- ಮೆಟ್ರೋ ಟಿಕೆಟ್ ದರ ಹೆಚ್ಚಳ ಪ್ರಸ್ತಾವನೆ: ಸರ್ಕಾರದ ಒಪ್ಪಿಗೆ ಬಾಕಿ ಇದೆಯೇ?
- ಮೆಟ್ರೋ ದರ ಏರಿಕೆ ಬಗ್ಗೆ ನಮ್ಮ ಅಭಿಪ್ರಾಯ ಕೇಳಿಲ್ಲ: ಬಿಎಂಆರ್‌ಸಿಎಲ್ ನಡೆಗೆ ಡಿಕೆಶಿ ಅಸಮಾಧಾನ.
- ಸಿಎಂ ಹುದ್ದೆ ಹಂಚಿಕೆ ವಿಚಾರ; ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು: ಡಿಸಿಎಂ
ಮಂಗಳೂರು: "ಮೆಟ್ರೋ ದರ ಬಗ್ಗೆ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಇದರ ಮುಖ್ಯಸ್ಥರು. ಮೆಟ್ರೋ ದರ ಏರಿಕೆ ವಿಚಾರವಾಗಿ ನಮ್ಮ ಅಭಿಪ್ರಾಯವನ್ನು ಕೇಳಿಲ್ಲ" ಎಂದು ಡಿಸಿಎಂ ಡಿಕೆ ಶಿವಕುಮಾರ್(DK Shivakumar )ತಿಳಿಸಿದರು.
ಮಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು."ನಾನು ಬೆಂಗಳೂರಿಗೆ ಮರಳಿದ ಬಳಿಕ ಈ ಬಗ್ಗೆ ಚರ್ಚೆ ಮಾಡುವೆ. ಜನರಿಗೆ ತೊಂದರೆ ನೀಡಲು ನಮಗೆ ಇಷ್ಟವಿಲ್ಲ. ಆರ್ಥಿಕ ಸ್ಥಿತಿಗತಿ ಪರಿಶೀಲನೆ ಮಾಡುತ್ತೇನೆ" ಎಂದು ತಿಳಿಸಿದರು.
ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು
ನೀವು ಸಿಎಂ ಆಗಬೇಕು ಎಂಬ ಕನಸು ಜನರಿಗಿದೆ ಎಂದು ಕೇಳಿದಾಗ, "ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ನಿಮಗೂ (ಮಾಧ್ಯಮ) ಇದೆ. ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು" ಎಂದು ತಿಳಿಸಿದರು.ದಲಿತ ಸಂಘಟನೆಗಳು ಪರಮೇಶ್ವರ್ ಅವರು ಸಿಎಂ ಆಗಬೇಕು ಎಂದು ಆಸೆ ಪಟ್ಟಿರುವ ಬಗ್ಗೆ ಕೇಳಿದಾಗ, "ಅವರವರ ಅಭಿಮಾನಿಗಳು ಆಸೆ ಪಡುತ್ತಾರೆ. ಅದನ್ನು ನಾನು ಬೇಡ ಎಂದು ಹೇಳಲು ಆಗುವುದಿಲ್ಲ" ಎಂದರು.
ರಾಜ್ಯ ಬಜೆಟ್ ಬಳಿಕ ಅಧಿಕಾರ ಹಂಚಿಕೆ ಆಗುವುದೇ ಎಂದು ಕೇಳಿದಾಗ, "ಸಮಯವೇ ಉತ್ತರ ನೀಡಲಿದೆ" ಎಂದರು.