ಹೊಸಕೋಟೆ ತಾಲೂಕು ಮಾಕನಹಳ್ಳಿ ಸರ್ಕಾರಿ ಶಾಲೆಯ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಿಸಲಾಯಿತು. ದಾನಿಗಳಾದ ಬಾಬು ಪ್ರಕಾಶ್ ಇದ್ದರು.
ಹೊಸಕೋಟೆ : ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣದ ಜತೆಗೆ ಕಲಿಕೆಗೆ ಅಗತ್ಯವಾಗಿರುವ ಎಲ್ಲ ಸೌಲಭ್ಯಗಳು ಉಚಿತವಾಗಿ ಸಿಗುತ್ತಿದ್ದು, ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಸಿಲುಕದೆ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ದಾಖಲಿಸಬೇಕು ಎಂದು ಸಮಾಜ ಸೇವಕ, ದಾನಿಬಾಬು ಪ್ರಕಾಶ್ ಅಭಿಪ್ರಾಯಪಟ್ಟರು.
ತಾಲೂಕಿನ ಮಾಕನಹಳ್ಳಿ ಸರ್ಕಾರಿ ಶಾಲೆಯ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಅತ್ಯುತ್ತಮ ಶಿಕ್ಷಕ ವರ್ಗವಿದ್ದು, ಮಕ್ಕಳ ಸರ್ವತೋಮುಖ ಕಲಿಕೆಗೆ ಪೂರಕವಾಗಿರುವ ಎಲ್ಲ ಚಟುವಟಿಕೆಗಳು ಸಿಗುತ್ತಿವೆ. ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಗಣ್ಯರು ಸಕಾರಿ ಶಾಲೆಗಳಲ್ಲಿ ಓದಿ ಉತ್ತಮ ಸ್ಥಾನಕ್ಕೆ ತಲುಪಿದ್ದಾರೆ. ಇದನ್ನು ಅರಿತುಕೊಂಡು ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು ಎಂದರು
ಗ್ರಾಪಂ ಮಾಜಿ ಸದಸ್ಯ ಮಧುಕುಮಾರ್ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮಾಜದ ಸಹಕಾರ ಅತ್ಯಗತ್ಯವಾಗಿದ್ದು, ಮಕ್ಕಳ ಶಿಕ್ಷಣಕ್ಕೆ ನೆರವಾಗುತ್ತಿರುವ ಬಾಬು ಪ್ರಕಾಶ್ ಅವರ ಸೇವೆ ಶ್ಲಾಘನೀಯವಾಗಿದೆ. ಬಾಬು ಪ್ರಕಾಶ್ ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಾರದಲ್ಲಿ ಒಂದು ದಿನ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ವೃತ್ತಿಪರ ಹಾಗೂ ಕೌಶಲಾಧಾರಿತ ಕಲಿಕೆಯ ವಿಶೇಷ ತರಗತಿನಡೆಸುತ್ತಿದ್ದು, ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ನಿರಂತರವಾಗಿ ಸಹಕಾರ ನೀಡುತ್ತಿದ್ದಾರೆ.ಇವರ ಸೇವೆ ಸ್ಮರಣೀಯವಾಗಿದೆ ಎಂದರು
ಎಸ್ಡಿಎಂಸಿ ಅಧ್ಯಕ್ಷೆ ಲೀಲಾ, ಸದಸ್ಯೆ ಭಾಗ್ಯಲಕ್ಷಿ$್ಮ, ಸಹ ಶಿಕ್ಷಕಿ ಪಿ.ಜೆ.ವಿಜಯ, ಅತಿಥಿ ಶಿಕ್ಷಕಿ ಹೇಮಲತಾ, ಸಹ ಶಿಕ್ಷಕ ಮಹಾಂತೇಶ್, ಎಸ್ಡಿಎಂಸಿ ಸದಸ್ಯೆ ನಗೀನಾ ಇದ್ದರು.