ಸಂಡೂರು ತಾಲೂಕು ತುಮಟಿ ಗ್ರಾಮದಲ್ಲಿ ನಡೆದ ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಸಂಘದ ಜಿಲ್ಲಾ ಉಪಾಧ್ಯಕ್ಷೆ ಎಂ.ಶಾಂತಿ, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಉಪಾಧ್ಯಕ್ಷೆ ನಾಗರತ್ನ, ಸದಸ್ಯೆ ವಿದ್ಯಾ, ಗ್ರಾಮಸ್ಥರಿದ್ದರು. 
ರಾಜ್ಯ

ಸರ್ಕಾರಿ ಶಾಲೆ ವಿಲೀನ ಸಲ್ಲ

JAGADEESH KUMBAR
ಸಂಡೂರು: ಡಿ.ಅಂತಪುರದಲ್ಲಿ ಆರಂಭವಾಗಲಿರುವ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಸರ್ಕಾರಿ ಶಾಲೆ ವಿಲೀನ ವಿರೋಧಿಸಿ ತುಮಟಿಯಲ್ಲಿ ಎಐಡಿಎಸ್‌ಒ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು. 
ಎಐಡಿಎಸ್‌ಒ ಜಿಲ್ಲಾ ಉಪಾಧ್ಯಕ್ಷೆ ಎಂ.ಶಾಂತಿ ಮಾತನಾಡಿ, ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದೆ. ಇದರಿಂದಾಗಿ ಬಡವರ ಮಕ್ಕಳು ಓದುವ ಗ್ರಾಮೀಣ ಪ್ರದೇಶದಲ್ಲಿನ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ನಮ್ಮೂರ ಸರ್ಕಾರಿ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ ಎಂದರು.  
ಗ್ರಾಮಸ್ಥ ಶ್ರೀನಿವಾಸ್ ಮಾತನಾಡಿ, ಊರಿನಲ್ಲಿ ಸರ್ಕಾರಿ ಶಾಲೆ ಇರುವುದರಿಂದ ಮಕ್ಕಳು ಶಾಲೆಗೆ ಹೋಗಿ ಬರುತ್ತಾರೆ ಎಂದು ಪಾಲಕರು  ನೆಮ್ಮದಿಯಿಂದ ಕೂಲಿ ಕೆಲಸಕ್ಕೆ ಹೋಗುತ್ತಾರೆ.
 ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ನಮ್ಮ ಊರಿನ ಶಾಲೆ ಮುಚ್ಚಿದರೆ 7ಕಿ.ಮೀ.ದೂರದಲ್ಲಿರುವ ಡಿ.ಅಂತಾಪುರ ಶಾಲೆಗೆ ನಮ್ಮ ಮಕ್ಕಳನ್ನು ಸೇರಿಸಲು ಸಾಧ್ಯವಾಗುವುದಿಲ್ಲ ಎಂದರು.