ರಾಜ್ಯ

ಬೃಹತ್​ ರಾಷ್ಟ್ರೀಯ ಲೋಕ ಅದಾಲತ್​ ಜು.11ಕ್ಕೆ

ಪ್ರಮುಖ ಮುಖ್ಯಾಂಶಗಳು

  • ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್​.ಬಿ.ರೆಹಮಾನ್​ ಮಾಹಿತಿ
ಬೀದರ್​: ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜು.11ರಂದು ಜಿಲ್ಲಾದ್ಯಂತ ಬೃಹತ್​ ರಾಷ್ಟ್ರೀಯ ಲೋಕ ಅದಾಲತ್​ ಹಾಗೂ ಜು.18ರಂದು ಮಧ್ಯಾಹ್ನ 2.30ಕ್ಕೆ ಎನ್​ಐ ಆ್ಯಕ್ಟ್​ ಪ್ರಕರಣಗಳ ಕುರಿತ ಲೋಕ ಅದಾಲತ್​ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಎಸ್​.ಬಿ. ರೆಹಮಾನ್​ ಹೇಳಿದರು.
ಬೃಹತ್​ ಲೋಕ ಅದಾಲತ್​ನಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ ಜೀವನಾಂಶ, ಚೆಕ್​ ಬೌನ್ಸ್​, ವಿದ್ಯುತ್​, ಕಂದಾಯ, ಅಪರಾಧಿಕ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತಹ, ಕಾರ್ಮಿಕರ, ಬ್ಯಾಂಕ್​ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಅವಕಾಶ ಇರುತ್ತದೆ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಳೆದ ಮಾರ್ಚ್​ನಲ್ಲಿ ನಡೆದಿದ್ದ ರಾಷ್ಟ್ರೀಯ ಲೋಕ ಅದಾಲತ್​ನಲ್ಲಿ ಜಿಲ್ಲೆಯ 66,440 ಪ್ರಕರಣಗಳು ಇತ್ಯರ್ಥಗೊಂಡಿವೆ. ಇದರಲ್ಲಿ 11,869 ಪೆಂಡಿಂಗ್​, 54571 ವ್ಯಾಜ್ಯಪೂರ್ವ ಪ್ರಕರಣಗಳಿವೆ. ಈ ಬಾರಿಯ ಅದಾಲತ್​ನಲ್ಲಿ ಬಾಕಿ ಇರುವ ಅತಿ ಹೆಚ್ಚು ಪ್ರಕರಣಗಳ ಇತ್ಯರ್ಥಕ್ಕೆ ಯೋಜನೆ ರೂಪಿಸಲಾಗಿದೆ. 30,499 ಪ್ರಕರಣ ಬಾಕಿ ಇದ್ದು, ಸಂಧಾನಕ್ಕಾಗಿ 1780 ಕೇಸ್​ ಗುರುತಿಸಲಾಗಿದ್ದು, ಇನ್ನಷ್ಟು ಹೆಚ್ಚು ಪ್ರಕರಣಗಳ ರಾಜಿ ಮಾಡುವ ಗುರಿ ಹೊಂದಲಾಗಿದೆ ಎಂದರು.
ಅದಾಲತ್​ನಲ್ಲಿ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವುದರಿಂದ ಕದಾರನಿಗೆ ನ್ಯಾಯಲಯ ಶುಲ್ಕ ವಾಪಸ್​ ಸಿಗಲಿದೆ. ಮೇಲ್ಮನವಿಗೆ ಅವಕಾಶ ಇರುವುದಿಲ್ಲ. ಇಬ್ಬರೂ ಪಕ್ಷಗಾರರು ತಮ್ಮ ದ್ವೇಷ ಮರೆತು ಸುಮಧುರ ಬಾಂಧವ್ಯ ಹೊಂದುವ ಅವಕಾಶವಿದೆ. ಹಾಗೆಯೇ ಖರ್ಚು&ವೆಚ್ಚ ಇಲ್ಲದೆ ಶ್ರೀದಲ್ಲಿ ಪ್ರಕರಣಗಳು ಇತ್ಯರ್ಥವಾಗಲಿವೆ. ಸಾರಿಗೆ ಇಲಾಖೆಯಲ್ಲಿ 1991ರಿಂದ 2022ರ ಅವಧಿ ಪ್ರಕರಣಗಳಿಗೆ ದಂಡದ ಮೊತ್ತದಲ್ಲಿ ಶೇ.50 ವಿನಾಯಿತಿ ನೀಡಲಾಗಿದೆ. ಸಾರ್ವಜನಿಕರು ಜೂ.26ರಿಂದ ಜು.10ರೊಳಗೆ ಈ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಹಿರಿಯ ಸಿವಿಲ್​ ನ್ಯಾಯಾಧೀಶ ರಾವೇಂದ್ರ ಉಪಧ್ಯೆ ಮಾತನಾಡಿ, ನ್ಯಾಯಾಲಯಗಳಲ್ಲಿ ಸುದೀರ್ ಕಾಲದಿಂದ ಬಾಕಿ ಮತ್ತು ರಾಜಿ ಮಾಡಿಕೊಳ್ಳಬಹುದಾದ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲು ರಾಷ್ಟ್ರೀಯ ಲೋಕ ಅದಾಲತ್​ ಅತ್ಯುತ್ತಮ ಅವಕಾಶವಾಗಿದೆ ಎಂದರು.