ರ್ಟಮಿನಲ್ &2 ರ ಮೂಲಕ ಅಂತಾರಾಷ್ಟ್ರೀಯಮಟ್ಟದ ಕಳ್ಳಸಾಗಣೆಯ ಗ್ಯಾಂಗ್ ಚಿನ್ನವನ್ನು ಕಳ್ಳಸಾಗಣೆ ಮಾಡಲು ಮುಂದಾಗಿದೆ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದು, ಚಿನ್ನದ ಗಟ್ಟಿ ಹಾಗೂ ಕ್ಯಾಪ್ಸುಲ್ ಆಕಾರದ ಪ್ಯಾಕೆಟ್ಗಳಲ್ಲಿ ಪೇಸ್ಟ್ ರೂಪದಲ್ಲಿದ್ದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.
ಚಿನ್ನವನ್ನು ದೇಹದ ವಿವಿಧ ಅಂಗಗಳಲ್ಲಿ ಮರೆಮಾಚಿಕೊಂಡು ಶೌಚಗೃಹಗಳು ಮತ್ತು ಧೂಮಪಾನ ವಲಯಗಳಂತಹ ಸ್ಮೂ ಪ್ರದೇಶಗಳಲ್ಲಿ ಪಾಸ್ಕೋಡ್ ಬಳಸಿಕೊಂಡು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನವನ್ನು ವರ್ಗಾಯಿಸಲು ಮುಂದಾಗಿದ್ದರು. ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.